ಆ್ಯಪ್ನಗರ

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ: ಅರ್ಜಿ ತಿದ್ದುಪಡಿ, ಶುಲ್ಕ ಪಾವತಿಗೆ ಕಾಲಾವಕಾಶ..

KSP Recruitment 2019: ಕರ್ನಾಟಕ ಪೊಲೀಸ್‌ ಕಾನ್ಸ್‌ಟೇಬಲ್ 3026 ಹುದ್ದೆಗಳ ನೇಮಕಾತಿಗೆ ಆನ್‌ಲೈನ್‌ ಅರ್ಜಿ ಸಲ್ಲಿಸಿರುವವರು, ಅರ್ಜಿ ಶುಲ್ಕ ಪಾವತಿಸಲು ಅಕ್ಟೋಬರ್ 19 ಕಡೆ ದಿನವಾಗಿದೆ. ಈ ನೇಮಕಾತಿ ಕುರಿತು ಇತರೆ ಹೆಚ್ಚಿನ ಮಾಹಿತಿ ಈ ಕೆಳಗಿನಂತಿದೆ.

Vijaya Karnataka Web 18 Oct 2019, 11:24 am

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು 2019 ಸೆಪ್ಟೆಂಬರ್ ತಿಂಗಳಲ್ಲಿ ಅಧಿಸೂಚನೆ ಹೊರಡಿಸಿ 3026 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್‌ ಅರ್ಜಿ ಆಹ್ವಾನಿಸಿತ್ತು. ಈ ಹುದ್ದೆಗಳಿಗೆ ಆನ್‌ಲೈನ್‌ ಅರ್ಜಿ ಸಲ್ಲಿಕೆಗೆ ಅಧಿಸೂಚನೆಯಲ್ಲಿ ತಿಳಿಸಿದ ಪ್ರಕಾರ ನಿನ್ನೆ (ಅಕ್ಟೋಬರ್ 17, 2019) ಕೊನೆ ದಿನವಾಗಿದೆ. ಆದರೆ ಅರ್ಜಿ ಶುಲ್ಕ ಪಾವತಿಗೆ ಇಂದು ಸೇರಿದಂತೆ 2 ದಿನಗಳ ಬಾಕಿ ಇದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅಕ್ಟೋಬರ್ 19, 2019 ವರೆಗೆ ಶುಲ್ಕ ಪಾವತಿಸಬಹುದಾಗಿದೆ.
Vijaya Karnataka Web ksp recruitment 2019


ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ ಮತ್ತು ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಅಧಿಕೃತ ಬ್ಯಾಂಕ್‌ ಶಾಖೆಗಳು ಅಥವಾ ಅಂಚೆ ಕಛೇರಿಯಲ್ಲಿ ಪಾವತಿಸಬಹುದು.

PSI Jobs: ಕರ್ನಾಟಕ ಪೊಲೀಸ್ ಸಬ್‌-ಇನ್ಸ್‌ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಅರ್ಜಿ ಶುಲ್ಕ ವಿವರ

ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.250

ಪ.ಜಾತಿ, ಪ.ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ರೂ.100

ಆನ್‌ಲೈನ್‌ ಅರ್ಜಿ ತಿದ್ದುಪಡಿಗೆ 10 ದಿನಗಳ ಅವಕಾಶ

ರಾಜ್ಯ ಪೊಲೀಸ್ ಇಲಾಖೆಯು ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ಅಕ್ಟೋಬರ್ 27 ವರೆಗೆ ಆನ್‌ಲೈನ್‌ ಅರ್ಜಿಯಲ್ಲಿನ ಯಾವುದೇ ತಪ್ಪು ಮಾಹಿತಿಗಳನ್ನು ಸರಿಪಡಿಸಿಕೊಳ್ಳಲು ಅವಕಾಶ ನೀಡಿದೆ. ನೇಮಕಾತಿ ಪ್ರಕ್ರಿಯೆಯ ಯಾವುದೇ ಸಂದರ್ಭದಲ್ಲಿ ಅಭ್ಯರ್ಥಿಗಳು ಸಣ್ಣ ತಪ್ಪು ಮಾಹಿತಿಗಳಿಂದ ಹುದ್ದೆಗೆ ವಂಚಿತರಾಗುವ ಅವಕಾಶವನ್ನು ತಪ್ಪಿಸಲು ಈ ಅವಕಾಶ ನೀಡಿದೆ.

2019 ಸಿವಿಲ್-ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಯ ಲಿಖಿತ ಪರೀಕ್ಷೆಗೆ ತಯಾರಿ ಕಡ್ಡಾಯವಾಗಿ ಹೀಗಿರಲಿ..

ತಪ್ಪು ಮಾಹಿತಿಗಳನ್ನು ಸರಿಪಡಿಸಲು, ಅಭ್ಯರ್ಥಿಗಳು ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ 'My Application' ಮೇಲೆ ಕ್ಲಿಕ್ ಮಾಡಿ. ನಂತರ ಓಪನ್‌ ಆಗುವ ತಮ್ಮ ಅರ್ಜಿ ರಿಜಿಸ್ಟರ್ ಐಡಿ ಮತ್ತು ಜನ್ಮ ದಿನಾಂಕ ನೀಡಿ ಲಾಗಿನ್‌ ಆಗಬೇಕು. ನಂತರ ತಪ್ಪು ಮಾಹಿತಿಗಳನ್ನು ಸರಿಪಡಿಸಿ, ಮತ್ತೆ ಅರ್ಜಿ ಸಬ್‌ಮಿಟ್‌ ಮಾಡಬೇಕು ಅಥವಾ 'Save' ಮಾಡಬೇಕು.

ಅಪ್ಲಿಕೇಶನ್ ತಿದ್ದುಪಡಿಗಾಗಿ ಕ್ಲಿಕ್ ಮಾಡಿ

ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿಗೆ ಸಂಬಂಧಿಸಿದಂತೆ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭ ದಿನ: ಸೆಪ್ಟೆಂಬರ್ 23, 2019

ಅರ್ಜಿ ಸಲ್ಲಿಸಲು ಕೊನೆಯ ದಿನ: ಅಕ್ಟೋಬರ್ 17, 2019

ಅರ್ಜಿ ಶುಲ್ಕ ಪಾವತಿಸಲು ಕೊನೆಯ ದಿನಾಂಕ: ಅಕ್ಟೋಬರ್ 19, 2019

ಆನ್‌ಲೈನ್‌ ಅರ್ಜಿ ತಿದ್ದುಪಡಿಗೆ ಕೊನೆ ದಿನ : ಅಕ್ಟೋಬರ್ 27, 2019

SSLC ವಿದ್ಯಾರ್ಹತೆಯ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಆಯ್ಕೆಗೆ ಯಾವೆಲ್ಲಾ ಪರೀಕ್ಷೆಗಳು ಇರುತ್ತವೆ ಗೊತ್ತೇ?

ಖಾಲಿ ಹುದ್ದೆಗಳ ವಿವರ

ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್ (CAR /DAR) ಪುರುಷ : 1013

ಪೊಲೀಸ್ ಕಾನ್ಸ್‌ಟೇಬಲ್ (ನಾಗರಿಕ) ಪುರುಷ ಮತ್ತು ಮಹಿಳಾ: 2013

ಅಧಿಸೂಚನೆಗಾಗಿ ಕ್ಲಿಕ್ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ