ಆ್ಯಪ್ನಗರ

ವೈದ್ಯಕೀಯ ಸಂಸ್ಥೆಗಳಲ್ಲಿ ನೇಮಕ ಪ್ರಕ್ರಿಯೆ ಆರಂಭ

ಭೋಪಾಲ್‌ ಮತ್ತು ಹೃಷಿಕೇಶದ ಏಮ್ಸ್‌ನಲ್ಲಿ ಒಟ್ಟು 318 ಸೀನಿಯರ್‌ ರೆಸಿಡೆಂಟ್‌ ಹುದ್ದೆಗಳಿಗೆ ನೇಮಕ ನಡೆಯಲಿದೆ.

Vijaya Karnataka Web 8 May 2016, 4:00 am

*318 ಹುದ್ದೆಗಳು

ಉತ್ತರಾಖಂಡ್‌ನ ಹೃಷಿಕೇಶದಲ್ಲಿರುವ ಅಖಿಲ ಭಾರತ ವೈದ್ಯಕೀಯ ಸಂಸ್ಥೆ (ಏಮ್ಸ್‌) ಖಾಲಿ ಇರುವ 236 ಸೀನಿಯರ್‌ ರೆಸಿಡೆಂಟ್‌ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

2016 ಮೇ 31 ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಕೊನೆ ದಿನವಾಗಿದೆ.

ವಿದ್ಯಾರ್ಹತೆ: ಮಾನ್ಯತೆ ಪಡೆದ ಯೂನಿವರ್ಸಿಟಿಯಲ್ಲಿ ಮೆಡಿಕಲ್‌ನಲ್ಲಿ ಸ್ನಾತಕೋತ್ತರ ಪದವಿ ಅಥವಾ ಎಂಡಿ/ಎಂಎಸ್‌/ಡಿಎನ್‌ಬಿ ಪದವಿ ಪೂರೈಸಿರಬೇಕು.

ವಯೋಮಿತಿ: ಗರಿಷ್ಠ ವಯೋಮಿತಿ 33 ವರ್ಷ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ವಿಧಾನ: ಸಂದರ್ಶನ/ಲಿಖಿತ ಪರೀಕ್ಷೆ

ಅರ್ಜಿ ಶುಲ್ಕ: ಜನರಲ್‌/ಒಬಿಸಿ ಅಭ್ಯರ್ಥಿಗಳಿಗೆ 1000 ರೂ. ಹಾಗೂ ಎಸ್‌ಸಿ/ಎಸ್‌ಟಿಗಳಿಗೆ 800 ರೂ. ಅರ್ಜಿ ಶುಲ್ಕ ನಿಗದಿಪಡಿಸಲಾಗಿದ್ದು, ಆನ್‌ಲೈನ್‌ ಮೂಲಕ ಅದನ್ನು ಪಾವತಿಸಬೇಕು. ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಅರ್ಜಿ ಸಲ್ಲಿಸುವುದು ಹೇಗೆ?

ಆಸಕ್ತರು ಸಂಸ್ಥೆಯ ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು ಮತ್ತು ಭರ್ತಿ ಮಾಡಿದ ಅರ್ಜಿಯ ಪ್ರಿಂಟೌಟ್‌ ತೆಗೆದು ಅಗತ್ಯ ದಾಖಲೆಗಳೊಂದಿಗೆ ಅದನ್ನು Recruitment Cell, All India Institute of Medical sciences (AIIMS) Virbhadra Marg, Pashulok Rishikesh-249203, Uttarakhand ಈ ವಿಳಾಸಕ್ಕೆ 2016ರ ಜೂನ್‌ 15ರೊಳಗೆ ಕಳುಹಿಸಿ.

ಹೆಚ್ಚಿನ ವಿವರಗಳಿಗೆ ಭೇಟಿ ನೀಡಬೇಕಾದ ವೆಬ್‌ಸೈಟ್‌: www.aiimsrishikesh.edu.in

Vijaya Karnataka Web
ವೈದ್ಯಕೀಯ ಸಂಸ್ಥೆಗಳಲ್ಲಿ ನೇಮಕ ಪ್ರಕ್ರಿಯೆ ಆರಂಭ

**


ಭೋಪಾಲ್‌ ಏಮ್ಸ್‌ನಲ್ಲಿ 82 ಹುದ್ದೆಗಳು

ಭೋಪಾಲ್‌ನ ಏಮ್ಸ್‌ನಲ್ಲಿಯೂ 82 ಸೀನಿಯರ್‌ವ ರೆಸಿಡೆಂಟ್‌ ಹುದ್ದೆಗಳಿಗೆ ನೇಮಕ ನಡೆಯಲಿದೆ. ಎಂಡಿ/ಎಂಎಸ್‌/ಡಿಎನ್‌ಬಿ ಅಥವಾ ಸಂಬಂಧಪಟ್ಟ ವಿಷಯಗಳಲ್ಲಿ ಡಿಪ್ಲೊಮಾ ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಅರ್ಜಿ ಸಲ್ಲಿಸಲು ಕೊನೆಯ ದಿನ 2016ರ ಜೂನ್‌ 10. ವಿವರಗಳಿಗೆ ಮತ್ತು ಅರ್ಜಿ ಸಲ್ಲಿಸಲು ವೆಬ್‌ ವಿಳಾಸ: www.aiimsbhopal.edu.in

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ