ಆ್ಯಪ್ನಗರ

ಉತ್ತರ ಕನ್ನಡ, ಮಂಗಳೂರು ಸಶಸ್ತ್ರ ಪಿಸಿ ನೇಮಕ: ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪತ್ರ ಪ್ರಕಟ

ಉತ್ತರ ಕನ್ನಡ (ಕಾರವಾರ) ಮತ್ತು ಮಂಗಳೂರು ಸಿಟಿ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ವೈದ್ಯಕೀಯ ...

Vijaya Karnataka Web 19 Jan 2021, 10:40 am
ಉತ್ತರ ಕನ್ನಡ (ಕಾರವಾರ) ಮತ್ತು ಮಂಗಳೂರು ಸಿಟಿ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪತ್ರವನ್ನು ಕರ್ನಾಟಕ ಪೊಲೀಸ್ ನೇಮಕಾತಿ ಪ್ರಾಧಿಕಾರವು ಪ್ರಕಟಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ ಲಿಖಿತ ಪರೀಕ್ಷೆ, ಸಹಿಷ್ಣುತೆ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆಗಳಲ್ಲಿ ಅರ್ಹತೆ ಪಡೆದು, ವೈದ್ಯಕೀಯ ಪರೀಕ್ಷೆಗೆ ಆಯ್ಕೆಯಾದ ಅಭ್ಯರ್ಥಿಗಳು, ಇಲಾಖೆಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಅಡ್ಮಿಟ್ ಕಾರ್ಡ್‌ ಡೌನ್‌ಲೋಡ್‌ ಮಾಡಿಕೊಳ್ಳಬಹುದು.
Vijaya Karnataka Web ಉತ್ತರ ಕನ್ನಡ, ಮಂಗಳೂರು ಸಶಸ್ತ್ರ ಪಿಸಿ ನೇಮಕ: ವೈದ್ಯಕೀಯ ಪರೀಕ್ಷೆಗೆ ಪ್ರವೇಶ ಪತ್ರ ಪ್ರಕಟ
ksp medical call letter


ಪ್ರವೇಶ ಪತ್ರ ಡೌನ್‌ಲೋಡ್‌ ಹೇಗೆ?
- ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ನೇಮಕಾತಿಗೆ ಸಂಬಂಧಿಸಿದ ವೆಬ್‌ಸೈಟ್‌ http://apcnhk20.ksp-online.in/ ಗೆ ಭೇಟಿ ನೀಡಿ.
- ಓಪನ್ ಆದ ಪೇಜ್‌ನಲ್ಲಿ 'My Application' ಎಂಬಲ್ಲಿ ಕ್ಲಿಕ್ ಮಾಡಿ.
- ಕೆಎಸ್‌ಪಿಯ ಮತ್ತೊಂದು ಪೇಜ್‌ ಓಪನ್ ಆಗುತ್ತದೆ. ಈ ಪೇಜ್‌ನಲ್ಲಿ ಅಭ್ಯರ್ಥಿಗಳು ತಮ್ಮ ಅಪ್ಲಿಕೇಶನ್‌ ನಂಬರ್ ಹಾಗೂ ಜನ್ಮ ದಿನಾಂಕ ಮಾಹಿತಿ ನೀಡಿ ಲಾಗಿನ್‌ ಆಗಿ.
- ನಂತರ ಪ್ರವೇಶ ಪತ್ರ ಪ್ರದರ್ಶನವಾಗುತ್ತದೆ. ಡೌನ್‌ಲೋಡ್ ಮಾಡಿ ಪ್ರಿಂಟ್ ತೆಗೆದುಕೊಳ್ಳಿ.

ಅಭ್ಯರ್ಥಿಗಳು ಪ್ರವೇಶ ಪತ್ರದಲ್ಲಿ ನೀಡಲಾದ ದಿನಾಂಕದಂದು ಅಗತ್ಯ ದಾಖಲೆಗಳೊಂದಿಗೆ ಮೆಡಿಕಲ್ ಟೆಸ್ಟ್‌ಗೆ ಹಾಜರಾಗಲು ಸೂಚಿಸಲಾಗಿದೆ.

ಕರ್ನಾಟಕ ಪೊಲೀಸ್ ಇಲಾಖೆಯು 1005 ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಹುದ್ದೆಗಳ ನೇಮಕಾತಿಗೆ 2020 ರ ಮೇ ತಿಂಗಳಲ್ಲಿ ಅಧಿಸೂಚನೆ ಪ್ರಕಟಿಸಿತ್ತು. ನಂತರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಕಳೆದ ಅಕ್ಟೋಬರ್ ನಲ್ಲಿ ಲಿಖಿತ ಪರೀಕ್ಷೆ ನಡೆಸಿ, ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಇತರೆ ಆಯ್ಕೆ ಪ್ರಕ್ರಿಯೆಗಳನ್ನು ನಡೆಸುತ್ತಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಿಂದ ಅಪ್ರೆಂಟಿಸ್ ನೇಮಕ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ