ಆ್ಯಪ್ನಗರ

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಪೂರ್ವಭಾವಿ ಪರೀಕ್ಷೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ

Vijaya Karnataka Web 1 Sep 2020, 7:25 pm
ಕರ್ನಾಟಕ ಲೋಕಸೇವಾ ಆಯೋಗವು ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್ 'ಎ' ವೃಂದದ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ, ಪೂರ್ವಭಾವಿ ಪರೀಕ್ಷೆಗೆ ಪರಿಷ್ಕೃತ ದಿನಾಂಕ ಪ್ರಕಟಿಸಿದೆ.
Vijaya Karnataka Web kpsc acf prelims exam 2020 date
kpsc acf prelims exam 2020 date


ಆಯೋಗವು ಒಟ್ಟು 24 ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಗ್ರೂಪ್‌ 'ಎ' ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯನ್ನು ಓ.ಎಂ.ಆರ್ ಮಾದರಿಯಲ್ಲಿ ಬೆಂಗಳೂರು ಕೇಂದ್ರದಲ್ಲಿ ಮಾತ್ರ ದಿನಾಂಕ: 11-10-2020 ರಂದು ನಡೆಸಲು ದಿನಾಂಕ ಮರುನಿಗದಿಪಡಿಸಲಾಗಿದೆ.

ವೇಳಾಪಟ್ಟಿಯನ್ನು ಈ ಕೆಳಗಿನಂತೆ ಸಂಕ್ಷಿಪ್ತವಾಗಿ ಚೆಕ್‌ ಮಾಡಿಕೊಳ್ಳಿ.

kpsc acf prelims exam 2020 date


ಕೆಪಿಎಸ್‌ಸಿಯು ಈ ಹಿಂದೆಯೇ ಎಸಿಎಫ್‌ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಗೆ ವೇಳಾಪಟ್ಟಿ ನಿಗದಿಪಡಿಸಿತ್ತು. ಆದರೆ ಕೊರೊನಾ ಪರಿಣಾಮ ಎರಡು ಬಾರಿ ಪರೀಕ್ಷೆ ದಿನಾಂಕವನ್ನು ಮುಂದೂಡಲಾಗಿತ್ತು. ಪ್ರಸ್ತುತ ಪರೀಕ್ಷೆ ದಿನಾಂಕವನ್ನು ಪರಿಷ್ಕೃತಗೊಳಿಸಿ ಮೇಲಿನಂತೆ ಮರುನಿಗದಿಪಡಿಸಲಾಗಿದೆ.

ಎಸ್‌ಎಸ್‌ಸಿ ಸಿಜಿಎಲ್‌ ಟೈಯರ್-3 ಪರೀಕ್ಷೆ ವೇಳಾಪಟ್ಟಿ ಪ್ರಕಟ

ಕೆಪಿಎಸ್‌ಸಿ'ಯು ಕರ್ನಾಟಕ ರಾಜ್ಯ ಅರಣ್ಯ ಪರಿಸರ ಮತ್ತು ಜೀವಶಾಸ್ತ್ರ ಇಲಾಖೆಯಲ್ಲಿನ 2017-18ನೇ ಸಾಲಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಹುದ್ದೆಗಳಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಸಲಾಗುತ್ತಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ