ಆ್ಯಪ್ನಗರ

ಸಹಾಯಕ ತೋಟಗಾರಿಕೆ ಅಧಿಕಾರಿ ನೇಮಕ: ಸಂದರ್ಶನಕ್ಕೆ ಅಭ್ಯರ್ಥಿಗಳ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ತೋಟಗಾರಿಕೆ ಇಲಾಖೆಯಲ್ಲಿನ ಸಹಾಯಕ ತೋಟಗಾರಿಕೆ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ,...

Vijaya Karnataka Web 13 Oct 2020, 2:36 pm
ಕರ್ನಾಟಕ ಲೋಕಸೇವಾ ಆಯೋಗವು ತೋಟಗಾರಿಕೆ ಇಲಾಖೆಯಲ್ಲಿನ ಸಹಾಯಕ ತೋಟಗಾರಿಕೆ ಅಧಿಕಾರಿಗಳ ನೇಮಕಾತಿಗೆ ಸಂಬಂಧಿಸಿದಂತೆ, ಸಂದರ್ಶನ ಪ್ರಕ್ರಿಯೆಗೆ ಆಯ್ಕೆಯಾದ ಅಭ್ಯರ್ಥಿಗಳ ಆಯ್ಕೆಪಟ್ಟಿಯನ್ನು ಪ್ರಕಟಿಸಿದೆ. ಅಭ್ಯರ್ಥಿಗಳು ಆಯೋಗದ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ, ಈ ಪಟ್ಟಿಯನ್ನು ಚೆಕ್‌ ಮಾಡಬಹುದು.
Vijaya Karnataka Web assistant horticulture officer selection list
assistant horticulture officer selection list for interview


ಕೆಪಿಎಸ್‌ಸಿ ತೋಟಗಾರಿಕೆ ಇಲಾಖೆಯ ಸಹಾಯಕ ಅಧಿಕಾರಿ ಹುದ್ದೆಗಳ ಭರ್ತಿಗೆ 2018 ರಲ್ಲಿ ನೇಮಕಾತಿ ಅಧಿಸೂಚನೆ ಹೊರಡಿಸಿತ್ತು. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಲಿಖಿತ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ, ಮೆರಿಟ್‌ ಲಿಸ್ಟ್‌ ಆಧಾರದಲ್ಲಿ ಸಂದರ್ಶನಕ್ಕೆ ಆಯ್ಕೆಪಟ್ಟಿ ಸಿದ್ಧಪಡಿಸಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಸ್ತುತ ಪ್ರಕಟಿಸಲಾಗಿದೆ.

ಸಹಾಯಕ ತೋಟಗಾರಿಕೆ ಅಧಿಕಾರಿ ಹುದ್ದೆಗೆ ಸಂದರ್ಶನ ಪ್ರಕ್ರಿಯೆಯನ್ನು ದಿನಾಂಕ 19-10-2020 ರಂದು ನಿಗದಿಪಡಿಸಿದೆ. ಸಂದರ್ಶನಕ್ಕೆ ಬಿಡುಗಡೆ ಮಾಡಲಾದ ಆಯ್ಕೆಪಟ್ಟಿಯಲ್ಲಿ ಅಭ್ಯರ್ಥಿಗಳ ರಿಜಿಸ್ಟರ್ ನಂಬರ್, ಹೆಸರು ಮತ್ತು ಸಂದರ್ಶನ ದಿನಾಂಕ ಮಾಹಿತಿಗಳನ್ನು ನೀಡಲಾಗಿದೆ.

ಅಭ್ಯರ್ಥಿಗಳು ಆಯ್ಕೆಪಟ್ಟಿಯನ್ನು ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್‌ನ ವೆಬ್‌ಸೈಟ್‌ kpsc.kar.nic.in ಗೆ ಭೇಟಿ ನೀಡಿ ಚೆಕ್‌ ಮಾಡಬಹುದು. ಅಥವಾ ಈ ಕೆಳಗಿನ ಡೈರೆಕ್ಟ್ ಲಿಂಕ್‌ ಕ್ಲಿಕ್ ಮಾಡಿ ಸಹ ಚೆಕ್‌ ಮಾಡಬಹುದು.

List of candidates called for interview to the post of Assistant Horticulture Officer - Click Here

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ