ಆ್ಯಪ್ನಗರ

3026 ಪೊಲೀಸ್ ಕಾನ್ಸ್‌ಟೇಬಲ್ ಆನ್‌ಲೈನ್‌ ಅರ್ಜಿಗೆ ಡೈರೆಕ್ಟ್‌ ಲಿಂಕ್ ಇಲ್ಲಿದೆ

KSP Recruitment 2019: ಕರ್ನಾಟಕ ಸ್ಟೇಟ್ ಪೊಲೀಸ್, ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳ ಆನ್‌ಲೈನ್‌ ಅರ್ಜಿಗೆ ಅಧಿಕೃತ ವೆಬ್‌ಸೈಟ್‌ ನಲ್ಲಿ ಆನ್‌ಲಿಂಕ್‌ ಅಪ್‌ಡೇಟ್ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

Vijaya Karnataka Web 24 Sep 2019, 12:29 pm

ಕರ್ನಾಟಕ ಪೊಲೀಸ್ ಇಲಾಖೆಯು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಹಾಗೂ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್‌(ಪುರುಷ ಮತ್ತು ಮಹಿಳೆ) ಒಟ್ಟು 3026 ಹುದ್ದೆಗಳ ನೇರ ನೇಮಕಾತಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಲು ಅಧಿಕೃತ ವೆಬ್‌ಸೈಟ್‌ನಲ್ಲಿ ಲಿಂಕ್ ಅಪ್‌ಡೇಟ್‌ ಮಾಡಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಆನ್‌ಲೈನ್‌ ಅರ್ಜಿ ಸಲ್ಲಿಸಬಹುದು.
Vijaya Karnataka Web apply online for police constable 2019


3026 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಇಂದಿನಿಂದ ಅರ್ಜಿ: SSLC, PUC ವಿದ್ಯಾರ್ಹತೆ

2013 ಪೊಲೀಸ ಕಾನ್ಸ್‌ಟೇಬಲ್ (ನಾಗರಿಕ) ಮತ್ತು 1028 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆನ್‌ಲೈನ್ ಡೈರೆಕ್ಟ್‌ ಲಿಂಕ್ ಈ ಕೆಳಗಿನಂತಿವೆ.

ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್‌(ಪುರುಷ ಮತ್ತು ಮಹಿಳೆ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕ್ಲಿಕ್‌ ಮಾಡಿ

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕ್ಲಿಕ್ ಮಾಡಿ

ಅರ್ಜಿ ಸಲ್ಲಿಕೆ ಹೇಗೆ?

-ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಮೇಲಿನ ಲಿಂಕ್‌ಗಳನ್ನು ಕ್ಲಿಕ್‌ ಮಾಡಿ.

- ಓಪನ್‌ ಆದ ಪೇಜ್‌ ನಲ್ಲಿ "New Applcation" ಎಂದಿರುವ ಲಿಂಕ್ ಮೇಲೆ ಕ್ಲಿಕ್ ಮಾಡಿ.

- 'I Agree' ಎಂಬಲ್ಲಿ ಕ್ಲಿಕ್ ಮಾಡಿ

- ನಂತರ ಅಗತ್ಯ ಮಾಹಿತಿಗಳನ್ನು ನೀಡಿ 'Submit' ಮೇಲೆ ಕ್ಲಿಕ್ ಮಾಡಿ ಅರ್ಜಿ ಪ್ರಕ್ರಿಯೆ ಪೂರ್ಣಗೊಳಿಸಬಹುದು.

ಸೂಚನೆ: ಅರ್ಜಿ ಸಲ್ಲಿಸಲು ನಿಗಧಿಪಡಿಸಿರುವ ಕೊನೆಯ ದಿನಾಂಕವು ಮುಕ್ತಾಯವಾದ ನಂತರ 10 ದಿನಗಳವರೆಗೆ, ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿಯಲ್ಲಿ ಹೆಸರು, ಜನ್ಮ ದಿನಾಂಕ, ಕೋರಿರುವ ಮೀಸಲಾತಿ, ಹಾಗೂ ಇತರೇ ಯಾವುದೇ ಅಂಶಗಳ ಬದಲಾವಣೆ ಮಾಡಲು ಅವಕಾಶ ನೀಡಲಾಗಿದೆ. ತಪ್ಪಾದಲ್ಲಿ ಸರಿಪಡಿಸಿಕೊಳ್ಳಲು ಅವಕಾಶ ನೀಡಲಾಗಿದೆ.

ಅಭ್ಯರ್ಥಿಗಳು ಖುದ್ದಾಗಿ ಅಥವಾ ಅಂಚೆ ಮೂಲಕ ಸಂಬಂಧಪಟ್ಟ ದೃಢೀಕೃತ ದಾಖಲೆಗಳೊಂದಿಗೆ ಅಡಿಷನಲ್ ಡೈರೆಕ್ಟರ್ ಜನರಲ್ ಆಫ್ ಪೊಲೀಸ್, ನೇಮಕಾತಿ ಕಾರ್ಲಟನ್ ಭವನ, ಅರಮನೆ ರಸ್ತೆ, ಬೆಂಗಳೂರು ರವರ ಕಛೇರಿಗೆ ಸಲ್ಲಿಸಲು ತಿಳಿಸಲಾಗಿದೆ.

ನಿಗಧಿ ಪಡಿಸಿದ ಕೊನೆಯ ದಿನಾಂಕದ ನಂತರ ಸಲ್ಲಿಸುವ ಯಾವುದೇ ಮನವಿಗಳನ್ನು ಪರಿಗಣಿಸಲಾಗುವುದಿಲ್ಲ.

ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್‌(ಪುರುಷ ಮತ್ತು ಮಹಿಳೆ) ಅಧಿಸೂಚನೆಗಾಗಿ ಕ್ಲಿಕ್‌ ಮಾಡಿ

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ) ಅಧಿಸೂಚನೆಗಾಗಿ ಕ್ಲಿಕ್ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ