ಪೊಲೀಸ್ ಸಬ್ಇನ್ಸ್ಪೆಕ್ಟರ್
ರಾಜ್ಯ ಪೊಲೀಸ್ ಇಲಾಖೆಯು 227 ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಕ್ಕೆ ಸಂಬಂಧಿಸಿದಂತೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಇಲಾಖೆಯ ವೆಬ್ನಲ್ಲಿ ಪ್ರಕಟಿಸಿದೆ.
Vijaya Karnataka 11 Jul 2018, 5:04 pm
ರಾಜ್ಯ ಪೊಲೀಸ್ ಇಲಾಖೆಯು 227 ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಕ್ಕೆ ಸಂಬಂಧಿಸಿದಂತೆ ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಇಲಾಖೆಯ ವೆಬ್ನಲ್ಲಿ ಪ್ರಕಟಿಸಿದೆ.
ಅಂತೆಯೇ 12 ಡಿಟೆಕ್ಟೀವ್ ಪೊಲೀಸ್ ಸಬ್ಇನ್ಸ್ಪೆಕ್ಟರ್ ನೇಮಕಕ್ಕೆ ಸಂಬಂಧಿಸಿದಂತೆಯೂ ಅಂತಿಮ ಆಯ್ಕೆ ಪಟ್ಟಿಯನ್ನು ವೆಬ್ನಲ್ಲಿ ಪ್ರಕಟಿಸಲಾಗಿದೆ.
ಕಳೆದ ವರ್ಷದ ಜೂನ್ನಲ್ಲಿ ಈ ಹುದ್ದೆಗಳ ನೇಮಕಕ್ಕೆ ಸಂಬಂಧಿಸಿದಂತೆ ಅಧಿಸೂಚನೆ ಹೊರಡಿಸಿ, 184 ಸಿವಿಲ್ ಮತ್ತು 43 ಇಂಟಿಲಿಜೆನ್ಸಿ ಪೊಲೀಸ್ ಸಬ್ಇನ್ಸ್ಪೆಕ್ಟರ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು. ಈಗ ಈ ನೇಮಕಾತಿಯನ್ನು ಅಂತಿಮ ಗೊಳಿಸಿರುವ ಇಲಾಖೆಯು ವಲಯವಾರು ಆಯ್ಕೆಯಾಗಿರುವ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಪ್ರಕಟಿಸಿದೆ.
ಪಟ್ಟಿಯಲ್ಲಿ ಅಭ್ಯರ್ಥಿಗಳು ಲಿಖಿತ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಪಡೆದ ಅಂಕಗಳ ಮಾಹಿತಿಯನ್ನೂ ನೀಡಲಾಗಿದೆ. ಈಗಾಗಲೇ ಸಂಭವನೀಯ ಪಟ್ಟಿ ಪ್ರಕಟಿಸಿ, ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಹೀಗಾಗಿ ಮತ್ತೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್: https://ksp.gov.in/