ಆ್ಯಪ್ನಗರ

ಕರ್ನಾಟಕ ಅರಣ್ಯ ಇಲಾಖೆಯಲ್ಲಿ 3085 ಹುದ್ದೆಗಳ ಭರ್ತಿ ಈ ವರ್ಷದಿಂದ ಆರಂಭ

ಕರ್ನಾಟಕ ಅರಣ್ಯ ಸಂಪನ್ಮೂಲವನ್ನು ಸಂರಕ್ಷಿಸಲು ಹಾಗೂ ಅರಣ್ಯ ಇಲಾಖೆಯನ್ನು ಇನ್ನಷ್ಟು ಸದೃಢಗೊಳಿಸಲು ವಿವಿಧ ಗ್ರೂಪ್‌ನ/ ವೃಂದದ 3085 ಹುದ್ದೆಗಳನ್ನು ಸೃಷ್ಟಿಸಿದ್ದು

Vijaya Karnataka 14 Sep 2020, 9:45 am
ಕರ್ನಾಟಕ ಅರಣ್ಯ ಸಂಪನ್ಮೂಲವನ್ನು ಸಂರಕ್ಷಿಸಲು ಹಾಗೂ ಅರಣ್ಯ ಇಲಾಖೆಯನ್ನು ಇನ್ನಷ್ಟು ಸದೃಢಗೊಳಿಸಲು ವಿವಿಧ ಗ್ರೂಪ್‌ನ/ ವೃಂದದ 3085 ಹುದ್ದೆಗಳನ್ನು ಸೃಷ್ಟಿಸಿದ್ದು, ಪ್ರಸಕ್ತ ಸಾಲಿನಿಂದ ಹುದ್ದೆಗಳ ನೇಮಕಾತಿ ಕೈಗೊಳ್ಳಲು ಅನುಮತಿ ನೀಡಿರುವುದಾಗಿ ರಾಜ್ಯ ಅರಣ್ಯ ಸಚಿವ ಆನಂದ್ ಸಿಂಗ್ ತಿಳಿಸಿದ್ದಾರೆ.
Vijaya Karnataka Web ಕರ್ನಾಟಕ ಅರಣ್ಯ ಇಲಾಖೆಯಲ್ಲಿ 3085 ಹುದ್ದೆಗಳ ಭರ್ತಿ ಈ ವರ್ಷದಿಂದ ಆರಂಭ
karnataka forest department recruitment 2020


ಮೊನ್ನೆಯಷ್ಟೇ ಬೆಂಗಳೂರು ಮಲ್ಲೇಶ್ವರದ ಅರಣ್ಯ ಭವನದಲ್ಲಿ ನಡೆದ 'ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ'ದ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಅರಣ್ಯ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳ ಕುರಿತು ಮೇಲಿನಂತೆ ವಿವರಿಸಿದರು. 'ರಾಜ್ಯ ಅರಣ್ಯ ಸಂಪತ್ತು ರಕ್ಷಣೆ ಮಾಡುವುದಕ್ಕಾಗಿ ಇಲಾಖೆಗೆ ಮತ್ತಷ್ಟು ಸಿಬ್ಬಂದಿ ಅಗತ್ಯವಿದೆ. ನೇಮಕಾತಿ ಪ್ರಕ್ರಿಯೆಯನ್ನು ಈಗಾಗಲೇ ಆರಂಭಿಸಲಾಗಿದೆ', ಎಂದರು.

ಕರ್ತವ್ಯದ ವೇಳೆ ಮೃತಪಟ್ಟವರ ಕುಟುಂಬಕ್ಕೆ ಪರಿಹಾರ ಏರಿಕೆ

ಈ ಹಿಂದೆ ಕರ್ತವ್ಯದಲ್ಲಿದ್ದ ವೇಳೆ ಮೃತಪಟ್ಟ ಸಿಬ್ಬಂದಿ ಮತ್ತು ಅಧಿಕಾರಿಗಳಿಗೆ ನೀಡಲಾಗುತ್ತಿದ್ದ 20 ಲಕ್ಷ ರೂ.ಗಳ ಪರಿಹಾರವನ್ನು 30 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಹೇಳಿದ್ದಾರೆ.

ಪಿಎಸ್‌ಐ, ಆರ್‌ಎಸ್‌ಐ ಹುದ್ದೆಗಳ ಸಹಿಷ್ಣುತೆ, ದೇಹದಾರ್ಢ್ಯತೆ ಪರೀಕ್ಷೆ ಮುಂದೂಡಿಕೆ
ವರ್ಷವಾರು ಭರ್ತಿಗೆ ಮಂಜುರಾದ ವಿವಿಧ ಹುದ್ದೆಗಳ ವಿವರ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ, ಉಪ ವಲಯ ಅರಣ್ಯಾಧಿಕಾರಿ, ಅರಣ್ಯ ರಕ್ಷಕ, ಅರಣ್ಯ ವೀಕ್ಷಕ ಹುದ್ದೆಗಳು ಸೇರಿದಂತೆ ವರ್ಷವಾರು ಈ ಕೆಳಗಿನಂತೆ ಭರ್ತಿ ಮಾಡಲು ನೇಮಕಾತಿ ಮಂಜೂರು ಮಾಡಲಾಗಿದೆ.
ವರ್ಷಹುದ್ದೆಗಳ ಸಂಖ್ಯೆ
2019-20323
2020-21613
2021-2268
2022-23920
2023-24 461
ಒಟ್ಟು3085

300 ಸಿವಿಲ್ ಪೊಲೀಸ್‌ ಸಬ್‌-ಇನ್ಸ್‌ಪೆಕ್ಟರ್ ಹುದ್ದೆಗೆ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

339 ಅರಣ್ಯ ರಕ್ಷಕರ ಭರ್ತಿಗೆ ಕೊರೊನಾ ಎಫೆಕ್ಟ್‌

ಪ್ರಸಕ್ತ ಸಾಲಿನಲ್ಲಿ ಭರ್ತಿ ಮಾಡಲು ಹೊರಡಿಸಲಾಗಿದ್ದ 339 ಅರಣ್ಯ ರಕ್ಷಕ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳು ಈ ವೇಳೆಗೆ ಕೊನೆ ಹಂತ ತಲುಪಬೇಕಿತ್ತು. ಆದರೆ ಕೊರೊನಾ ಎಫೆಕ್ಟ್‌ ಕಾರಣದಿಂದ ಈ ಹುದ್ದೆಯ ಭರ್ತಿ ಪ್ರಕ್ರಿಯೆಗೂ ಬ್ರೇಕ್‌ ಬಿದ್ದಿದೆ.

2014-15ನೇ ಸಾಲಿನ ಹಿಂದಿ ಭಾಷಾ ಶಿಕ್ಷಕರ ನೇಮಕ: ಪರಿಷ್ಕೃತ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ