ಆ್ಯಪ್ನಗರ

ಬೆಂಗಳೂರು ಐಐಎಸ್‌ಸಿಯಲ್ಲಿ 85 ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್ ನೇಮಕ: ಪದವೀಧರರಿಂದ ಅರ್ಜಿ ಆಹ್ವಾನ

ಬೆಂಗಳೂರು ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್‌ ಸೈನ್ಸ್‌ ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್‌ ಹುದ್ದೆಗಳ ನೇಮಕಾತಿಗೆ ನೋಟಿಫಿಕೇಶನ್‌ ಪ್ರಕಟಿಸಿದೆ. ಈ ಹುದ್ದೆಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಿ.

Vijaya Karnataka Web 19 Oct 2020, 6:49 pm
ಬೆಂಗಳೂರು ಭಾರತೀಯ ವಿಜ್ಞಾನ ಸಂಸ್ಥೆಯು ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್‌ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್‌ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಹುದ್ದೆಗಳ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಬಹುದು.
Vijaya Karnataka Web ಬೆಂಗಳೂರು ಐಐಎಸ್‌ಸಿಯಲ್ಲಿ 85 ಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್ ನೇಮಕ: ಪದವೀಧರರಿಂದ ಅರ್ಜಿ ಆಹ್ವಾನ
bengaluru iisc recruitment 2020

ಹುದ್ದೆಯ ಹೆಸರುಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್‌
ಹುದ್ದೆಗಳ ಸಂಖ್ಯೆ 85

ಹುದ್ದೆಗಳ ಮೀಸಲಾತಿ ವಿವರ

ಸಾಮಾನ್ಯ ವರ್ಗದವರಿಗೆ 37, ಒಬಿಸಿ ಅಭ್ಯರ್ಥಿಗಳಿಗೆ 22, ಎಸ್‌ಸಿ ಅಭ್ಯರ್ಥಿಗಳಿಗೆ 13, ಎಸ್‌ಟಿ ಅಭ್ಯರ್ಥಿಗಳಿಗೆ 5, ಆರ್ಥಿಕವಾಗಿ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 8 ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ಹೈಕೋರ್ಟ್‌ ನೇಮಕಾತಿ 2020: ಕಾನೂನು ಕ್ಲರ್ಕ್ ಕಂ ಸಂಶೋಧನಾ ಸಹಾಯಕರ ಹುದ್ದೆಗೆ ಅರ್ಜಿ ಆಹ್ವಾನ

ವಿದ್ಯಾರ್ಹತೆ

ಶೇಕಡ.50 ಅಂಕಗಳೊಂದಿಗೆ ಯಾವುದೇ ಪದವಿ ಪಾಸ್‌ ಮಾಡಿರಬೇಕು ಹಾಗೂ ಕಂಪ್ಯೂಟರ್ ಆಪರೇಟಿಂಗ್ ಜ್ಞಾನ ಹೊಂದಿರಬೇಕು.

ವಯೋಮಿತಿ : ದಿನಾಂಕ 7-11-2020 ಕ್ಕೆ 26 ವರ್ಷ ವಯೋಮಿತಿ ಮೀರಿರಬಾರದು. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇರುತ್ತದೆ.

ವೇತನ ಶ್ರೇಣಿ : ಲೆವೆಲ್ 3 ಬೇಸಿಕ್ ಪೇ ರೂ.21,700 ಜತೆಗೆ ಇತರೆ ಭತ್ಯೆಗಳನ್ನು ನೀಡಲಾಗುತ್ತದೆ.

ತರಬೇತಿ ಅರ್ಧಕ್ಕೆ ಬಿಡುವ ಹಾಗಿಲ್ಲ; ಪೊಲೀಸ್ ಇಲಾಖೆ ಆದೇಶ

ಅಭ್ಯರ್ಥಿಗಳ ಆಯ್ಕೆ ವಿಧಾನ

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಪೈಕಿ ಶೇ.80 ಅಂಕಗಳನ್ನು ಮತ್ತು ಪದವಿ ಅಂಕಗಳ ಶೇಕಡ.20 ಅಂಕಗಳನ್ನು ಆಧರಿಸಿ ಮೆರಿಟ್ ಲಿಸ್ಟ್‌ ಸಿದ್ಧಪಡಿಸಿ ಅಭ್ಯರ್ಥಿಗಳ ಆಯ್ಕೆ ನಡೆಸಲಾಗುತ್ತದೆ.

ಅರ್ಜಿ ಶುಲ್ಕ ಎಷ್ಟು?

- ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ರೂ.800.

- ಇತರೆ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ ರೂ.400.

ಹಾಸನ ವ್ಯಾಪ್ತಿಯಲ್ಲಿನ ಆಯುಷ್ ಆಸ್ಪತ್ರೆಗಳಿಗೆ ವಿವಿಧ ಹುದ್ದೆಗಳ ನೇಮಕ

ಅರ್ಜಿ ಸಲ್ಲಿಕೆ ಹೇಗೆ?
ಬೆಂಗಳೂರು ಭಾರತೀಯ ವಿಜ್ಞಾನ ಸಂಸ್ಥೆಯ ವೆಬ್‌ಸೈಟ್‌ https://iisc.ac.in/positions-open/ ಗೆ ಭೇಟಿ ನೀಡಿ, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.

ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ: 07-11-2020

IISc Recruitment 2020 Notification

ಉದ್ಯೋಗ ವಿವರ

INR 21700 /Month
ಹುದ್ದೆಯ ಹೆಸರುಅಡ್ಮಿನಿಸ್ಟ್ರೇಟಿವ್ ಅಸಿಸ್ಟಂಟ್‌ ಹುದ್ದೆಗಳ ನೇಮಕ
ವಿವರಭಾರತೀಯ ವಿಜ್ಞಾನ ಸಂಸ್ಥೆಯಿಂದ ನೇಮಕಾತಿ ಅಧಿಸೂಚನೆ
ಪ್ರಕಟಣೆ ದಿನಾಂಕ2020-10-11
ಕೊನೆ ದಿನಾಂಕ2020-11-07
ಉದ್ಯೋಗ ವಿಧಪೂರ್ಣಾವಧಿ
ಉದ್ಯೋಗ ಕ್ಷೇತ್ರಶಿಕ್ಷಣ ಸಂಸ್ಥೆ ಉದ್ಯೋಗ
ವೇತನ ವಿವರ

ಕೌಶಲ ಮತ್ತು ಶೈಕ್ಷಣಿಕ ಅರ್ಹತೆ

ಕೌಶಲ--
ವಿದ್ಯಾರ್ಹತೆಯಾವುದೇ ಪದವಿ
ಕಾರ್ಯಾನುಭವ0 Year

ನೇಮಕಾತಿ ಸಂಸ್ಥೆ

ಸಂಸ್ಥೆಯ ಹೆಸರುಭಾರತೀಯ ವಿಜ್ಞಾನ ಸಂಸ್ಥೆ
ವೆಬ್‌ಸೈಟ್‌ ವಿಳಾಸhttps://iisc.ac.in/
ಸಂಸ್ಥೆ ಲೋಗೋ

ಉದ್ಯೋಗ ಸ್ಥಳ

ವಿಳಾಸಬೆಂಗಳೂರು
ಸ್ಥಳಬೆಂಗಳೂರು
ಪ್ರದೇಶಕರ್ನಾಟಕ
ಅಂಚೆ ಸಂಖ್ಯೆ560012
ದೇಶIND

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ