ಆ್ಯಪ್ನಗರ

ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆ ವೈದ್ಯಕೀಯ ಪರೀಕ್ಷೆ ಪ್ರವೇಶ ಪತ್ರ ಪ್ರಕಟ

ಕರ್ನಾಟಕ ಪೊಲೀಸ್ ಇಲಾಖೆಯು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ (ಪುರುಷ) (ಸಿಎಆರ್/ ಡಿಎಆರ್)...

Vijaya Karnataka Web 15 Jan 2021, 3:35 pm
ಕರ್ನಾಟಕ ಪೊಲೀಸ್ ಇಲಾಖೆಯು ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ (ಪುರುಷ) (ಸಿಎಆರ್/ ಡಿಎಆರ್), ಈ ಕೆಳಗಿನ ನಾಲ್ಕು ಜಿಲ್ಲೆಗಳಿಗೆ ತಾತ್ಕಾಲಿಕ ಆಯ್ಕೆಪಟ್ಟಿಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪತ್ರ ಅಪ್‌ಲೋಡ್ ಮಾಡಿದೆ.
Vijaya Karnataka Web ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆ ವೈದ್ಯಕೀಯ ಪರೀಕ್ಷೆ ಪ್ರವೇಶ ಪತ್ರ ಪ್ರಕಟ


ಈ ನಾಲ್ಕು ಜಿಲ್ಲೆಗಳ ಅಭ್ಯರ್ಥಿಗಳಿಗೆ ವೈದ್ಯಕೀಯ ಪರೀಕ್ಷೆ ಪ್ರವೇಶ ಪತ್ರ ಬಿಡುಗಡೆ ಮಾಡಲಾಗಿದೆ.
- ಕೊಡಗು
- ಮಂಡ್ಯ
- ಶಿವಮೊಗ್ಗ
- ಮೈಸೂರು (KARP Mounted Coy, Mysuru)

ಪ್ರವೇಶ ಪತ್ರ ಡೌನ್‌ಲೋಡ್‌ ಹೇಗೆ?
- ಪೊಲೀಸ್ ಇಲಾಖೆಯ ಅಧಿಕೃತ ವೆಬ್‌ಸೈಟ್‌ http://apcnhk20.ksp-online.in/ ಗೆ ಭೇಟಿ ನೀಡಿ.
- ಓಪನ್ ಆದ ಪೇಜ್‌ನಲ್ಲಿ 'MY Application' ಎಂಬಲ್ಲಿ ಕ್ಲಿಕ್ ಮಾಡಿ.
- ಕೆಎಸ್‌ಪಿ'ಯ ಮತ್ತೊಂದು ಪೇಜ್‌ ಓಪನ್ ಆಗುತ್ತದೆ. ಈ ಪೇಜ್‌ನಲ್ಲಿ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್‌ ನಂಬರ್ ಹಾಗೂ ಜನ್ಮ ದಿನಾಂಕ ಮಾಹಿತಿಯನ್ನು ನೀಡಿ ಲಾಗಿನ್ ಆಗಿ.
- ಪ್ರವೇಶ ಪತ್ರ ಪ್ರದರ್ಶನವಾಗುತ್ತದೆ. ಡೌನ್‌ಲೋಡ್‌ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಉದ್ಯೋಗಿನಿ ಯೋಜನೆಯಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಪೊಲೀಸ್ ಇಲಾಖೆಯು 1005 ನಾನ್‌-ಹೈದೆರಾಬಾದ್ ಕರ್ನಾಟಕ ಸಶಸ್ತ್ರ ಪೊಲೀಸ್‌ ಕಾನ್ಸ್‌ಟೇಬಲ್‌ ಹುದ್ದೆಗಳಿಗೆ ಕಳೆದ ಮೇ ತಿಂಗಳಲ್ಲಿ ನೇಮಕಾತಿ ಅಧಿಸೂಚನೆ ಪ್ರಕಟಿಸಿತ್ತು. ಈ ಹುದ್ದೆಗೆ ಅರ್ಜಿ ಸಲ್ಲಿಸಿ ಲಿಖಿತ ಪರೀಕ್ಷೆ ಬರೆದ ಮತ್ತು ಸಹಿಷ್ಣುತೆ ಪರೀಕ್ಷೆ ಹಾಗೂ ದೇಹದಾರ್ಢ್ಯತೆ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದಲ್ಲಿ ತಾತ್ಕಾಲಿಕ ಆಯ್ಕೆಪಟ್ಟಿಯನ್ನು ಸಿದ್ಧಪಡಿಸಲಾಗಿತ್ತು. ಈ ಪಟ್ಟಿಯಲ್ಲಿನ ಅಭ್ಯರ್ಥಿಗಳು ವೈದ್ಯಕೀಯ ಪರೀಕ್ಷೆ ಮತ್ತು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಬೇಕಿದ್ದು, ಪ್ರಸ್ತುತ ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪತ್ರ ಅಪ್‌ಲೋಡ್ ಮಾಡಲಾಗಿದೆ.

ಅತೀ ಹೆಚ್ಚು ಸಂಬಳ ನೀಡುವ ಭಾರತದ ಟಾಪ್‌ 10 ಸರ್ಕಾರಿ ಹುದ್ದೆಗಳು ಯಾವುವು ಗೊತ್ತೇ?

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ