ಆ್ಯಪ್ನಗರ

ಪೊಲೀಸ್ ಕಾನ್ಸ್‌ಟೇಬಲ್‌ ಗರಿಷ್ಠ ವಯೋಮಿತಿ ಹೆಚ್ಚಳಕ್ಕೆ ಗ್ರೀನ್‌ ಸಿಗ್ನಲ್‌

ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಇರುವ ಪ್ರಸ್ತುತ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸುವ ಕ್ರಮಗಳಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ.

Vijaya Karnataka Web 30 Jun 2020, 5:26 pm
ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಇರುವ ಪ್ರಸ್ತುತ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸುವ ಕ್ರಮಗಳಿಗೆ ಗ್ರೀನ್‌ ಸಿಗ್ನಲ್‌ ಸಿಕ್ಕಿದೆ. ಪಿಸಿ ನೇಮಕಾತಿ ವಯೋಮಿತಿ ಹೆಚ್ಚಿಸಬೇಕು ಎಂದು ಹಲವು ಆಕಾಂಕ್ಷಿಗಳು 'ಫೋನ್‌ ಇನ್‌' ಕಾರ್ಯಕ್ರಮದಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಸಲ್ಲಿಸಿದ್ದಾರೆ.
Vijaya Karnataka Web karnataka police constable age limit
karnataka police constable age limit


ಧಾರವಾಡ, ಚಿತ್ರದುರ್ಗ, ಹಾಸನ, ದಾವಣಗೆರೆ, ಕಲ್ಬುರ್ಗಿ, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಭಾಗಗಳಿಂದ ಕರೆ ಮಾಡಿದ ಉದ್ಯೋಗ ಆಕಾಂಕ್ಷಿಗಳು, ' ಇತರೆ ರಾಜ್ಯಗಳಲ್ಲಿ ಈಗಾಗಲೇ ವಯೋಮಿತಿ ಹೆಚ್ಚಿಸಲಾಗಿದೆ. ನಮ್ಮ ರಾಜ್ಯದಲ್ಲಿ ಹೆಚ್ಚಿಸಲು ಏನು ಸಮಸ್ಯೆ ಇದೆ. ನಮ್ಮಲ್ಲೂ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 30 ವರ್ಷ ಹಾಗೂ ಹಿಂದುಳಿದ ವರ್ಗ, ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿಯನ್ನು 33 ವರ್ಷಕ್ಕೆ ನಿಗದಿ ಮಾಡಿ' ಎಂದು ಕೋರಿದರು.

ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆ ಆಕಾಂಕ್ಷಿಗಳ ಮನವಿಗೆ ಪ್ರತಿಕ್ರಿಯಿಸಿದ ಬೊಮ್ಮಾಯಿ ರವರು, 'ವಯೋಮಿತಿ ಹೆಚ್ಚಳ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆ ಚರ್ಚಿಸುತ್ತೇನೆ. ಬೇರೆ ರಾಜ್ಯಗಳಲ್ಲಿನ ವಯೋಮಿತಿ ಗಣನೆಗೆ ತೆಗೆದುಕೊಂಡು ತೀರ್ಮಾನ ತೆಗೆದುಕೊಳ್ಳಲಾಗುತ್ತದೆ' ಎಂದರು.

2672 KSRP ಪೊಲೀಸ್ ಕಾನ್ಸ್‌ಟೇಬಲ್ ನೇಮಕ: ಆನ್‌ಲೈನ್‌ ಅರ್ಜಿಗೆ ದಿನಾಂಕ ವಿಸ್ತರಣೆ

ಪ್ರಸ್ತುತ ಕರ್ನಾಟಕದಲ್ಲಿ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗೆ ಅರ್ಜಿ ಸಲ್ಲಿಸಲು ವಯೋಮಿತಿ ಅರ್ಹತೆಗಳನ್ನು ಈ ಕೆಳಗಿನಂತೆ ನಿಗದಿಪಡಿಸಲಾಗಿದೆ.

ಪೊಲೀಸ್ ಕಾನ್ಸ್‌ಟೇಬಲ್(ನಾಗರಿಕ) ಹುದ್ದೆಗಳಿಗೆ ವಯೋಮಿತಿ ಅರ್ಹತೆಗಳು

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 19 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಕೆಪಿಎಸ್‌ಸಿ ಇಂದ 3 ನೇಮಕಾತಿ ಅಧಿಸೂಚನೆ ವಾಪಸ್

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಸಿಎಆರ್‌/ಡಿಎಆರ್‌) ಹುದ್ದೆಗಳಿಗೆ ವಯೋಮಿತಿ ಅರ್ಹತೆಗಳು

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25 ವರ್ಷ, ಎಸ್‌ಸಿ / ಎಸ್‌ಟಿ / ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

ಕರ್ನಾಟಕದಲ್ಲಿ ಇತ್ತೀಚೆಗೆ ಪೊಲೀಸ್ ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗೆ ಗರಿಷ್ಠ ವಯೋಮಿತಿಯನ್ನು ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

SSLC, PUC ಆದವರಿಗೆ ಉದ್ಯೋಗಾವಕಾಶ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ