ಆ್ಯಪ್ನಗರ

ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ

ದಾವಣಗೆರೆ ಜಿಲ್ಲೆಯಲ್ಲಿ ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು 2020-21ನೇ ಸಾಲಿನಿಂದ ಪ್ರಾರಂಭಿಸಲಾಗಿದ್ದು...

Vijaya Karnataka Web 6 Nov 2020, 4:48 pm
ದಾವಣಗೆರೆ ಜಿಲ್ಲೆಯಲ್ಲಿ ಆತ್ಮ ನಿರ್ಭರ ಭಾರತ ಅಭಿಯಾನದ ಭಾಗವಾಗಿ ಪ್ರಧಾನಮಂತ್ರಿಗಳ ಕಿರು ಆಹಾರ ಉದ್ದಿಮೆಗಳ ನಿಯಮಬದ್ಧಗೊಳಿಸುವಿಕೆ ಯೋಜನೆಯನ್ನು 2020-21ನೇ ಸಾಲಿನಿಂದ ಪ್ರಾರಂಭಿಸಲಾಗಿದ್ದು, ಯೋಜನೆಯ ಅನುಷ್ಠಾನಕ್ಕಾಗಿ ಅರ್ಹ ವ್ಯಕ್ತಿಗಳಿಂದ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
Vijaya Karnataka Web ಜಿಲ್ಲಾ ಸಂಪನ್ಮೂಲ ವ್ಯಕ್ತಿ ಹುದ್ದೆಗೆ ಅರ್ಜಿ ಆಹ್ವಾನ
district resource person job 2020


ಜಿಲ್ಲಾ ಸಂಪನ್ಮೂಲ ವ್ಯಕ್ತಿಗಳಿಗೆ ಇರಬೇಕಾದ ಶೈಕ್ಷಣಿಕ ಅರ್ಹತೆ ಮತ್ತು ಇತರೆ ಅರ್ಹತೆಗಳು

- ಆಹಾರ ತಂತ್ರಜ್ಞಾನ/ಆಹಾರ ಇಂಜಿನಿಯರಿಂಗ್‌ನಲ್ಲಿ ಡಿಪ್ಲೊಮ/ಪದವಿಯನ್ನು ಪ್ರತಿಷ್ಠಿತ ರಾಷ್ಟ್ರ/ ಅಂತರರಾಷ್ಟ್ರೀಯ ವಿಶ್ವವಿದ್ಯಾಲಯ/ ಸಂಸ್ಥೆಗಳಿಂದ ಪಡೆದಿರಬೇಕು.

- ಆಹಾರ ಸಂಸ್ಕರಣಾ ಕೈಗಾರಿಕೆಗಳಿಗೆ ತಂತ್ರಜ್ಞಾನ ಉನ್ನತೀಕರಣ, ಹೊಸ ಉತ್ಪನ್ನ ಅಭಿವೃದ್ಧಿ, ಗುಣಮಟ್ಟ ಖಾತ್ರಿ, ಆಹಾರ ಭದ್ರತಾ ನಿರ್ವಹಣೆಗಾಗಿ ಸಲಹಾ ಸೇವೆಗಳನ್ನು ಒದಗಿಸಿದ 3-5 ವರ್ಷಗಳ ಅನುಭವವಿರಬೇಕು. ಒಂದು ವೇಳೆ ಆಹಾರ ತಂತ್ರಜ್ಞಾನ ವಿಷಯದಲ್ಲಿ ಅರ್ಹತೆ ಹೊಂದಿರುವ ವ್ಯಕ್ತಿಗಳು ಲಭ್ಯವಾಗದಿದ್ದರೆ, ಆಹಾರ ಸಂಸ್ಕರಣಾ ಕೈಗಾರಿಕೆ, ಬ್ಯಾಂಕಿಂಗ್, ಡಿಪಿಆರ್ ಸಿದ್ದಪಡಿಸುವಿಕೆಯಲ್ಲಿ ಹಾಗೂ ತರಬೇತಿಯಲ್ಲಿ ಅನುಭವವುಳ್ಳ ವ್ಯಕ್ತಿಗಳನ್ನು ಪರಿಗಣಿಸಲಾಗುವುದು.

- ಅಭ್ಯರ್ಥಿಗಳಿಗೆ ಕನ್ನಡ ಭಾಷಾಜ್ಞಾನ ಅತ್ಯವಶ್ಯಕವಾಗಿದೆ.

ಚಿಕ್ಕಮಗಳೂರು ಜಿಲ್ಲೆಯಲ್ಲಿ ಪತ್ರಿಕೋದ್ಯಮ ಅಪ್ರೆಂಟಿಸ್ ಉದ್ಯೋಗಾವಕಾಶ

ಅರ್ಜಿ ಸಲ್ಲಿಕೆ ಹೇಗೆ?

ಅರ್ಜಿ ನಮೂನೆಗಳು ಜಂಟಿ ಕೃಷಿ ನಿರ್ದೇಶಕರ ಕಛೇರಿ, ದಾವಣಗೆರೆಯಲ್ಲಿ ಲಭ್ಯವಿದ್ದು ಪಡೆಯಬಹುದು. ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 18, 2020 ರ ಒಳಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ದಾವಣಗೆರೆ ಇವರ ಕಛೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರು (ವಿಷಯ ತಜ್ಞರು), ಜಂಟಿ ಕೃಷಿ ನಿರ್ದೇಶಕರ ಕಛೇರಿ, ದಾವಣಗೆರೆ ಇಲ್ಲಿಗೆ ಭೇಟಿ ನೀಡಬಹುದು. ಅಥವಾ ಮೊಬೈಲ್ ಸಂಖ್ಯೆ: 8277931105 ಗೆ ಕರೆ ಮಾಡಿ ಇವರನ್ನು ಸಂಪರ್ಕಿಸಬಹುದೆಂದು ಕೃಷಿ ಜಂಟಿ ನಿರ್ದೇಶಕರಾದ ಶ್ರೀನಿವಾಸ್ ಚಿಂತಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗ್ರೂಪ್-ಎ ಎಸಿಎಫ್ ಹುದ್ದೆಗಳಿಗೆ ಮುಖ್ಯ ಪರೀಕ್ಷೆಯ ಕಟ್‌ಆಫ್‌ ಪಟ್ಟಿ ಪ್ರಕಟ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ