ಆ್ಯಪ್ನಗರ

ಸಬ್‌ ಇನ್ಸ್‌ಪೆಕ್ಟರ್‌: ಅರ್ಜಿ ಸಲ್ಲಿಕೆ ಆರಂಭ

ನಿರೀಕ್ಷೆಯಂತೆ ರಾಜ್ಯ ಪೊಲೀಸ್‌ ಇಲಾಖೆಯ ಸಬ್‌-ಇನ್ಸ್‌ಪೆಕ್ಟರ್‌ ನೇಮಕಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಸೋಮವಾರ ಮಧ್ಯಹ್ನದ ವೇಳೆಗೆ ಇಲಾಖೆಯು ತನ್ನ ವೆಬ್‌ನಲ್ಲಿ ವಿವರವಾದ ಅಧಿಸೂಚನೆಯನ್ನು ಪ್ರಕಟಿಸಿ, ಅರ್ಜಿ ಸಲ್ಲಿಸಲು ಅವಕಾಶ ನೀಡಿತು.

Vijaya Karnataka Web 20 Sep 2016, 4:00 am

ಅರ್ಜಿ ಸಲ್ಲಿಸಲು ಕೊನೆಯ ದಿನ ಅಕ್ಟೋಬರ್‌ 13

ನಿರೀಕ್ಷೆಯಂತೆ ರಾಜ್ಯ ಪೊಲೀಸ್‌ ಇಲಾಖೆಯ ಸಬ್‌-ಇನ್ಸ್‌ಪೆಕ್ಟರ್‌ ನೇಮಕಕ್ಕೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಆರಂಭಗೊಂಡಿದೆ. ಸೋಮವಾರ ಮಧ್ಯಹ್ನದ ವೇಳೆಗೆ ಇಲಾಖೆಯು ತನ್ನ ವೆಬ್‌ನಲ್ಲಿ ವಿವರವಾದ ಅಧಿಸೂಚನೆಯನ್ನು ಪ್ರಕಟಿಸಿ, ಅರ್ಜಿ ಸಲ್ಲಿಸಲು ಅವಕಾಶ ನೀಡಿತು.

ಇದುವರೆಗೆ ಅರ್ಜಿ ಸಲ್ಲಿಸಲು ಒಂದು ತಿಂಗಳು ಕಾಲಾವಕಾಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಕೇವಲ 25 ದಿನ ಅವಕಾಶ ನೀಡಲಾಗಿದ್ದು, ಅಕ್ಟೋಬರ್‌ 13 ಕೊನೆಯ ದಿನವಾಗಿರುತ್ತದೆ. ಪೊಲೀಸ್‌ ನೇಮಕಾತಿಯಲ್ಲಿ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಿ ನಂತರ ದೈಹಿಕ ಮತ್ತು ಸಹಿಷ್ಣುತೆ ಪರೀಕ್ಷೆ ನಡೆಸಲು ರಾಜ್ಯ ಸರಕಾರ ಕಳೆದ ವಾರ ತೀರ್ಮಾನ ತೆಗೆದುಕೊಂಡಿದ್ದರೂ, ಈ ನೇಮಕಾತಿಯಲ್ಲಿ ಮಾತ್ರ ಹಿಂದಿನಂತೆಯೇ ಮೊದಲಿಗೆ ಸಹಿಷ್ಣುತೆ ಮತ್ತು ದೇಹದಾಢ್ರ್ಯತೆ ಪರೀಕ್ಷೆ ನಡೆಯಲಿದೆ. ಇದರಲ್ಲಿ ಅರ್ಹತೆ ಪಡೆದವರಿಗೆ ಮಾತ್ರ ಲಿಖಿತ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ.

ಅಭ್ಯರ್ಥಿಗಳು ಮೊದಲೇ ಅರ್ಜಿ ಸಲ್ಲಿಸಬೇಕು, ಕೊನೆಯ ದಿನಗಳಲ್ಲಿ ಹೆಚ್ಚು ಜನರು ಅರ್ಜಿ ಸಲ್ಲಿಸುವುದರಿಂದ ತಾಂತ್ರಿಕ ದೋಷಗಳು ಕಾಣಿಸಿಕೊಂಡು ಅರ್ಜಿ ಸಲ್ಲಿಸಲು ತೊಂದರೆಯುಂಟಾಗಬಹುದು ಎಂದು ಪೊಲೀಸ್‌ ಇಲಾಖೆಯು ಎಚ್ಚರಿಸಿದೆ. ಹೆಚ್ಚಿನ ಮಾಹಿತಿಗೆ: www.ksp.gov.in

ಇತ್ತ ಗಮನಿಸಿ

*ಅರ್ಜಿ ಸಲ್ಲಿಸುವ ಮುನ್ನ ವೆಬ್‌ನಲ್ಲಿ ಪ್ರಕಟಿಸಲಾಗಿರುವ ಅಧಿಸೂಚನೆ ಮತ್ತು ಸೂಚನೆಯನ್ನು ಸಂಪೂರ್ಣವಾಗಿ ಓದಿಕೊಳ್ಳಿ.

*ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಯಾವುದೇ ಹಂತದಲ್ಲೂ ಮಾಹಿತಿಯನ್ನು ಬದಲಾವಣೆ ಮಾಡಲು ಅವಕಾಶವಿರುವುದಿಲ್ಲ. ಹೀಗಾಗಿ ಅರ್ಜಿ ಸಲ್ಲಿಸುವಾಗ ಹೆಚ್ಚು ಎಚ್ಚರಿಕೆ ವಹಿಸಿ.

* ಒಂದಕ್ಕಿಂತ ಹೆಚ್ಚು ಅರ್ಜಿ ಸಲ್ಲಿಸಿದಲ್ಲಿ, ನೋಂದಣಿ ಸಂಖ್ಯೆ ಪಡೆದುಕೊಂಡಲ್ಲಿ ಅಂತಹ ಅಭ್ಯರ್ಥಿಗಳ ಅರ್ಜಿಯನ್ನು ರದ್ದುಪಡಿಸಲಾಗುತ್ತದೆ.

*ನೇಮಕಾತಿಯು ಪಾರದರ್ಶಕವಾಗಿರಲಿದೆ ಎಂದು ಇಲಾಖೆಯು ಸ್ಪಷ್ಟಪಡಿಸಿದೆ. ಅಕ್ರಮ ನಡೆಯುತ್ತಿರುವ ಬಗ್ಗೆ ಮಾಹಿತಿ ಇದ್ದಲ್ಲಿ ಕೂಡಲೇ ಸಂಬಂಧಪಟ್ಟವರಿಗೆ ತಿಳಿಸಿ.

*ಲಿಖಿತ ಪರೀಕ್ಷೆಗೆ ಮಾತ್ರವಲ್ಲ ದೈಹಿಕ ಮತ್ತು ಸಹಿಷ್ಣುತೆ ಪರೀಕ್ಷೆಗೂ ಕೂಡ ಸರಿಯಾಗಿ ಸಿದ್ಧತೆ ಮಾಡಿಕೊಳ್ಳಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ