ಆ್ಯಪ್ನಗರ

ಪಿಯು ಉಪನ್ಯಾಸಕರ ಹುದ್ದೆಗೆ ನೇಮಕಾತಿ ಆದೇಶ ಪ್ರಕಟ

ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿದ್ದ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿದ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ..

Vijaya Karnataka Web 20 Nov 2020, 8:01 pm
ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಖಾಲಿಯಿದ್ದ ವಿವಿಧ ವಿಷಯಗಳ ಉಪನ್ಯಾಸಕರ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿದ ಆಯ್ಕೆಯಾಗಿರುವ ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ಹೊರಡಿಸುವ ಕುರಿತು ಇಂದು ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರ ಕಛೇರಿಯಿಂದ ಅಧಿಕೃತ ಜ್ಞಾಪನ ಪತ್ರ ಹೊರಡಿಸಲಾಗಿದೆ.
Vijaya Karnataka Web pu lectures appointment order 2020
pu lectures appointment order 2020


ಈ ಹುದ್ದೆಗಳಿಗೆ ದಿನಾಂಕ 21-12-2019 ರಂದು ಅಂತಿಮ ಆಯ್ಕೆಪಟ್ಟಿ ಪ್ರಕಟಿಸಲಾಗಿತ್ತು. ಸದರಿ ಪಟ್ಟಿಯಲ್ಲಿರುವ ಅರ್ಹ ಅಭ್ಯರ್ಥಿಗಳಿಗೆ ಉಪನ್ಯಾಸಕರಾಗಿ ನೇಮಕ ಮಾಡುವ ಮುನ್ನ ಸ್ಥಳವನ್ನು ಆಯ್ಕೆ ಮಾಡಿಕೊಳ್ಳುವ ಪ್ರಕ್ರಿಯೆಯನ್ನು ದಿನಾಂಕ 11-08-2020 ರಿಂದ 03-09-2020 ರವರೆಗೆ ಆನ್‌ಲೈನ್‌ ಕೌನ್ಸಿಲಿಂಗ್ ಮೂಲಕ ಸ್ಥಳ ಆಯ್ಕೆ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿತ್ತು.

ಪ್ರಸ್ತುತ ಅಧಿಕೃತ ಜ್ಞಾಪನ ಪತ್ರವನ್ನು ಪ್ರಕಟಿಸಿದ್ದು, ಅರ್ಹ ಅಭ್ಯರ್ಥಿಗಳನ್ನು ಪದವಿ ಪೂರ್ವ ಶಿಕ್ಷಣ ಇಲಾಖೆಯಲ್ಲಿ ವೇತನ ಶ್ರೇಣಿ ರೂ.43,100-83,900 ರಲ್ಲಿ ಉಪನ್ಯಾಸಕರ ಹುದ್ದೆಗೆ ಷರತ್ತು ಮತ್ತು ನಿಬಂಧನೆಗಳಿಗೆ ಒಳಪಟ್ಟು ತಾತ್ಕಾಲಿಕವಾಗಿ ನೇಮಿಸಿ, ಅವರ ಹೆಸರಿನ ಮುಂದೆ ನಮೂದಿಸಿರುವ ಕಾಲೇಜಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಲಾಗಿದೆ. ಹಾಗೂ ಸ್ಥಳ ನಿಯುಕ್ತಿಯನ್ನು ಮಾರ್ಪಾಡು ಮಾಡಲು ಅವಕಾಶವಿರುವುದಿಲ್ಲ ಎಂದು ಸೂಚಿಸಲಾಗಿದೆ.

ಪಿಯು ಉಪನ್ಯಾಸಕರ ನೇಮಕಾತಿಯಲ್ಲಿ ಭಾಗವಹಿಸಿರುವ ಅಭ್ಯರ್ಥಿಗಳು ಇತರೆ ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಅಧಿಕೃತ ವೆಬ್‌ಸೈಟ್‌ www.kea.kar.nic.in ಗೆ ಭೇಟಿ ನೀಡಿರಿ.

ಎಸ್‌ಬಿಐ'ನಿಂದ 8500 ಅಪ್ರೆಂಟಿಸ್‌ ಹುದ್ದೆಗಳ ನೇಮಕ: ಅರ್ಜಿ ಸಲ್ಲಿಕೆ ಆರಂಭ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ