ಆ್ಯಪ್ನಗರ

ಮಂಡ್ಯ ಗ್ರಾಮ ಲೆಕ್ಕಿಗ ಹುದ್ದೆ ಅರ್ಜಿಗೆ ದಿನಾಂಕ ವಿಸ್ತರಣೆ

2019-20 ನೇ ಸಾಲಿನ ಮಂಡ್ಯ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 54 ಗ್ರಾಮಲೆಕ್ಕಿಗರ ನೇಮಕಾತಿಗೆ ಸಂಬಂಧಿಸಿದಂತೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಕೊರೊನಾ ಎಫೆಕ್ಟ್‌ನಿಂದ ಬಹುಸಂಖ್ಯಾತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು...

Vijaya Karnataka Web 18 Jun 2020, 5:07 pm

2019-20 ನೇ ಸಾಲಿನ ಮಂಡ್ಯ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 54 ಗ್ರಾಮಲೆಕ್ಕಿಗರ ನೇಮಕಾತಿಗೆ ಸಂಬಂಧಿಸಿದಂತೆ, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿತ್ತು. ಆದರೆ ಕೊರೊನಾ ಎಫೆಕ್ಟ್‌ನಿಂದ ಬಹುಸಂಖ್ಯಾತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ವಿಫಲರಾದ ಹಿನ್ನೆಲೆಯಲ್ಲಿ, ಈಗ ದಿನಾಂಕ ವಿಸ್ತರಣೆ ಮಾಡಿ ಪ್ರಕಟಣೆ ಹೊರಡಿಸಲಾಗಿದೆ.
Vijaya Karnataka Web Karnataka govt jobs
mandya va recruitment 2020


ಪ್ರಸ್ತುತ ಅಭ್ಯರ್ಥಿಗಳಿಂದ ದೂರುಗಳು ಕೇಳಿಬಂದಿರುವ ಕಾರಣದಿಂದಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕವಾಗಿದ್ದ 01-06-2020 ನ್ನು ಮುಂದುವರೆಸಿ ದಿನಾಂಕ 20-06-2020 ರವರೆಗೆ ಹಾಗೂ ಶುಲ್ಕ ಪಾವತಿಸಲು ನಿಗದಿಪಡಿಸಿದ ಕೊನೆಯ ದಿನಾಂಕ 06-06-2020 ರವರೆಗೆ ವಿಸ್ತರಿಸಿ ಮಂಡ್ಯ ಜಿಲ್ಲಾ ಕಂದಾಯ ಘಟಕ ಆದೇಶಿಸಿದೆ.

ಪ್ರಮುಖ ದಿನಾಂಕಗಳು

ಆನ್‌ಲೈನ್‌ ಅರ್ಜಿಗೆ ಕೊನೆ ದಿನಾಂಕ : 20-06-2020

ಶುಲ್ಕ ಪಾವತಿಗೆ ಕೊನೆ ದಿನಾಂಕ : 06-06-2020

ಹುದ್ದೆಯ ಹೆಸರು : ಗ್ರಾಮಲೆಕ್ಕಿಗ

ಹುದ್ದೆಗಳ ಸಂಖ್ಯೆ : 54

ವೇತನ ಶ್ರೇಣಿ : ರೂ.21000-42000.

ಎಸ್‌ಎಸ್‌ಸಿ ಎಸ್‌ಐ, ಕೇಂದ್ರ ಸಶಸ್ತ್ರ ಪೊಲೀಸ್‌ ಪಡೆ ಪರೀಕ್ಷೆಗೆ ಅಧಿಸೂಚನೆ ಪ್ರಕಟ; ಅರ್ಜಿ ಆಹ್ವಾನ

ಇತರೆ-08, ಮಹಿಳಾ-17, ಗ್ರಾಮೀಣ-13, ಅಂಗವಿಕಲ-02, ಮಾಜಿ ಸೈನಿಕ-04, ಕನ್ನಡ ಮಾಧ್ಯಮ ಅಭ್ಯರ್ಥಿ-06, ಯೋಜನಾ ನಿರಾಶ್ರಿತ-04 ಹುದ್ದೆಗಳು ಮೀಸಲಾತಿಗೆ ಅನುಗುಣವಾಗಿ ಖಾಲಿ ಇವೆ.

ವಿದ್ಯಾರ್ಹತೆ

- ದ್ವಿತೀಯ ಪಿಯುಸಿ ಅಥವಾ ಸಿಬಿಎಸ್‌ಇ ಅಥವಾ ಐಸಿಎಸ್‌ಇ ನಡೆಸುವ 12ನೇ ತರಗತಿ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

- ಪಿಯುಸಿ ಹೊರತುಪಡಿಸಿ ಜೆಒಸಿ, ಡಿಪ್ಲೊಮ ಮತ್ತು ಇನ್ನಿತರ ಯಾವುದೇ ವಿದ್ಯಾರ್ಹತೆಗಳನ್ನು ಈ ಹುದ್ದೆಗಳಿಗೆ ಪರಿಗಣಿಸಲಾಗುವುದಿಲ್ಲ.

- ಕಂಪ್ಯೂಟರ್ ಜ್ಞಾನ ಹೊಂದಿರಬೇಕು.
UPSC ಇಂದ 413 ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟ: ಅರ್ಜಿ ಆಹ್ವಾನ

ಆಯ್ಯೆ ವಿಧಾನ ಹೇಗೆ?

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪಿಯುಸಿ ಶೇಕಡ ಅಂಕಗಳ ಆಧಾರದ ಮೇಲೆ ಮೆರಿಟ್ ಲಿಸ್ಟ್‌ ಸಿದ್ಧಪಡಿಸಿ ಆಯ್ಕೆ ಮಾಡಲಾಗುತ್ತದೆ.

ವಯೋಮಿತಿ

ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ಆಗಿರಬೇಕು.

- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯೋಮಿತಿ ನಿಗದಿಪಡಿಸಲಾಗಿದೆ.

- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷ ಗರಿಷ್ಠ ವಯೋಮಿತಿ.

- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 35 ವರ್ಷ ಗರಿಷ್ಠ ವಯೋಮಿತಿ.

ಅರ್ಜಿ ಶುಲ್ಕ

- SC / ST / ಪ್ರವರ್ಗ-1 ರ ಅಭ್ಯರ್ಥಿಗಳಿಗೆ ರೂ.100.

- ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ರೂ.200.

- ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ರೂ.200.
36,261 ಸಿವಿಲ್ ಪೊಲೀಸ್‌ ಕಾನ್ಸ್‌ಟೇಬಲ್‌ ನೇಮಕಾತಿಗೆ ಕರಡು ಅಧಿಸೂಚನೆ ಪ್ರಕಟ

ಅರ್ಜಿ ಶುಲ್ಕ ಪಾವತಿಸುವ ವಿಧಾನ

ಆನ್‌ಲೈನ್‌ ಅರ್ಜಿ ಸಲ್ಲಿಕೆ ನಂತರ ಶುಲ್ಕ ಪಾವತಿ ಚಲನ್‌ ಡೌನ್‌ಲೋಡ್‌ ಮಾಡಿಕೊಳ್ಳಬೇಕು. ನಂತರ ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ ಶಾಖೆಯಲ್ಲಿ ಶುಲ್ಕ ಪಾವತಿಸಬೇಕು.

ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್‌

ಅರ್ಜಿ ಸಲ್ಲಿಕೆಗೆ ಭೇಟಿ ನೀಡಬೇಕಾದ ವೆಬ್‌ ವಿಳಾಸ : mandya-va.kar.nic.in

ಅರ್ಜಿಗಳನ್ನು ಖುದ್ದಾಗಿ ಅಥವಾ ಅಂಚೆ ಮೂಲಕ ಸಲ್ಲಿಸಲು ಅವಕಾಶ ಇರುವುದಿಲ್ಲ. ಕಡ್ಡಾಯವಾಗಿ ಆನ್‌ಲೈನ್‌ ಮೂಲಕವೇ ಸಲ್ಲಿಸಬೇಕು.

ಅಧಿಸೂಚನೆಗಾಗಿ ಕ್ಲಿಕ್ ಮಾಡಿ

ಆನ್‌ಲೈನ್‌ ಅರ್ಜಿಗೆ ಡೈರೆಕ್ಟ್‌ ಲಿಂಕ್‌ಗಾಗಿ ಕ್ಲಿಕ್ ಮಾಡಿ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ