ಆ್ಯಪ್ನಗರ

ವೈದ್ಯಕೀಯ ಕಾಲೇಜುಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲು ಜಾರಿಗೆ ಚಿಂತನೆ

ಆರ್ಥಿಕವಾಗಿ ಹಿಂದುಳಿದವರಿಗೆ ಎಂಬಿಬಿಎಸ್‌ ಮತ್ತು ಬಿಡಿಎಸ್‌ ಕಾಲೇಜುಗಳಲ್ಲಿ ಮೀಸಲು ಸೀಟು ನಿಗದಿ ಪಡಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ.

Vijaya Karnataka 1 Jul 2019, 2:36 pm
ಬೆಂಗಳೂರು: ವೈದ್ಯಕೀಯ (ಎಂಬಿಬಿಎಸ್‌) ಮತ್ತು ದಂತ ವೈದ್ಯಕೀಯ (ಬಿಡಿಎಸ್‌) ಕಾಲೇಜುಗಳಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲು ಸೀಟು ನಿಗದಿ ಪಡಿಸಲು ರಾಜ್ಯ ಸರಕಾರ ಚಿಂತನೆ ನಡೆಸಿದೆ. ಈ ನಿಟ್ಟಿನಲ್ಲಿ ಪ್ರಕ್ರಿಯೆ ಆರಂಭವಾಗಿದ್ದು, ಮುಂದಿನ ವರ್ಷದಿಂದ ಇದು ಜಾರಿಗೆ ಬರುವ ನಿರೀಕ್ಷೆಯಿದೆ. ಇದು ಅನುಷ್ಠಾನಕ್ಕೆ ಬಂದರೆ, ಹೆಚ್ಚುವರಿ 700 ಸೀಟುಗಳಿಗೆ ಅವಕಾಶ ನೀಡುವುದು ಅನಿವಾರ್ಯವಾಗಲಿದೆ.
Vijaya Karnataka Web Vidhansabha


ಈ ಕುರಿತು ಮಾಹಿತಿ ನೀಡಿರುವ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಜಾವೇದ್‌ ಅಖ್ತರ್‌, ಈ ನಿಟ್ಟಿನಲ್ಲಿ ಈಗಾಗಲೇ ರಾಜ್ಯ ಸರಕಾರ ಕೇಂದ್ರಕ್ಕೆ ಪತ್ರ ಬರೆದಿದ್ದು, ಅದರ ಅನುಮೋದನೆಗಾಗಿ ಕಾಯಲಾಗುತ್ತಿದೆ ಎಂದು ಹೇಳಿದರು.

ಇದನ್ನು ಖಚಿತ ಪಡಿಸಿರುವ ಹಿಂದುಳಿದ ವರ್ಗಗಳ ಇಲಾಖೆಯ ಕಾರ್ಯದರ್ಶಿ ಮೊಹಮ್ಮದ್‌ ಮೊಹ್ಸಿನ್‌, ಆದರೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಇದರ ಅನುಷ್ಠಾನ ಸಾಧ್ಯವಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಭಾರತೀಯ ವೈದ್ಯಕೀಯ ಸಮಿತಿ (ಎಂಸಿಐ) ಮತ್ತು ಕೇಂದ್ರ ಆರೋಗ್ಯ ಸಚಿವಾಲಯಕ್ಕೆ ಈ ಕುರಿತು ಪತ್ರ ಬರೆದು ಮನವಿ ಮಾಡಿಕೊಳ್ಳಲಾಗಿದೆ. ಶೀಘ್ರವೇ ಅವರಿಂದ ಸಕಾರಾತ್ಮಕ ಉತ್ತರ ಬರುವ ನಿರೀಕ್ಷೆಯಲ್ಲಿದ್ದೇವೆ ಎಂದವರು ಹೇಳಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ