ಆ್ಯಪ್ನಗರ

ಕೆಪಿಎಸ್‌ಸಿ'ಯಲ್ಲಿ ಕಾನೂನು ಸಲಹೆಗಾರ ಹುದ್ದೆಗಳ ನೇಮಕ: ಅರ್ಜಿ ಆಹ್ವಾನ

ಕರ್ನಾಟಕ ಲೋಕಸೇವಾ ಆಯೋಗದಲ್ಲಿನ ಕಾನೂನು ಸಲಹೆಗಳ ಹುದ್ದೆ ನೇಮಕಾತಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಯ ವಿವರ, ಅರ್ಹತೆ, ವಯೋಮಿತಿ, ಅರ್ಜಿ ಸಲ್ಲಿಕೆ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿ ನೀಡಲಾಗಿದೆ.

Vijaya Karnataka Web 30 Dec 2019, 11:40 am

ಕರ್ನಾಟಕ ಲೋಕಸೇವಾ ಆಯೋಗದ ಕಛೇರಿಯ ಕಾನೂನು ಕೋಶದ ಮುಖ್ಯಸ್ಥರ ಹುದ್ದೆ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗಳನ್ನು ಎರಡು ವರ್ಷಗಳ ಅವಧಿಗೆ ನೇಮಕ ಮಾಡಿಕೊಳ್ಳಲು ಸರ್ಕಾರ ಆದೇಶ ನೀಡಿದೆ. ಈ ಹುದ್ದೆಯಲ್ಲಿ ಸೇವೆ ಸಲ್ಲಿಸಲು ಇಚ್ಛಿಸುವ, ಸೇವಾ ವಿಷಯಗಳಲ್ಲಿ ನುರಿತ ಹಾಗೂ ಹೆಚ್ಚಿನ ಅನುಭವವುಳ್ಳ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶರನ್ನು ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.
Vijaya Karnataka Web kpsc legal adviser recruitment 2020
government jobs in karnataka 2020


ಹುದ್ದೆಯ ಹೆಸರು : ಕಾನೂನು ಸಲಹೆಗಾರರು

ಹುದ್ದೆಯ ಅವಧಿ : 2 ವರ್ಷಗಳು

ಮಾಸಿಕ ಸಂಭಾವನೆ : ರೂ.65,000.

ವಾಹನ ಭತ್ಯೆ : ರೂ. 25.000 ಮಾಸಿಕವಾಗಿ ನೀಡಲಾಗುತ್ತದೆ.

Stenographer Jobs: ಚಿಕ್ಕಮಗಳೂರು ಜಿಲ್ಲೆಯ ನ್ಯಾಯಾಲಯಗಳಲ್ಲಿ ಶೀಘ್ರಲಿಪಿಗಾರ ಹುದ್ದೆಗಳ ನೇಮಕ

1958 ರ ಕರ್ನಾಟಕ ನಾಗರೀಕ ಸೇವಾ ನಿಯಮಾವಳಿಗಳಲ್ಲಿ ಸ್ಪಷ್ಟೀಕರಿಸಿರುವಂತೆ ಸದರಿ ಹುದ್ದೆಯಲ್ಲಿ ಕಾರ್ಯ ನಿರ್ವಹಿಸುವ ನಿವೃತ್ತ ಸರ್ಕಾರಿ ನೌಕರರಿಗೆ ಲಭ್ಯವಾಗುವ ರಜಾ ಸೌಲಭ್ಯಗಳು ಸದರಿಯವರಿಗೂ ಅನ್ವಯವಾಗುತ್ತವೆ.

ವಯೋಮಿತಿ : 01-01-2020 ಕ್ಕೆ 65 ವರ್ಷ ಮೀರದ ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

2055 ಭೂಮಾಪಕ ಹುದ್ದೆ ನೇಮಕ.. ಆನ್‌ಲೈನ್‌ ಅರ್ಜಿ ಆಹ್ವಾನ

ಅರ್ಜಿ ಸಲ್ಲಿಕೆ ಹೇಗೆ?

ಹುದ್ದೆಯ ಆಸಕ್ತರು ಅರ್ಜಿಯಲ್ಲಿ ತಮ್ಮ ಹೆಸರು, ವಿಳಾಸ, ಜನ್ಮ ದಿನಾಂಕ, ವಿದ್ಯಾರ್ಹತೆ, ಸೇವಾ ವಿವರಗಳನ್ನೊಳಗೊಂಡ ಸಂಪೂರ್ಣ ಮಾಹಿತಿಯನ್ನು ಲಗತ್ತಿಸಿ, ಅಧಿಸೂಚನೆ ಹೊರಡಿಸಿದ 30 ದಿನಗಳೊಳಗೆ ಅರ್ಜಿಯನ್ನು ಕೆಳಗಿನ ವಿಳಾಸಕ್ಕೆ ತಲುಪಿಸಬೇಕಾಗಿದೆ.

ಅರ್ಜಿ ಸಲ್ಲಿಸಬೇಕಾದ ವಿಳಾಸ : ಕಾರ್ಯದರ್ಶಿ, ಕರ್ನಾಟಕ ಲೋಕಸೇವಾ ಆಯೋಗ, ಉದ್ಯೋಗಸೌಧ, ಬೆಂಗಳೂರು'.

ಅಧಿಸೂಚನೆ ಹೊರಡಿಸಿದ ದಿನಾಂಕ : 27-12-2019

ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 26-01-2020

Notification

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ