ಆ್ಯಪ್ನಗರ

ರದ್ದುಗೊಳಿಸಿದ್ದ ಗಳಿಕೆ ರಜೆ ನಗದೀಕರಣಕ್ಕೆ ಸರ್ಕಾರ ಸಮ್ಮತಿ

ಕರ್ನಾಟಕ ಸರ್ಕಾರವು ಇತ್ತೀಚೆಗಷ್ಟೆ ಕೋವಿಡ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಹೇಳಿ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ....

Vijaya Karnataka Web 13 Jan 2021, 3:41 pm
ಕರ್ನಾಟಕ ಸರ್ಕಾರವು ಇತ್ತೀಚೆಗಷ್ಟೆ ಕೋವಿಡ್ ಹಿನ್ನೆಲೆ ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಕಾರಣ ಹೇಳಿ ಸರ್ಕಾರಿ ನೌಕರರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ರದ್ದುಗೊಳಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆ ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದ ಹಿನ್ನೆಲೆ ಮಣಿದ ಸರ್ಕಾರ ಗಳಿಕೆ ರಜೆ ನಗದೀಕರಣ ಸೌಲಭ್ಯವನ್ನು ಮತ್ತೆ ಜಾರಿಗೊಳಿಸಲು ಸಮ್ಮತಿ ನೀಡಿದೆ.
Vijaya Karnataka Web ರದ್ದುಗೊಳಿಸಿದ್ದ ಗಳಿಕೆ ರಜೆ ನಗದೀಕರಣಕ್ಕೆ ಸರ್ಕಾರ ಸಮ್ಮತಿ
earnged leave for 2021 session


ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಒಕ್ಕೂಟ, ಕರ್ನಾಟಕ ಸಚಿವಾಲಯ ನೌಕರರ ಸಂಘ, ಎನ್‌ಪಿಎಸ್ ನೌಕರರ ಸಂಘ, ವಿಧಾನ ಸಭೆ ಸಚಿವಾಲಯ ನೌಕರರ ಸಂಘ, ಎನ್‌ಪಿಎಸ್ ನೌಕರರ ಸಂಘ, ವಿಧಾನ ಸಭೆ ಸಚಿವಾಲಯ ನೌಕರರ ಸಂಘ, ವಿಧಾನ ಪರಿಷತ್ ನೌಕರರ ಸಂಘ ಮಂಗಳವಾರ ವಿಧಾನಸೌಧದ ಆವರಣದಲ್ಲಿ ಗಾಂಧೀ ಪ್ರತಿಮೆ ಬಳಿಯಲ್ಲಿ ಪ್ರತಿಭಟನೆ ನಡೆಸಿದರು. ಹಾಗೂ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಅವರಿಗೆ ಮನವಿ ಸಲ್ಲಿಸಿದ್ದರು.

ಪಿ ರವಿಕುಮಾರ್ ರವರು ಮನವಿ ಸ್ವೀಕರಿಸಿ ಮಾತನಾಡಿ, "ಗಳಿಕೆ ರಜೆ ನಗದೀಕರಣ ಸೌಲಭ್ಯ ಯೋಜನೆ ರದ್ದು ಮಾಡಿರುವ ಆದೇಶ ಹಿಂದಕ್ಕೆ ಪಡೆಯುವುದಾಗಿ ಭರವಸೆ ನೀಡಿದ್ದಾರೆ. ರದ್ದುಗೊಳಿಸಿದ್ದ ತುಟ್ಟಿಭತ್ಯೆಯನ್ನು ಮತ್ತೆ ನೀಡಬೇಕು. ನಿವೃತ್ತಿ ಹೊಂದಿದ ಅಧಿಕಾರಿ ಹಾಗೂ ನೌಕರರ ನೇಮಕವನ್ನು ರದ್ದು ಮಾಡಬೇಕು, ಹೊರಗುತ್ತಿಗೆಯನ್ನು ನಿಲ್ಲಿಸಬೇಕು ಹಾಗೂ ನೌಕರ ವಿರೋಧಿ ನಿಯಮಾವಳಿಗಳನ್ನು ಕೂಡಲೇ ಹಿಂಪಡೆಯಬೇಕು ಎಂಬ ಬೇಡಿಕೆಗಳ ಬಗ್ಗೆ ಪರಿಶೀಲನೆ ಮಾಡಿ ಕ್ರಮ ಕೈಗೊಳ್ಳುವುದಾಗಿ ರವಿಕುಮಾರ್ ನಿಯೋಗಕ್ಕೆ ಭರವಸೆ ನೀಡಿದ್ದಾರೆ.

ಕರ್ನಾಟಕ ಸಿವಿಲ್ ನ್ಯಾಯಾಧೀಶ ಹುದ್ದೆಗೆ ವೀವಾ-ವಾಯ್ಸ್‌ ವೇಳಾಪಟ್ಟಿ ಬಿಡುಗಡೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ