ಆ್ಯಪ್ನಗರ

ಹೈಕೋರ್ಟ್‌ನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ: ನೇಮಕ ಪ್ರಕ್ರಿಯೆ ಹೇಗಿರುತ್ತದೆ ಗೊತ್ತೇ?

Karnataka High Court Translators Recruitment Exam Pattern in Kannada: ಕರ್ನಾಟಕ ಹೈಕೋರ್ಟ್‌ನಲ್ಲಿ ಭಾಷಾಂತರಕಾರರ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು, ನೇಮಕಾತಿ ಪ್ರಕ್ರಿಯೆ ಹೇಗಿರುತ್ತದೆ ಎಂದು ಈ ಕೆಳಗಿನಂತೆ ತಿಳಿಸಲಾಗಿದೆ.

Vijaya Karnataka Web 18 Sep 2021, 3:40 pm
ಕರ್ನಾಟಕ ರಾಜ್ಯ ಹೈಕೋರ್ಟ್‌ ಭಾಷಾಂತರಕಾರರ ಹುದ್ದೆಗೆ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗೆ ಪದವಿ, ಸ್ನಾತಕೋತ್ತರ ಪದವೀಧರರು ಅರ್ಜಿ ಸಲ್ಲಿಸಬಹುದು. ಸದರಿ ಹುದ್ದೆಗೆ ನೇಮಕ ಪ್ರಕ್ರಿಯೆ ಹೇಗಿರುತ್ತದೆ ಎಂದು ಈ ಕೆಳಗಿನಂತೆ ತಿಳಿಸಲಾಗಿದೆ
Vijaya Karnataka Web karnataka high court translators recruitment process in kannada
ಹೈಕೋರ್ಟ್‌ನಲ್ಲಿ ಪದವೀಧರರಿಗೆ ಉದ್ಯೋಗಾವಕಾಶ: ನೇಮಕ ಪ್ರಕ್ರಿಯೆ ಹೇಗಿರುತ್ತದೆ ಗೊತ್ತೇ?


​ನೇಮಕಾತಿ ವಿಧಾನ

ಅಭ್ಯರ್ಥಿಗಳ ನೇಮಕಾತಿಯನ್ನು ಕರ್ನಾಟಕ ಉಚ್ಛ ನ್ಯಾಯಾಲಯ ಸೇವಾ (ಸೇವೆ ಮತ್ತು ನೇಮಕಾತಿ ಷರತ್ತುಗಳು) (4ನೇ ತಿದ್ದುಪಡಿ) ನಿಯಮಗಳು, 2017 ರ ಪ್ರಕಾರ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಮೌಖಿಕ ಸಂದರ್ಶನ ನಡೆಸಲಾಗುತ್ತದೆ. ಎಷ್ಟು ಅಂಕಗಳಿಗೆ ಪರೀಕ್ಷೆ, ಸಂದರ್ಶನ ಇರುತ್ತದೆ ಎಂದು ಈ ಕೆಳಗಿನಂತೆ ತಿಳಿಸಲಾಗಿದೆ.

ಲಿಖಿತ ಪರೀಕ್ಷೆ ಯಲ್ಲಿ ಎರಡು ಪತ್ರಿಕೆಗಳಿರುತ್ತವೆ.

  • ಪತ್ರಿಕೆ - 1
  • ಪತ್ರಿಕೆ - 2

ಕರ್ನಾಟಕ ಹೈಕೋರ್ಟ್‌ನಲ್ಲಿ ಪದವಿ, ಸ್ನಾತಕೋತ್ತರ ಪದವಿ ಪಾಸಾದವರಿಗೆ ಉದ್ಯೋಗ: ಅರ್ಜಿ ಆಹ್ವಾನ

​ಪತ್ರಿಕೆ - 1

ಈ ಪತ್ರಿಕೆಯು ಭಾಷಾ ಜ್ಞಾನ ಪರೀಕ್ಷೆ ಆಗಿದ್ದು, ಕನ್ನಡ ಮತ್ತು ಇಂಗ್ಲಿಷ್‌ ಭಾಷೆ ಬಗ್ಗೆ ಪ್ರಶ್ನೆಗಳು ಇರುತ್ತವೆ. ಗರಿಷ್ಠ 100 ಅಂಕಗಳಿಗೆ ಪರೀಕ್ಷೆ ಇರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಮಾನ್ಯ ಅಭ್ಯರ್ಥಿ, ಪ್ರವರ್ಗ-1, 2A, 2B, 3A, 3B ಅಭ್ಯರ್ಥಿಗಳು ಕನಿಷ್ಠ 60 ಅಂಕಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕನಿಷ್ಠ 50 ಅಂಕಗಳನ್ನು ಗಳಿಸಬೇಕು.

​ಪತ್ರಿಕೆ - 2

ಈ ಪತ್ರಿಕೆಯು ಭಾಷಾಂತರ ಪರೀಕ್ಷೆ ಆಗಿದ್ದು, ಕನ್ನಡದಿಂದ ಇಂಗ್ಲಿಷ್‌ ಭಾಷೆಗೆ, ಇಂಗ್ಲಿಷ್‌ ಭಾಷೆಯಿಂದ ಕನ್ನಡ ಭಾಷೆಗೆ ಭಾಷಾಂತರ ಮಾಡಬೇಕಿರುತ್ತದೆ. ಈಪತ್ರಿಕೆಯು ಸಹ 100 ಅಂಕಗಳಿಗೆ ಪರೀಕ್ಷೆ ಹೊಂದಿರುತ್ತದೆ. ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಮಾನ್ಯ ಅಭ್ಯರ್ಥಿ, ಪ್ರವರ್ಗ-1, 2A, 2B, 3A, 3B ಅಭ್ಯರ್ಥಿಗಳು ಕನಿಷ್ಠ 60 ಅಂಕಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕನಿಷ್ಠ 50 ಅಂಕಗಳನ್ನು ಗಳಿಸಬೇಕು.

​ಮೌಖಿಕ ಸಂದರ್ಶನ

ಲಿಖಿತ ಪರೀಕ್ಷೆಯಲ್ಲಿ ಕನಿಷ್ಠ ಅಂಕಗಳನ್ನು ಗಳಿಸಿ ಶಾರ್ಟ್‌ಲಿಸ್ಟ್‌ ಆದ ಅಭ್ಯರ್ಥಿಗಳಿಗೆ ಮೌಖಿಕ ಸಂದರ್ಶನ ನಡೆಸಲಾಗುತ್ತದೆ. ಮೌಖಿಕ ಸಂದರ್ಶನವು 50 ಗರಿಷ್ಠ ಅಂಕಗಳಿಗೆ ಇರುತ್ತದೆ. ಇದರಲ್ಲಿ ಉತ್ತೀರ್ಣರಾಗಲು ಸಾಮಾನ್ಯ ಅಭ್ಯರ್ಥಿ, ಪ್ರವರ್ಗ-1, 2A, 2B, 3A, 3B ಅಭ್ಯರ್ಥಿಗಳು ಕನಿಷ್ಠ 25 ಅಂಕಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಕನಿಷ್ಠ 20 ಅಂಕಗಳನ್ನು ಗಳಿಸಬೇಕು.

ಈ ಮೇಲಿನ ಪರೀಕ್ಷೆಗಳಲ್ಲಿ ಹೆಚ್ಚು ಅಂಕಗಳಿಸಿದವರನ್ನು ಮೆರಿಟ್ ಮತ್ತು ವರ್ಗಾವಾರು ಮೀಸಲಾತಿಗೆ ಅನುಗುಣವಾಗಿ ಶಾರ್ಟ್‌ ಲಿಸ್ಟ್‌ ಮಾಡಿ ಆಯ್ಕೆ ಮಾಡಲಾಗುತ್ತದೆ.

​ಹೈಕೋರ್ಟ್‌ ಹುದ್ದೆ ವಿವರ

  • ಹುದ್ದೆ ಸಂಸ್ಥೆ : ಕರ್ನಾಟಕ ಉಚ್ಛ ನ್ಯಾಯಾಲಯ
  • ಹುದ್ದೆಯ ಹೆಸರು : ಭಾಷಾಂತರಕಾರರು
  • ಹುದ್ದೆಗಳ ಸಂಖ್ಯೆ : 3
  • ಹುದ್ದೆಯ ಸ್ಥಳ : ಬೆಂಗಳೂರು

​ವಿದ್ಯಾರ್ಹತೆ

ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿ ಪದವಿಯಲ್ಲಿ ಕನ್ನಡವನ್ನು ಒಂದು ಭಾಷೆಯನ್ನಾಗಿ ಅಧ್ಯಯನ ಮಾಡಿರಬೇಕು. ಸ್ನಾತಕೋತ್ತರ ಪದವಿಯನ್ನು ಆಂಗ್ಲಭಾಷೆಯಲ್ಲಿ ಪಾಸ್‌ ಮಾಡಿರಬೇಕು.

ಈ ಎರಡು ವಿದ್ಯಾರ್ಹತೆಗಳನ್ನು ಕನಿಷ್ಠ ದ್ವಿತೀಯ ದರ್ಜೆಯಲ್ಲಿ ಪಾಸ್‌ ಮಾಡಿರಬೇಕು.

ಕಿರಿಯ ಸಹಾಯಕ ಹುದ್ದೆಗಳ ನೇಮಕ: ಪದವೀಧರರಿಂದ ಅರ್ಜಿ ಆಹ್ವಾನ

​ವಯೋಮಿತಿ, ಪ್ರಮುಖ ದಿನಾಂಕಗಳು

ಕನಿಷ್ಠ 18 ವರ್ಷ ಆಗಿರಬೇಕು. ಗರಿಷ್ಠ ಸಾಮಾನ್ಯ ವರ್ಗದವರಿಗೆ 35 ವರ್ಷ, ಒಬಿಸಿ ವರ್ಗದವರಿಗೆ 38 ವರ್ಷ, ಎಸ್‌ಸಿ / ಎಸ್‌ಟಿ ವರ್ಗದವರಿಗೆ 40 ವರ್ಷ ಗರಿಷ್ಠ ವಯೋಮಿತಿ ಮೀರಿರಬಾರದು.

  • ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 15-09-2021
  • ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 16-10-2021

ಉತ್ತರ ರೈಲ್ವೆಯಲ್ಲಿ ಉದ್ಯೋಗ: 3093 ಹುದ್ದೆಗಳಿಗೆ ಅಧಿಸೂಚನೆ ಪ್ರಕಟ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ