ಆ್ಯಪ್ನಗರ

KSRP, IRB ಕಾನ್ಸ್‌ಟೇಬಲ್ ನೇಮಕಾತಿಯ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರ ಪ್ರಕಟ

KSRP PC Recruitment 2019: ವಿಶೇಷ ಮೀಸಲು ಪೊಲೀಸ್ ಕಾನ್ಸ್‌ಟೇಬಲ್ ಮತ್ತು ಪಿಸಿ-ಐಆರ್‌ಬಿ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರ ಪ್ರಕಟಿಸಲಾಗಿದೆ.

Vijaya Karnataka Web 10 Sep 2019, 11:40 am
ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್(KSRP) ಮತ್ತು ಪಿಸಿ-ಐಆರ್‌ಬಿ ಹುದ್ದೆಗಳ ನೇಮಕಾತಿಗಾಗಿ ದಿನಾಂಕ ಜೂನ್ 07, 2019 ರಂದು ಅಧಿಸೂಚನೆ ಪ್ರಕಟಿಸಿತ್ತು. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಜುಲೈ 07, 2019 ವರಗೆ ಕಾಲಾವಕಾಶ ನೀಡಿತ್ತು.
Vijaya Karnataka Web KSRP PC Recruitment 2019 admit card released


ಜೈಲರ್, ವಾರ್ಡರ್ ನೇಮಕಾತಿ 2019: ದೈಹಿಕ ಪರೀಕ್ಷೆಗೆ ಪ್ರವೇಶ ಪತ್ರ ಪ್ರಕಟ

ಈ ನೇಮಕಾತಿಗೆ ಸಂಬಂಧಿಸಿದಂತೆ ಮೊದಲ ಹಂತವಾದ ದೈಹಿಕ ಪರೀಕ್ಷೆಯನ್ನು ನಡೆಸಲು ಇಲಾಖೆಯು ದಿನಾಂಕವನ್ನು ನಿಗದಿಪಡಿಸಿದೆ. ಯಾವುದೇ ತಪ್ಪುಗಳು ಇಲ್ಲದಂತೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ದೈಹಿಕ ಪರೀಕ್ಷೆಗೆ ಅರ್ಹರಾಗಿದ್ದು, ತಮ್ಮ ಪ್ರವೇಶ ಪತ್ರವನ್ನು ಡೌನ್‌ಲೋಡ್ ಮಾಡಿಕೊಳ್ಳಲು ಇಲಾಖೆಯು ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಲು ಸೂಚಿಸಿದೆ. ಅಥವಾ ಈ ಕೆಳಗಿನ ಹಂತಗಳನ್ನು ಫಾಲೋ ಮಾಡಿ ಪ್ರವೇಶ ಪತ್ರ ಪಡೆಯಬಹುದು.

ಪ್ರವೇಶ ಪತ್ರ ಡೌನ್‌ಲೋಡ್ ಹೇಗೆ?

ವೆಬ್‌ಸೈಟ್‌ ವಿಳಾಸ http://srpchk19.ksp-online.in ಗೆ ಭೇಟಿ ನೀಡಿ

ಓಪನ್ ಆದ ಪೇಜ್‌ನ ಎಡಭಾಗದಲ್ಲಿ 'MyApplication' ಎಂಬಲ್ಲಿ ಕ್ಲಿಕ್ ಮಾಡಿ. ಹೊಸ ಪೇಜ್‌ ಒಂದು ತೆರೆದುಕೊಳ್ಳುತ್ತದೆ.

ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕ ಮಾಹಿತಿ ನೀಡಿ

'Login' ಬಟನ್ ಮೇಲೆ ಕ್ಲಿಕ್ ಮಾಡಿ.

ಪ್ರವೇಶ ಪತ್ರ ಪ್ರದರ್ಶನವಾಗುತ್ತದೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ದೈಹಿಕ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ಇಲಾಖೆಯು ನೀಡಿರುವ ದಿನಾಂಕದಂದು ತಪ್ಪದೇ ಹಾಜರಾಗಲು ತಿಳಿಸಿದೆ. ಹಾಗೂ ಸೂಚನೆಗಳನ್ನು ಓದಿಕೊಳ್ಳಲು ತಿಳಿಸಿದೆ. ಪ್ರವೇಶ ಪತ್ರದ ಜೊತೆಗೆ ಅದರಲ್ಲಿ ಸೂಚಿಸಿರುವ ಅಗತ್ಯ ಗುರುತಿನ ಚೀಟಿ ಮತ್ತು ದಾಖಲೆಗಳನ್ನು ತೆಗೆದುಕೊಂಡು ಹೋಗಬೇಕಿದೆ.

ಮೈಸೂರು ಜಿಲ್ಲಾ ಹಾಲು ಒಕ್ಕೂಟದಲ್ಲಿ 168 ಹುದ್ದೆಗಳ ನೇಮಕ: ಅರ್ಜಿಗೆ ಅ.9 ಕಡೆ ದಿನ

ಪಾಸ್‌ಪೋರ್ಟ್‌, ಚಾಲನಾ ಪರವಾನಗಿ ಪತ್ರ, ಪ್ಯಾನ್ ಕಾರ್ಡ್, ರಾಜ್ಯ ಅಥವಾ ಕೇಂದ್ರ ಸರ್ಕಾರದ ಅಥವಾ ಇವುಗಳ ಅಧೀನಕ್ಕೊಳಪಟ್ಟ ಸಂಸ್ಥೆಗಳು ನೀಡಿದ ಸೇವಾ ಗುರುತಿನ ಚೀಟಿ, ಬ್ಯಾಂಕ್‌ಗಳು, ಅಂಚೆ ಕಛೇರಿಗಳು ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ ಮತ್ತು ಇತರೆ ಅಧಿಕೃತ ಗುರುತಿನ ಚೀಟಿಗಳನ್ನು ತೆಗೆದುಕೊಂಡುಹೋಗಬಹುದು.

ದೈಹಿಕ ಪರೀಕ್ಷೆಯಲ್ಲಿ ಪಾಸ್ ಆದ ಅಭ್ಯರ್ಥಿಗಳಿಗೆ ಮುಂದಿನ ನೇಮಕಾತಿ ಪ್ರಕ್ರಿಯೆ ಪ್ರಕಾರ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಲಿಖಿತ ಪರೀಕ್ಷೆ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

ದೈಹಿಕ ಪರೀಕ್ಷೆ ನಂತರ ಇಲಾಖೆಯು ಮುಂದಿನ ಆಯ್ಕೆ ಪ್ರಕ್ರಿಯೆಯ ಬಗ್ಗೆ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ