ಆ್ಯಪ್ನಗರ

ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ನೇಮಕ: ನೇರ ಸಂದರ್ಶನಕ್ಕೆ ಆಹ್ವಾನ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೋವಿಡ್-19 ನಿಯಂತ್ರಣದ ಸಲುವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ...

Vijaya Karnataka Web 23 Oct 2020, 2:15 pm
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೋವಿಡ್-19 ನಿಯಂತ್ರಣದ ಸಲುವಾಗಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಹುದ್ದೆಗಳನ್ನು ಭರ್ತಿ ಮಾಡಲು ನೇಮಕಾತಿ ಪ್ರಕಟಣೆ ಹೊರಡಿಸಲಾಗಿದೆ.
Vijaya Karnataka Web ಕಿರಿಯ ಮಹಿಳಾ ಆರೋಗ್ಯ ಸಹಾಯಕಿಯರ ನೇಮಕ: ನೇರ ಸಂದರ್ಶನಕ್ಕೆ ಆಹ್ವಾನ
junior women health assistant recruitment 2020


ಈ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ತಾತ್ಕಾಲಿಕವಾಗಿ 6 ತಿಂಗಳ ಅವಧಿಗೆ ನೇಮಕ ಮಾಡಿಕೊಳ್ಳಲಾಗುತ್ತದೆ. ಅರ್ಹ ಮತ್ತು ಆಸಕ್ತ ಮಹಿಳಾ ಅಭ್ಯರ್ಥಿಗಳು ದಿನಾಂಕ 29-10-2020 ರಂದು ಮಂಗಳವಾರ ಪೂರ್ವಾಹ್ನ 11-00 ಗಂಟೆಗೆ ನೇತ್ರಾವತಿ ಸಭಾಂಗಣ, ಜಿಲ್ಲಾ ಪಂಚಾಯತ್ ಆವರಣ, ದಕ್ಷಿಣ ಕನ್ನಡ ಮಂಗಳೂರು ಇಲ್ಲಿ ನೇರ ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿದೆ.
ಹುದ್ದೆಯ ಹೆಸರು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ
ಹುದ್ದೆಗಳ ಸಂಖ್ಯೆ97
ಮಾಸಿಕ ವೇತನರೂ.15,000.
ವಿದ್ಯಾರ್ಹತೆಪಿಯುಸಿ ಮತ್ತು ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ತರಬೇತಿಯ ಪ್ರಮಾಣ ಪತ್ರ ಮತ್ತು ನರ್ಸಿಂಗ್ ಕೌನ್ಸಿಲ್ ಬೋರ್ಡ್‌ನಿಂದ ಪಡೆದ ಪ್ರಮಾಣ ಪತ್ರ ಹೊಂದಿರಬೇಕು.

ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ
ಸಲ್ಲಿಸಬೇಕಾದ ದಾಖಲೆಗಳು

- ವಿದ್ಯಾರ್ಹತೆಗೆ ಸಂಬಂಧಿಸಿದ ಎಲ್ಲಾ ಅಂಕಪಟ್ಟಿಗಳ ಮೂಲ ಪ್ರತಿ ಹಾಗೂ ಅವುಗಳ ಸ್ವಯಂ ದೃಢೀಕೃತ ನಕಲು ಪ್ರತಿಗಳು.

- ಅನುಭವ ಪ್ರಮಾಣ ಪತ್ರ.

- ಇತ್ತೀಚಿನ ಭಾವಚಿತ್ರದೊಂಗದಿಗೆ ಹಾಜರಾಗುವುದು.

ಇತರೆ ಹೆಚ್ಚಿನ ಮಾಹಿತಿಗಳನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಕಚೇರಿ, ದಕ್ಷಿಣ ಕನ್ನಡ, ಮಂಗಳೂರು, ಇಲ್ಲಿನ ಕಚೇರಿ ವೇಳೆಯಲ್ಲಿ ದೂರವಾಣಿ ಮುಖಾಂತರ ಪಡೆಯಬಹುದು.

ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ನೇರ ಸಂದರ್ಶನಕ್ಕೆ ಆಹ್ವಾನ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ