ಆ್ಯಪ್ನಗರ

ಬೆಂಗಳೂರು ಮೆಟ್ರೋ ರೈಲು ನಿಗಮದ ವಿವಿಧ ಹುದ್ದೆಗಳ ನೇಮಕಾತಿ ರದ್ದು

ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ನೇಮಕಾತಿ ಅಧಿಸೂಚನೆ ಸಂಖ್ಯೆ, ಬಿಎಂಆರ್‌ಸಿಎಲ್...

Vijaya Karnataka Web 30 Oct 2020, 3:15 pm
ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ನೇಮಕಾತಿ ಅಧಿಸೂಚನೆ ಸಂಖ್ಯೆ, ಬಿಎಂಆರ್‌ಸಿಎಲ್/82/ಆಡಳಿತ/2018/ಕಾ&ನಿ ಪ್ರಕಾರ ದಿನಾಂಕ 03-01-2019 ರಂದು ಅರ್ಜಿಗಳನ್ನು ಆಹ್ವಾನಿಸಿತ್ತು. ಈ ನೇಮಕಾತಿಯನ್ನು ಆಡಳಿತಾತ್ಮಕ ಕಾರಣಗಳಿಂದ ರದ್ದುಗೊಳಿಸಲಾಗಿದೆ.
Vijaya Karnataka Web ಬೆಂಗಳೂರು ಮೆಟ್ರೋ ರೈಲು ನಿಗಮದ ವಿವಿಧ ಹುದ್ದೆಗಳ ನೇಮಕಾತಿ ರದ್ದು
bmrcl cancelled recruitment 2018


ಬಿಎಂಆರ್‌ಸಿಎಲ್‌ 2018 ರಲ್ಲಿ 134 ಮೆಂಟೇನರ್, 21 ಜೂನಿಯರ್ ಇಂಜಿನಿಯರ್, 19 ಸೆಕ್ಷನ್ ಇಂಜಿನಿಯರ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಾಗಿತ್ತು. ಈ ಹುದ್ದೆಗಳಿಗೆ ಯಾವ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ಕಟ್ಟಿ ನಿಗದಿತ ಪರೀಕ್ಷೆಗೆ ಹಾಜರಾಗಿರುವರೋ ಅಂತಹ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕವನ್ನು ಹಿಂತಿರುಗಿಸಲಾಗುವುದು ಎಂದು ಸಂಸ್ಥೆಯು ತಿಳಿಸಿದೆ. ಪರೀಕ್ಷೆಗೆ ಹಾಜರಾಗಿರುವ ಅಭ್ಯರ್ಥಿಗಳು ಪರೀಕ್ಷಾ ಶುಲ್ಕವನ್ನು ಪಡೆಯಲು ಅನುಕೂಲವಾಗುವಂತೆ ಸಂಸ್ಥೆಯ ಅಂತರ್ಜಾಲ www.bmrc.co.in/career ನಲ್ಲಿ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಬ್ಯಾಂಕ್ ಖಾತೆಗಳ ವಿವರಗಳನ್ನು ಸಲ್ಲಿಸಿ ಪರೀಕ್ಷಾ ಶುಲ್ಕ ಹಿಂಪಡೆಯಬಹುದಾಗಿದೆ.

ಆಡಳಿತಾತ್ಮಕ ಕಾರಣಗಳಿಂದ, ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ಮೇಲೆ ತಿಳಿಸಿದ ಹುದ್ದೆಗಳ ನೇಮಕಾತಿಯನ್ನು ಪೂರ್ಣವಾಗಿ ರದ್ದುಪಡಿಸಿರುತ್ತದೆ ಎಂದು ಪ್ರಕಟಣೆ ಮೂಲಕ ತಿಳಿಸಿದೆ.

ಕೆಪಿಎಸ್‌ಸಿ ಹೊರಡಿಸಿದ್ದ 493 ಆಶ್ರಮ ಶಾಲಾ ಶಿಕ್ಷಕರ ನೇಮಕಾತಿ ಅಧಿಸೂಚನೆ ರದ್ದು

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ