ಆ್ಯಪ್ನಗರ

ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಾತಿ: 322 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಂದೇ ಕಡೆಯ ದಿನಾಂಕ

ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

Vijaya Karnataka 29 Jun 2019, 9:25 am
ಬೆಂಗಳೂರು: ರಾಜ್ಯ ಪೊಲೀಸ್‌ ಇಲಾಖೆ 322 ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಕ್ಕೆ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಇಂದು (ಜೂ.29) ಕೊನೆಯ ದಿನವಾಗಿದೆ. ಇನ್ನೂ ಅರ್ಜಿ ಸಲ್ಲಿಸದೇ ಇರುವ ಅಭ್ಯರ್ಥಿಗಳು ಇಂದು ಸಂಜೆ 6 ಗಂಟೆಯ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
Vijaya Karnataka Web Karnataka Police


ಅರ್ಜಿ ಶುಲ್ಕ ಪಾವತಿಸಲು ಜುಲೈ 3ರ ವರೆಗೆ ಕಾಲಾವಕಾಶವಿರುತ್ತದೆ. ಹೈ-ಕ ಪ್ರದೇಶದ ಪೊಲೀಸ್‌ ಹುದ್ದೆಗಳ ನೇಮಕಕ್ಕೆ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಿರುವುದರಿಂದ ಈ ಹುದ್ದೆಗಳಿಗೂ ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸುವ ನಿರೀಕ್ಷೆ ಇದೆ. ಆದರೆ ಈ ಬಗ್ಗೆ ಇಲಾಖೆ ಯಾವುದೇ ಭರವಸೆ ನೀಡಿಲ್ಲ.

163 ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಮತ್ತು 159 ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ (ಸಿಎಎಆರ್‌/ ಡಿಎಎಆರ್‌) ನೇಮಕ ನಡೆಯಲಿದೆ. ಸಿವಿಲ್‌ ಪೊಲೀಸ್‌ ಹುದ್ದೆಗಳಿಗೆ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ.

ರಾಜ್ಯ ಪೊಲೀಸ್‌ ನೇಮಕಾತಿ: ಶೀಘ್ರದಲ್ಲೇ 1 ಲಕ್ಷ ಪೊಲೀಸರ ಭರ್ತಿ

ಅರ್ಹತೆಗಳೇನು? : ಸಿವಿಲ್‌ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ದ್ವಿತೀಯ ಪಿಯುಸಿ ಅಥವಾ ತತ್ಸಮಾನ ಶಿಕ್ಷಣ ಹೊಂದಿರುವ ಅರ್ಹ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಎಸ್‌ಎಸ್‌ಎಲ್‌ಸಿಯಲ್ಲಿ ಉತ್ತೀರ್ಣರಾಗಿರುವ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ಎತ್ತರ 168 ಸೆಂ.ಮೀ. ಮತ್ತು ಎದೆ ಸುತ್ತಳತೆ 86 ಸೆಂ.ಮೀ. ಮಹಿಳಾ ಅಭ್ಯರ್ಥಿಗಳಾಗಿದ್ದಲ್ಲಿ ಕನಿಷ್ಠ ಎತ್ತರ 157 ಸೆಂ.ಮೀ. ಮತ್ತು ತೂಕ 45 ಕೆ.ಜಿ. ಹೊಂದಿರಬೇಕು. ಹೆಚ್ಚಿನ ಮಾಹಿತಿಗೆ ವೆಬ್‌: https://www.ksp.gov.in/

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ