ಆ್ಯಪ್ನಗರ

ಐಟಿಬಿಪಿಯಲ್ಲಿ ಎಸ್‌ ಐ ಹುದ್ದೆ

ಇಂಡೋ-ಟಿಬೆಟಿಯನ್‌ ಗಡಿ ಭದ್ರತಾ ಪಡೆಯು 21 ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳನ್ನು (ಓವರ್‌ಸೀರ್‌) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

Vijaya Karnataka 22 Aug 2017, 5:37 pm
ಇಂಡೋ-ಟಿಬೆಟಿಯನ್‌ ಗಡಿ ಭದ್ರತಾ ಪಡೆಯು 21 ಸಬ್‌ಇನ್ಸ್‌ಪೆಕ್ಟರ್‌ ಹುದ್ದೆಗಳನ್ನು (ಓವರ್‌ಸೀರ್‌) ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಸೆಪ್ಟೆಂಬರ್‌ 22 ಕೊನೆಯ ದಿನವಾಗಿರುತ್ತದೆ.
Vijaya Karnataka Web sub inspector job
ಐಟಿಬಿಪಿಯಲ್ಲಿ ಎಸ್‌ ಐ ಹುದ್ದೆ


ಒಟ್ಟು ಹುದ್ದೆಗಳಲ್ಲಿ ಮೂರು ಹುದ್ದೆಗಳನ್ನು ಮಾತ್ರ ಮಹಿಳೆಯರಿಗೆ ಮೀಸಲಿಡಲಾಗಿದೆ. ಎಸ್‌ಎಸ್‌ಎಲ್‌ಸಿ ತೇರ್ಗಡೆ ಅಥವಾ ಸಿವಿಲ್‌ ಎಂಜಿನಿಯರಿಂಗ್‌ನಲ್ಲಿ ಡಿಪ್ಲೊಮಾ ತೇರ್ಗಡೆಯಾಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 20 ವರ್ಷ ಹಾಗೂ ಗರಿಷ್ಠ 25 ವರ್ಷ ಮೀರಿರಬಾರದು. ಮೀಸಲಾತಿ ನಿಯಮಾನುಸಾರ ಎಸ್‌ಸಿ/ಎಸ್‌ಟಿ, ಒಬಿಸಿ ಹಾಗೂ ಎಕ್ಸ್‌ ಸವೀರ್‍ಸ್‌ಮನ್‌ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.

ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 200 ರೂ. ಎಸ್‌ಸಿ/ಎಸ್‌ಟಿ ಹಾಗೂ ಎಕ್ಸ್‌ ಸವೀರ್‍ಸ್‌ಮನ್‌ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ನೀಡಲಾಗಿದೆ.

ದೈಹಿಕ ಸಾಮರ್ಥ್ಯ ಪರೀಕ್ಷೆ, ಸಹಿಷ್ಣತೆ ಪರೀಕ್ಷೆ, ಲಿಖಿತ ಪರೀಕ್ಷೆ ಹಾಗೂ ದಾಖಲೆ ಪರಿಶೀಲನೆಗಳ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.

ಹೆಚ್ಚಿನ ವಿವರಗಳಿಗೆ www.recruitment.itbpolice.nic.in ಲಾಗಿನ್‌ ಮಾಡಿ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ