ಆ್ಯಪ್ನಗರ

ಮನೆ ಮೆಡಿಸಿನ್‌: ಬಿಳಿ ಕೂದಲಿಗೆ ನೆಲ್ಲಿಕಾಯಿ ಬೆಸ್ಟ್‌

ಅಂದವಾದ ಕಪ್ಪು ಕೂದಲು ತಮ್ಮದಾಗಬೇಕೆಂದು ಸಾಕಷ್ಟು ಜನರು ಬಯಸುತ್ತಾರೆ.

Vijaya Karnataka Web 6 Nov 2016, 3:56 am
-ಅಂದವಾದ ಕಪ್ಪು ಕೂದಲು ತಮ್ಮದಾಗಬೇಕೆಂದು ಸಾಕಷ್ಟು ಜನರು ಬಯಸುತ್ತಾರೆ. ಆದರೆ ಇತ್ತೀಚಿನ ಒತ್ತಡದ ಜೀವನಶೈಲಿ, ಬದುಕಿನ ಜಂಜಾಟಗಳಲ್ಲಿ ಹರೆಯದರಲ್ಲಿಯೇ ಕೂದಲು ಬಿಳಿಯಾಗುತ್ತಿರುವುದು ಕೂಡ ಒಂದು ದೊಡ್ಡ ಸಮಸ್ಯೆಯಾಗಿ ಬಿಟ್ಟಿದೆ. ಇದಕ್ಕೆ ನೆಲ್ಲಿಕಾಯಿ ಉತ್ತಮ ಪರಿಹಾರವಾ ಗಿದೆ.
Vijaya Karnataka Web home medicine
ಮನೆ ಮೆಡಿಸಿನ್‌: ಬಿಳಿ ಕೂದಲಿಗೆ ನೆಲ್ಲಿಕಾಯಿ ಬೆಸ್ಟ್‌


-ಕೆಲವು ನೆಲ್ಲಿಕಾಯಿಗಳನ್ನು ಕೊಬ್ಬರಿ ಎಣ್ಣೆಯಲ್ಲಿ ನಿಧಾನವಾದ ಉರಿಯಲ್ಲಿ ಕಪ್ಪಗಾಗುವವರೆಗೆ ಕುದಿಸಬೇಕು.

-ಈ ಎಣ್ಣೆಯನ್ನು ತಣ್ಣಗಾಗಲು ಬಿಟ್ಟು ಬಿಳಿಯಾಗಿರುವ ಕೂದಲಿಗೆ ಹಾಗೂ ಮುಖ್ಯವಾಗಿ ಪ್ರತಿ ಕೂದಲ ಬುಡಕ್ಕೆ ನಯವಾಗಿ ಮಾಲಿಷ್‌ ಮಾಡಬೇಕು.

-ಹೀಗೆ ಮಾಡುವುದರಿಂದ ನೆರೆದಿರುವ ಕೂದಲಿಗೆ ಮತ್ತೆ ನೈಸರ್ಗಿಕ ಕಪ್ಪು ಬಣ್ಣ ಬರುತ್ತದೆ.

-ಕೊಬ್ಬರಿ ಎಣ್ಣೆಯಲ್ಲಿ ಕುದಿಸುವ ಬದಲಿಗೆ ನೆಲ್ಲಿಕಾಯಿಯನ್ನು ಅರೆದು ಅಥವಾ ಎಣ್ಣೆ ತೆಗೆದು ಸಹ ಬಳಸಬಹುದು.

-ಬೇಗವಾಗಿ ಪರಿಣಾಮ ಬೀರಲು ನೆಲ್ಲಿಕಾಯಿಯನ್ನು ನೀರಿನಲ್ಲಿ ಕೆಲವು ಗಂಟೆಗಳ ಕಾಲ ನೆನೆಸಿ ಅದರ ರಸವನ್ನು ಕಷಾಯ ಮಾಡಿ ಕುಡಿದರೆ ಆರೋಗ್ಯಕ್ಕೂ ಉತ್ತಮ. ಹಾಗೂ ಇದರಿಂದ ಕೂದಲು ನಯವಾಗಿ ಮತ್ತು ಸೋಂಪಾಗಿ ಬೆಳೆಯುವುದಲ್ಲದೆ ಬಿಳಿ ಕೂದಲು ಬರುವುದನ್ನು ತಡೆಗಟ್ಟುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ