ಆ್ಯಪ್ನಗರ

ಮೊದಲ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ದಿನಾಂಕ ಪ್ರಕಟ

TOI-Online 20 Mar 2019, 2:59 pm
ಬೆಂಗಳೂರು: ಕರ್ನಾಟಕ ಪದವಿ ಪೂರ್ವ ಶಿಕ್ಷಣ ಇಲಾಖೆಯು ಮೊದಲ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆಯ ದಿನಾಂಕಗಳನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಅಭ್ಯರ್ಥಿಗಳು ದಿನಾಂಕ ಪಟ್ಟಿಯನ್ನು ಅಧಿಕೃತ ವೆಬ್‌ಸೈಟ್‌ pue.kar.nic.in ಮೂಲಕ ದೃಢ ಪಡಿಸಿಕೊಳ್ಳಲು ವಿನಂತಿಸಲಾಗಿದೆ.
Vijaya Karnataka Web Board Exam


ಮೊದಲ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ಏಪ್ರಿಲ್‌ ಮತ್ತು ಮೇ ತಿಂಗಳಲ್ಲಿ ನಡೆಯಲಿದೆ. ಏಪ್ರಿಲ್‌ 25ಕ್ಕೆ ಪರೀಕ್ಷೆ ಆರಂಭಗೊಳ್ಳಲಿದ್ದು, ಮೇ 10ಕ್ಕೆ ಅಂತ್ಯಗೊಳ್ಳಲಿದೆ. ಮೊದಲ ದಿನ ಸಮಾಜಶಾಸ್ತ್ರ ಮತ್ತು ರಾಸಾಯನಶಾಸ್ತ್ರ ಪರೀಕ್ಷೆ ನಡೆಯಲಿದೆ. ಪರೀಕ್ಷೆಯು ಎರಡು ಅವಧಿಯಲ್ಲಿ ನಡೆಯಲಿದೆ. ಬೆಳಗ್ಗೆ 9 ಗಂಟೆಯಿಂದ ಮಧ್ಯಾಹ್ನ 12.15ರ ವರೆಗೆ ಮೊದಲ ಅವಧಿಯ ಪರೀಕ್ಷೆ ನಡೆಯಲಿದೆ. ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15ರ ವರೆಗೆ 2ನೇ ಅವಧಿಯ ಪರೀಕ್ಷೆ ನಡೆಯಲಿದೆ.

ಕರ್ನಾಟಕ ಮೊದಲ ಪಿಯುಸಿ ಸಪ್ಲಿಮೆಂಟರಿ ಪರೀಕ್ಷೆ ದಿನಾಂಕ ಪಟ್ಟಿಯನ್ನು ಡೌನ್‌ಲೋಡ್‌ ಮಾಡಿಕೊಳ್ಳಿ.
- ಪದವಿ ಪೂರ್ವ ಶಿಕ್ಷಣ ಇಲಾಖೆಯ ಅಧಿಕೃತ ವೆಬ್‌ಸೈಟ್‌ pue.kar.nic.inಗೆ ಭೇಟಿ ನೀಡಿ.
- ಕರ್ನಾಟಕ ಮೊದಲ ಪಿಯುಸಿ ಸಪ್ಲಿಮೆಂಟರಿ ದಿನಾಂಕ ಪಟ್ಟಿ 2019 ಕ್ಲಿಕ್‌ ಮಾಡಿ.
- ದಿನಾಂಕ ಪಟ್ಟಿ ಪಿಡಿಎಫ್‌ ಫಾರ್ಮೆಟ್‌ನಲ್ಲಿ ಲಭ್ಯವಿದೆ.
- ಪರೀಕ್ಷೆ ದಿನಾಂಕವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್‌ ಮಾಡಿ.
- ಅಗತ್ಯ ಬಿದ್ದರೆ ಪ್ರಿಂಟ್‌ ತೆಗೆದುಕೊಳ್ಳಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ