ಆ್ಯಪ್ನಗರ

ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಉದ್ಯೋಗಾವಕಾಶ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, 2013 (ಎನ್‌ಎಫ್‌ಎಸ್‌ಎ) ರ ನಿಬಂಧನೆ ಅಡಿಯಲ್ಲಿ ಕರ್ನಾಟಕ ಸರ್ಕಾರದಿಂದ ಸ್ಥಾಪಿಸಲಾದ "ಕರ್ನಾಟಕ ರಾಜ್ಯ ಆಹಾರ ಆಯೋಗಕ್ಕೆ" ಕಚೇರಿ..

Vijaya Karnataka Web 12 Nov 2020, 7:24 pm
ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅಗತ್ಯ ಹುದ್ದೆಗಳ ನೇಮಕಾತಿಗೆ ಪ್ರಕಟಣೆ ಹೊರಡಿಸಿದೆ. ಹೆಚ್ಚಿನ ವಿವರಗಳನ್ನು ಈ ಕೆಳಗಿನಂತೆ ತಿಳಿದು ಅರ್ಜಿ ಸಲ್ಲಿಸಿ.
Vijaya Karnataka Web ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಲ್ಲಿ ಉದ್ಯೋಗಾವಕಾಶ
food department recruitment 2020


ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ, 2013 (ಎನ್‌ಎಫ್‌ಎಸ್‌ಎ) ರ ನಿಬಂಧನೆ ಅಡಿಯಲ್ಲಿ ಕರ್ನಾಟಕ ಸರ್ಕಾರದಿಂದ ಸ್ಥಾಪಿಸಲಾದ "ಕರ್ನಾಟಕ ರಾಜ್ಯ ಆಹಾರ ಆಯೋಗಕ್ಕೆ" ಕಚೇರಿ ಕೆಲಸದ ಪೂರ್ಣ ವೇಳೆಯ ಅಧ್ಯಕ್ಷರು ಹಾಗೂ ಸದಸ್ಯರು ಹುದ್ದೆಗಳನ್ನು ನೇಮಕ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ
ಅಧ್ಯಕ್ಷಕರು 1
ಸದಸ್ಯರು1

40 ಸಶಸ್ತ್ರ ಮೀಸಲು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ
ರಾಜ್ಯ ಆಹಾರ ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರು ಎನ್‌ಎಫ್‌ಎಸ್‌ಎ ಕಾಯ್ದೆ-2013 ಹಾಗೂ ಸಂಬಂಧಿತ ಸರ್ಕಾರಿ ಆದೇಶ ಎಫ್‌ಸಿಎಸ್‌ 52 ಡಿಆರ್‌ಎ 2012 ದಿನಾಂಕ 10-06-2016 ರಲ್ಲಿ ಅನ್ವಯಿಸುವಂತೆ ಸೂಚಿಸಿರುವ ಎಲ್ಲಾ ಕೆಲಸಗಳ ನಿರ್ವಹಣೆ ಹಾಗೂ ಕಾರ್ಯಾಚರಣೆಗಳ ಅಧಿಕಾರವನ್ನು ಅದರಂತೆ ಚಲಾಯಿಸಬೇಕಾಗುತ್ತದೆ. ಆಯೋಗದ ಪ್ರಧಾನ ಕಚೇರಿ ಬೆಂಗಳೂರಿನಲ್ಲಿ ಕರ್ತವ್ಯ ನಿರ್ವಹಿಸಬೇಕು.

ವಿದ್ಯಾರ್ಹತೆ, ಅರ್ಹತಾ ಅಗತ್ಯತೆ, ಅರ್ಜಿ ಫಾರಂ ಹಾಗೂ ಇತರೆ ವಿವರಗಳನ್ನು ಒಳಗೊಂಡ ಸಂಪೂರ್ಣ ಮಾಹಿತಿಗಾಗಿ ಅರ್ಜಿಸಲ್ಲಿಸಲು ಬಯಸುವವರು ಇಲಾಖೆಯ ವೆಬ್‌ಸೈಟ್‌ www.ahara.kar.nic.in ಗೆ ಭೇಟಿ ನೀಡಿ ಡೌನ್‌ಲೋಡ್‌ ಮಾಡಿಕೊಳ್ಳಲು ಮನವಿ ಮಾಡಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 12-12-2020

ಅಪ್ರೆಂಟಿಸ್ ಹುದ್ದೆಗೆ ಅರ್ಜಿ ಆಹ್ವಾನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ