ಆ್ಯಪ್ನಗರ

ದಕ್ಷಿಣ ಕನ್ನಡ ಸಿವಿಲ್ ಪೊಲೀಸ್ ಕಾನ್ಸ್‌ಟೇಬಲ್‌ ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು, ದಕ್ಷಿಣ ಕನ್ನಡ ಜಿಲ್ಲೆಯ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿಗೆ ಸಂಬಂಧಿಸಿದಂತೆ ಮೊದಲನೇ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದೆ.

Vijaya Karnataka Web 19 May 2020, 4:47 pm

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯು, ದಕ್ಷಿಣ ಕನ್ನಡ ಜಿಲ್ಲೆಯ ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿಗೆ ಸಂಬಂಧಿಸಿದಂತೆ ಮೊದಲನೇ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟಿಸಿದೆ.
Vijaya Karnataka Web dakshina kannada civil pc selection list 2019
dakshina kannada civil pc selection list


ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಘಟಕದಲ್ಲಿ ಖಾಲಿ ಇದ್ದ 60 ನಾಗರೀಕ ಪೊಲೀಸ್‌ ಕಾನ್ಸ್‌ಟೇಬಲ್‌(ಪುರುಷ) ಮತ್ತು 18 ಮಹಿಳಾ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ 2019 ರ ಅಕ್ಟೋಬರ್‌ ತಿಂಗಳಲ್ಲಿ ಅಧಿಸೂಚನೆ ಹೊರಡಿಸಲಾಗಿತ್ತು.

ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಗಳಿಗೆ 2019 ರ ನವೆಂಬರ್ 17 ರಂದು ಲಿಖಿತ ಪರೀಕ್ಷೆ ನಡೆಸಲಾಗಿತ್ತು. ಈ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ 1:5 ಅಭ್ಯರ್ಥಿಗಳಿಗೆ ದೈಹಿಕ ಅರ್ಹತೆ ಮತ್ತು ಸಹಿಷ್ಣುತೆ ಪರೀಕ್ಷೆಗಳನ್ನು 2020 ರ ಮಾರ್ಚ್‌ನಲ್ಲಿ ಪ್ರಕಟಿಸಲಾಗಿತ್ತು. ನಂತರ ಮೆರಿಟ್‌ ಆಧಾರದಲ್ಲಿ 1:1 ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಿ ಪ್ರಸ್ತುತ ಬಿಡುಗಡೆ ಮಾಡಲಾಗಿದೆ.

ಪಂಚಾಯತ್ ರಾಜ್‌ ವಿಭಾಗದಲ್ಲಿ ಬೃಹತ್ ನೇಮಕಾತಿ; 7021 ಹುದ್ದೆಗೆ ಕರಡು ಅಧಿಸೂಚನೆ

ಈ ಆಯ್ಕೆಪಟ್ಟಿಯ ಅಭ್ಯರ್ಥಿಗಳು ಹುದ್ದೆಗಳಿಗೆ ಯಾವುದೇ ರೀತಿಯಲ್ಲಿ ಹಕ್ಕು ಹೊಂದಿರುವುದಿಲ್ಲ. ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕು. ನಂತರ ಅಂತಿಮ ಆಯ್ಕೆಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಈ ಕೆಳಗಿನ ಪಿಡಿಎಫ್‌ ಫೈಲ್‌ ಕ್ಲಿಕ್ ಮಾಡಿ ಅಭ್ಯರ್ಥಿಗಳ ಅಪ್ಲಿಕೇಶನ್‌ ನಂಬರ್, ರಿಜಿಸ್ಟರ್‌ ನಂಬರ್, ಹೆಸರು, ಗಳಿಸಿದ ಅಂಕಗಳ ಮಾಹಿತಿಗಳನ್ನು ತಿಳಿಯಬಹುದು.
Dakshina Kannada Civil Police Constable Provisional list

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ