Please enable javascript.BMTC Conductor Recruitment 2024: 2500 ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಪ್ರಕಟ: ಅರ್ಹತೆ, ವೇತನ, ಆಯ್ಕೆ ವಿಧಾನ, ಅರ್ಜಿ ಲಿಂಕ್ ಇಲ್ಲಿದೆ - bengaluru metropolitan transport corporation bmtc conductor recruitment 2024 apply for 2500 posts

2500 ಬಿಎಂಟಿಸಿ ಕಂಡಕ್ಟರ್ ಹುದ್ದೆಗೆ ಅಧಿಸೂಚನೆ ಪ್ರಕಟ: ಅರ್ಹತೆ, ವೇತನ, ಆಯ್ಕೆ ವಿಧಾನ, ಅರ್ಜಿ ಲಿಂಕ್ ಇಲ್ಲಿದೆ..

Authored byಸುನೀಲ್ ಬಿ ಎನ್ | Vijaya Karnataka Web 27 Feb 2024, 4:00 pm
Subscribe

KEA BMTC Conductor Jobs 2024 Details: ಬೆಂಗಳೂರು ಮೆಟ್ರೋಪಾಲಿಟನ್ ಟ್ರಾನ್ಸ್‌ಪೋರ್ಟ್‌ ಕಾರ್ಪೋರೇಷನ್ - ಬಿಎಂಟಿಸಿ 2500 ಕಂಡಕ್ಟರ್ ಹುದ್ದೆಗಳಿಗೆ ಅಧಿಕೃತ ಅಧಿಸೂಚನೆ ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬೇಕಾದ ಡೀಟೇಲ್ಸ್‌ ಇಲ್ಲಿ ನೀಡಲಾಗಿದೆ.

ಹೈಲೈಟ್ಸ್‌:

  • 2500 ಬಿಎಂಟಿಸಿ ಕಂಡಕ್ಟರ್‌ಗೆ ಕೆಇಎ ಅಧಿಸೂಚನೆ.
  • ಅರ್ಜಿಗೆ ಏಪ್ರಿಲ್ 10 ರವರೆಗೆ ಅವಕಾಶ.
  • ಅರ್ಹತೆಗಳು, ವೇತನಗಳ ವಿವರ, ಇತರೆ ಮಾಹಿತಿ ಇಲ್ಲಿದೆ.
bmtc conductor recruitment 2024 notification
bengaluru metropolitan transport corporation bmtc conductor recruitment 2024 apply for 2500 posts
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಖಾಲಿ ಇರುವ 2500 ನಿರ್ವಾಹಕ (ಕಂಡಕ್ಟರ್) ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಇದೀಗ ನೋಟಿಫಿಕೇಶನ್‌ ಬಿಡುಗಡೆ ಮಾಡಿದೆ. ಮಿಕ್ಕಳಿದ ವೃಂದದಲ್ಲಿ 2286 ನಿರ್ವಾಹಕ ಹುದ್ದೆಗಳು, ಸ್ಥಳೀಯ ವೃಂದದಲ್ಲಿ 214 ( ಹಿಂಬಾಕಿ 15 ಹುದ್ದೆ ಸೇರಿ) ಹುದ್ದೆಗಳು ಇವೆ. ಈ ಸದರಿ ಹುದ್ದೆಗಳ ವಿವರಗಳನ್ನು ಕೆಳಗಿನಂತೆ ತಿಳಿದು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಿ.
ನೇಮಕಾತಿ ಸಂಸ್ಥೆ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ
ಉದ್ಯೋಗ ಸಂಸ್ಥೆ : ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಹುದ್ದೆ ಹೆಸರು : ನಿರ್ವಾಹಕ (ಕಂಡಕ್ಟರ್ )
ಹುದ್ದೆಗಳ ಸಂಖ್ಯೆ : 2500.


ಶೈಕ್ಷಣಿಕ ವಿದ್ಯಾರ್ಹತೆ

ದ್ವಿತೀಯ ಪಿಯುಸಿ ಪಾಸ್ ಅಥವಾ ಐಸಿಎಸ್‌ಇ / ಸಿಬಿಎಸ್‌ಇ ಹನ್ನೆರಡನೇ ತರಗತಿ ಪಾಸ್. ಅಥವಾ 3 ವರ್ಷಗಳ ಡಿಪ್ಲೊಮ ಪಾಸ್‌.
ಮುಕ್ತ ಶಾಲೆ ಅಥವಾ ಮುಕ್ತ ವಿವಿಯಿಂದ ಪಿಯುಸಿ/ 12ನೇ ತರಗತಿಯನ್ನು ಅಥವಾ ಜೆಒಸಿ / ಜೆಎಲ್‌ಸಿ ಕೋರ್ಸ್‌ಗಳು ಮಾನ್ಯವಿಲ್ಲ. ಇವರು ಅರ್ಜಿ ಹಾಕಲು ಅರ್ಹರಲ್ಲ.

ಬಿಎಂಟಿಸಿ'ಯ 2500 ನಿರ್ವಾಹಕರ ನೇಮಕ: ಪರೀಕ್ಷೆ ವಿಧಾನ, ಪಠ್ಯಕ್ರಮ, ಆಯ್ಕೆ ವಿಧಾನದ ಮಾಹಿತಿ ಇಲ್ಲಿದೆ..

ಇತರೆ ಅರ್ಹತೆ
ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್‌ ಅನ್ನು ಹೊಂದಿರತಕ್ಕದ್ದು.
ಪುರುಷರ ಎತ್ತರ 160 CM, ಮಹಿಳೆಯರ ಎತ್ತರ 150 CM ಇರಬೇಕು.

ವಯಸ್ಸಿನ ಅರ್ಹತೆಗಳು

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆ ದಿನಾಂಕ 10-04-2024 ಕ್ಕೆ ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ವಯಸ್ಸು ವರ್ಗಾವಾರು ಕೆಳಗಿನಂತೆ ಮೀರಿರಬಾರದು.
ಸಾಮಾನ್ಯ ವರ್ಗ - 35 ವರ್ಷಗಳು.
2A / 2B / 3A / 3B ಅಭ್ಯರ್ಥಿಗಳಿಗೆ 38 ವರ್ಷಗಳು.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷಗಳು.
ಮಾಜಿ ಸೈನಿಕ / ಇಲಾಖಾ ಅಭ್ಯರ್ಥಿಗಳಿಗೆ 45 ವರ್ಷಗಳು.

ನಿರ್ವಾಹಕ ಹುದ್ದೆಗಳಿಗೆ ವೇತನ ಶ್ರೇಣಿ : ರೂ.18660-25300.

ಕೆಪಿಎಸ್‌ಸಿ ಇಂದ 384 ಕೆಎಎಸ್‌ ಹುದ್ದೆಗಳಿಗೆ ಇದೀಗ ಅಧಿಸೂಚನೆ ಪ್ರಕಟ: ಆನ್‌ಲೈನ್‌ ಅರ್ಜಿ ಆಹ್ವಾನ

ತರಬೇತಿ ಅವಧಿ ಭತ್ಯೆ ಮತ್ತು ವೇತನ ಶ್ರೇಣಿ

ನಿರ್ವಾಹಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಒಂದು ವರ್ಷ ಕಾಲ ವೃತ್ತಿ ತರಬೇತಿಯಾಗಿ ನಿಯೋಜಿಸಲಾಗುವುದು. ಈ ತರಬೇತಿ ಅವಧಿಯಲ್ಲಿ ಮಾಸಿಕ ಸಮಗ್ರ ತರಬೇತಿ ಭತ್ಯೆಯಾಗಿ ರೂ.9,100 ನೀಡಲಾಗುವುದು.

ಅರ್ಜಿ ಸಲ್ಲಿಸುವ ವಿಧಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.in ನಲ್ಲಿ ಮಾರ್ಚ್‌ 10 ರಂದು ತೋರಿಸುವ ಲಿಂಕ್‌ ಅನ್ನು ಆಯ್ಕೆ ಮಾಡಿ, ಆನ್‌ಲೈನ್‌ ಮುಖಾಂತರ ಅರ್ಜಿಯನ್ನು ಭರ್ತಿ ಮಾಡಬೇಕು.

ಅಪ್ಲಿಕೇಶನ್‌ ಶುಲ್ಕ ವಿವರ ಸಾಮಾನ್ಯ ಅರ್ಹತೆ ಮತ್ತು ಇತರೆ ಹಿಂದುಳಿದ ಪ್ರವರ್ಗಗಳಿಗೆ ಅರ್ಜಿ ಶುಲ್ಕ ರೂ.750.
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ರೂ.500.

ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಅವಧಿ
ಆನ್‌ಲೈನ್‌ ಮುಖಾಂತರ ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ: 10-03-2024
ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 10-04-2024
ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ : 13-04-2024

ಬಿಎಂಟಿಸಿ ನಿರ್ವಾಹಕರ ನೇಮಕಾತಿ ವಿಧಾನ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯನ್ನು ಎರಡು ಪತ್ರಿಕೆಗಳಿಗೆ ತಲಾ 100 ಗಳಿಗೆ ನಡೆಸಿ, ನಂತರ ಇದರಲ್ಲಿನ ಶೇಕಡ.75 ಅಂಕಗಳು ಹಾಗೂ ಶೈಕ್ಷಣಿಕ ಅರ್ಹತೆಯ ಶೇಕಡ.25 ಅಂಕಗಳನ್ನು ಸೇರಿಸಿ ಮೆರಿಟ್ ಆಧಾರದ ಮೇಲೆ 1:5 ಅನುಪಾತದ ಅಭ್ಯರ್ಥಿಗಳಿಗೆ ಮೂಲ ದಾಖಲೆಗಳ ಪರಿಶೀಲನೆ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಉದ್ಯೋಗ ವಿವರ

INR 18660 to 25300 /Month
ಹುದ್ದೆಯ ಹೆಸರುಬಿಎಂಟಿಸಿ ನಿರ್ವಾಹಕರು
ವಿವರಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ
ಪ್ರಕಟಣೆ ದಿನಾಂಕ2024-02-26
ಕೊನೆ ದಿನಾಂಕ2024-04-10
ಉದ್ಯೋಗ ವಿಧಪೂರ್ಣಾವಧಿ
ಉದ್ಯೋಗ ಕ್ಷೇತ್ರಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಸರ್ಕಾರಿ ಉದ್ಯೋಗ
ವೇತನ ವಿವರ

ಕೌಶಲ ಮತ್ತು ಶೈಕ್ಷಣಿಕ ಅರ್ಹತೆ

ಕೌಶಲ--
ವಿದ್ಯಾರ್ಹತೆದ್ವಿತೀಯ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆ
ಕಾರ್ಯಾನುಭವ0 Years

ನೇಮಕಾತಿ ಸಂಸ್ಥೆ

ಸಂಸ್ಥೆಯ ಹೆಸರುಕರ್ನಾಟಕ ಪರೀಕ್ಷಾ ಪ್ರಾಧಿಕಾರ
ವೆಬ್‌ಸೈಟ್‌ ವಿಳಾಸhttps://mybmtc.karnataka.gov.in/english
ಸಂಸ್ಥೆ ಲೋಗೋ

ಉದ್ಯೋಗ ಸ್ಥಳ

ವಿಳಾಸಬೆಂಗಳೂರು
ಸ್ಥಳಬೆಂಗಳೂರು
ಪ್ರದೇಶಕರ್ನಾಟಕ
ಅಂಚೆ ಸಂಖ್ಯೆ560001
ದೇಶIND
ಸುನೀಲ್ ಬಿ ಎನ್
ಲೇಖಕರ ಬಗ್ಗೆ
ಸುನೀಲ್ ಬಿ ಎನ್
"ಸುನೀಲ್ ಬಿ ಎನ್ ರವರು ಅನುಭವಿ ಬರಹಗಾರರಾಗಿದ್ದು, ಕಳೆದ 7 ವರ್ಷಗಳಿಂದ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು 2015 ರಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿದರು. ನಂತರ ಹಲವು ಡೊಮೈನ್‌ಗಳಲ್ಲಿ ಕೆಲಸ ಮಾಡುವ ಮೂಲಕ ತಮ್ಮ ವೃತ್ತಿ ಕೌಶಲ್ಯಗಳನ್ನು ಅಭಿವೃದ್ಧಿಪಡಿಸಿಕೊಂಡಿದ್ದಾರೆ. ಸುನೀಲ್ ರವರು ವೈವಿಧ್ಯಮಯ ಪರಿಣತಿಯನ್ನು ಹೊಂದಿದ್ದು, ತಂತ್ರಜ್ಞಾನ, ಸಿನಿಮಾ, ಉದ್ಯೋಗ, ಶಿಕ್ಷಣ, ಜೀವನಶೈಲಿ ಸೇರಿದಂತೆ ಸುದ್ದಿ ವಿಭಾಗದಲ್ಲೂ ಕೆಲಸದ ಅನುಭವ ಹೊಂದಿದ್ದಾರೆ. ಕಳೆದ 3.6 ವರ್ಷಗಳಿಂದ ಸುನೀಲ್‌ ರವರು ಉದ್ಯೋಗ ಮತ್ತು ಶಿಕ್ಷಣ ವಿಭಾಗದಲ್ಲಿ ತಮ್ಮ ಬರವಣಿಗೆ ಕೃಷಿಯನ್ನು ಕೇಂದ್ರೀಕರಿಸಿದ್ದು, ಈ ವಿಷಯಗಳಲ್ಲಿ ಉದ್ಯಮದ ಸೂಕ್ಷ್ಮ ವ್ಯತ್ಯಾಸಗಳ ಬಗ್ಗೆ ಆಳವಾದ ತಿಳುವಳಿಕೆಯನ್ನು ಬೆಳೆಸಿಕೊಂಡಿದ್ದಾರೆ. ಈ ಎರಡು ಡೊಮೇನ್‌ಗಳಲ್ಲಿನ ಬೆಳವಣಿಗೆ ಹಾಗೂ ಬದಲಾವಣೆ ಕುರಿತು ಲೇಟೆಸ್ಟ್‌ ಮಾಹಿತಿಗಳನ್ನು ರಚಿಸುವ ಮೂಲಕ ಓದುಗರಿಗೆ ಸಹಾಯ ಮಾಡುವ ಹಾಗೂ ಅವರಿಗೆ ಉಪಯುಕ್ತ ಮಾಹಿತಿ ನೀಡುವಲ್ಲಿ ಸದಾ ಉತ್ಸುಕರಾಗಿ ಕೆಲಸ ಮಾಡುತ್ತಿದ್ದಾರೆ. ಬರವಣಿಗೆ ಹೊರತಾಗಿ, ಸುನೀಲ್‌ ಬಿ ಎನ್‌ ರವರು ಹಲವು ಉತ್ತಮ ಹವ್ಯಾಸಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಬಿಡುವಿನ ವೇಳೆ ಪ್ರಯಾಣಿಸಲು ಹಾಗೂ ಹೊಸ ಸ್ಥಳಗಳನ್ನು ಅನ್ವೇಷಿಸಲು ಇಷ್ಟಪಡುತ್ತಾರೆ. ಪ್ರಯಾಣವನ್ನು ಶಿಕ್ಷಣದ ಒಂದು ಭಾಗ ಎಂದುಕೊಂಡಿರುವ ಇವರು, ತಮ್ಮ ಈ ಹವ್ಯಾಸದಿಂದ ಅವರ ದೃಷ್ಟಿಕೋನವನ್ನು ವಿಸ್ತರಿಸಲು ಮತ್ತು ವಿಭಿನ್ನ ಸಂಸ್ಕೃತಿಗಳ ಉತ್ತಮ ತಿಳುವಳಿಕೆಯನ್ನು ಪಡೆಯಲು ಸಹಾಯ ಮಾಡುತ್ತದೆ ಎಂದು ಭಾವಿಸಿದ್ದಾರೆ. ಅತ್ಯಾಸಕ್ತಿಯ ಓದುಗರು ಆಗಿದ್ದು ಕಥೆ, ಕಾದಂಬರಿ, ನಾಟಕಗಳ ಪುಸ್ತಕಗಳನ್ನು ಓದುವುದನ್ನು ಇಷ್ಟಪಡುತ್ತಾರೆ. ಬಿಡುವಿನ ವೇಳೆ ಚೆಸ್‌ ಆಡುವುದು ಮತ್ತು ಕೃಷಿ ಕೆಲಸಗಳಲ್ಲಿ ತೊಡಗಿಸಿಕೊಳ್ಳುವ ಮೂಲಕವು ವಿಶ್ರಾಂತಿ ಪಡೆಯುತ್ತಾರೆ. "... ಇನ್ನಷ್ಟು ಓದಿ
ಕಾಮೆಂಟ್‌ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ