ಆ್ಯಪ್ನಗರ

ಗುತ್ತಿಗೆ ಆಧಾರಿತ ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳಿಗೆ ಕೊರೊನಾ ಹೆಚ್ಚುವರಿ ಭತ್ಯೆ

ರಾಷ್ಟ್ರೀಯ ಆರೋಗ್ಯ ಅಭಿಯಾನದ(NHM) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ..

Vijaya Karnataka Web 22 Sep 2020, 11:29 am
ರಾಷ್ಟ್ರೀಯ ಆರೋಗ್ಯ ಅಭಿಯಾನದ(NHM) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಇಲಾಖೆ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರವು ಕೊರೊನ ವಿಶೇಷ ಹೆಚ್ಚುವರಿ ಭತ್ಯೆ ನೀಡಲು ತೀರ್ಮಾನಿಸಿದೆ. ಆಯುಷ್ ಇಲಾಖೆ ಮತ್ತು ಎಂಬಿಬಿಎಸ್ ವೈದ್ಯರು, ತಜ್ಞರು, ಶುಶ್ರೂಷಕರು ಸೇರಿದಂತೆ ಆರೋಗ್ಯ ಸೇವಾ ಸಿಬ್ಬಂದಿಗಳಿಗೆ ಈ ಹೆಚ್ಚುವರಿ ಭತ್ಯೆ ಸಿಗಲಿದೆ.
Vijaya Karnataka Web ಗುತ್ತಿಗೆ ಆಧಾರಿತ ಆರೋಗ್ಯ ಕ್ಷೇತ್ರದ ಸಿಬ್ಬಂದಿಗಳಿಗೆ ಕೊರೊನಾ ಹೆಚ್ಚುವರಿ ಭತ್ಯೆ
Corona additional allowance


ಕೊರೊನಾ ಹಿನ್ನೆಲೆ ರಾಜ್ಯ ಸರ್ಕಾರವು ಮುಂದಿನ 6 ತಿಂಗಳ ವರೆಗೆ ಮಾತ್ರ ಈ ಹೆಚ್ಚುವರಿ ಭತ್ಯೆ ನೀಡಲಿದೆ.

ಗುತ್ತಿಗೆ ಆಧಾರಿತವಾಗಿ ಒಟ್ಟು 14, 252 ಆರೋಗ್ಯ ಸೇವಾ ಸಿಬ್ಬಂದಿಗಳನ್ನು ಒಂದು ವರ್ಷದ ಅವಧಿಗೆ ಕಾರ್ಯನಿರ್ವಹಿಸಲು ನೇಮಕ ಮಾಡಿಕೊಳ್ಳಲಾಗಿದೆ. ಜತೆಗೆ ಈ ಹುದ್ದೆಗಳಿಗೆ ಸಿಬ್ಬಂದಿ ಸಂಖ್ಯೆ ಕಡಿಮೆ ಆದಲ್ಲಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಮ್ಮತಿಯೊಂದಿಗೆ ಜಿಲ್ಲಾಮಟ್ಟದ ಆಯ್ಕೆಸಮಿತಿಯು ತಾತ್ಕಾಲಿಕವಾಗಿ ಈ ಹುದ್ದೆಗಳನ್ನು ತುಂಬಿಕೊಳ್ಳಲು ಅವಕಾಶ ಇರುತ್ತದೆ.

ನ್ಯಾಯ ವಿಜ್ಞಾನ ಪ್ರಯೋಗಾಲಯದ ವೈಜ್ಞಾನಿಕ ಅಧಿಕಾರಿಗಳ ಲಿಖಿತ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಆರೋಗ್ಯ ಸೇವಾ ಸಿಬ್ಬಂದಿಗಳು ತಮ್ಮ ವೇತನ ಹೆಚ್ಚಿಸಬೇಕು ಎಂದು ಬೇಡಿಕೆ ಇಟ್ಟು ಒತ್ತಾಯಿಸಿದ್ದರು. ಆದರೆ ವೇತನ ಹೆಚ್ಚಿಸುವ ಬದಲಿಗೆ, ಕೋವಿಡ್ ವಿಶೇಷ ಭತ್ಯೆ ನೀಡಲು ಸರ್ಕಾರ ಮುಂದಾಗಿದೆ.

ಕರ್ನಾಟಕದಲ್ಲಿ ಶೇ.14.2 ರಷ್ಟು ಶಿಕ್ಷಕರ ಹುದ್ದೆ ಖಾಲಿ; ರಮೇಶ್ ಪೋಖ್ರಿಯಾಲ್

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ