ಆ್ಯಪ್ನಗರ

ಕೆಪಿಎಸ್‌ಸಿ ಇಂದ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು 2017 ನೇ ಸಾಲಿನ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ.

Vijaya Karnataka Web 10 Jun 2020, 1:12 pm
ಕರ್ನಾಟಕ ಲೋಕಸೇವಾ ಆಯೋಗವು 2017 ನೇ ಸಾಲಿನ ಅಲ್ಪಸಂಖ್ಯಾತರ ನಿರ್ದೇಶನಾಲಯದ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಂತಿಮ ಆಯ್ಕೆಪಟ್ಟಿಯನ್ನು ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ನವೋದಯ ಶಾಲೆ, ಮೊರಾರ್ಜಿ ದೇಸಾಯಿ ಶಾಲೆಯ ಸ್ನಾತಕೋತ್ತರ ಪದವೀಧರ ಶಿಕ್ಷಕರು (ವಿವಿಧ ವಿಷಯಗಳಿಗೆ), ವಾರ್ಡನ್, ಕಚೇರಿ ಅಧೀಕ್ಷಕರು ಮತ್ತು ವಸತಿ ಶಾಲೆಗಳಲ್ಲಿನ ಮಹಿಳಾ ಶುಶ್ರೂಷಕಿ ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗಿದೆ. ಆ ವಿವಿಧ ಹುದ್ದೆಗಳ ವಿವರ ಈ ಕೆಳಗಿನಂತಿದೆ.
Vijaya Karnataka Web kpsc result 2020
kpsc final selection list 2020


1. ಅಲ್ಪಸಂಖ್ಯಾತರ ನಿರ್ದೇಶನಾಲಯದ ನವೋದಯ ವಸತಿ ಶಾಲೆಯಲ್ಲಿನ ಆಫೀಸ್ ಸೂಪೆರಿಂಟೆಂಡಂಟ್‌

2. ಅಲ್ಪಸಂಖ್ಯಾತರ ನಿರ್ದೇಶನಾಲಯದ ವಸತಿ ಶಾಲೆಯಲ್ಲಿನ ಹಾಸ್ಟೆಲ್ ವಾರ್ಡನ್

3. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಯಲ್ಲಿನ ಶಿಕ್ಷಕರ ಹುದ್ದೆ

4. ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ/ ಕಿತ್ತೂರು ಚನ್ನಮ್ಮ ವಸತಿ ಶಾಲೆಯಲ್ಲಿನ ಹಿಂದಿ ಭಾಷಾ ಶಿಕ್ಷಕರು

5. ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಭೌತಶಾಸ್ತ್ರ ಶಿಕ್ಷಕರ ಹುದ್ದೆ

6. ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ರಸಾಯನಶಾಸ್ತ್ರ ಶಿಕ್ಷಕರ ಹುದ್ದೆ

7. ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಸಮಾಜ ವಿಜ್ಞಾನ ಶಿಕ್ಷಕರ ಹುದ್ದೆ

8. ಅಲ್ಪಸಂಖ್ಯಾತರ ನಿರ್ದೇಶನಾಲಯದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಮಹಿಳಾ ಶುಶ್ರೂಷಕಿಯರ ಹುದ್ದೆ

9. ಅಲ್ಪಸಂಖ್ಯಾತರ ನಿರ್ದೇಶನಾಲಯದಲ್ಲಿನ ವಿದ್ಯಾರ್ಥಿ ನಿಲಯ ಮೇಲ್ವಿಚಾರಕರು(ವಾರ್ಡನ್) ಹುದ್ದೆ

ರಾಜ್ಯ ಲೆಕ್ಕಪತ್ರ ಇಲಾಖೆಯ ಅಕೌಂಟ್ಸ್‌ ಅಸಿಸ್ಟಂಟ್‌ ಹುದ್ದೆಗೆ ಅಂತಿಮ ಪಟ್ಟಿ ಪ್ರಕಟ

ಈ ಮೇಲಿನ ಎಲ್ಲಾ ಹುದ್ದೆಗಳಿಗೂ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ, ಗಳಿಸಿದ ಅಂಕಗಳ ಆಧಾರದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಆಯೋಗವು 2019 ರ ಡಿಸೆಂಬರ್‌ನಲ್ಲಿ ಪ್ರಕಟಿಸಿತ್ತು.

ಪ್ರಸ್ತುತ ಈ ಎಲ್ಲಾ ಹುದ್ದೆಗಳಿಗೂ ಫೈನಲ್‌ ಸೆಲೆಕ್ಷನ್‌ ಲಿಸ್ಟ್‌ ಅನ್ನು ಕರ್ನಾಟಕ ಲೋಕಸೇವಾ ಆಯೋಗದ ಅಧಿಕೃತ ವೆಬ್‌ www.kpsc.kar.nic.in ನಲ್ಲಿ ಬಿಡುಗಡೆ ಮಾಡಿದ್ದು, ಭೇಟಿ ನೀಡಿ ಚೆಕ್‌ ಮಾಡಿ. ಅಥವಾ ಈ ಕೆಳಗಿನ ಡೈರೆಕ್ಟ್‌ ಲಿಂಕ್‌ ಕ್ಲಿಕ್ ಮಾಡಿ.

ಅಂತಿಮ ಆಯ್ಕೆಪಟ್ಟಿಗಳಿಗಾಗಿ ಕ್ಲಿಕ್ ಮಾಡಿ

ಪೌರಾಡಳಿತ ಬಿಲ್‌ ಕಲೆಕ್ಟರ್ ಹುದ್ದೆಗಳಿಗೆ ಅಂತಿಮ ಆಯ್ಕೆಪಟ್ಟಿ ಬಿಡುಗಡೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ