ಆ್ಯಪ್ನಗರ

ಬಿಎಸ್ಸಿ, ಡಿಪ್ಲೊಮಾ ಮಾಡಿದವರಿಗೆ ಉದ್ಯೋಗಾವಕಾಶ

ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ 'ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ'ಯು ಸೀನಿಯರ್‌ ಟೆಕ್ನಿಕಲ್‌ ಅಸಿಸ್ಟೆಂಟ್‌ (ಗ್ರೂಪ್‌-ಬಿ) ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ.

Vijaya Karnataka 8 Aug 2018, 5:36 pm
ಡಿಆರ್‌ಡಿಒದಲ್ಲಿ ಟೆಕ್ನಿಕಲ್‌ ಹುದ್ದೆ
Vijaya Karnataka Web job

*ಖಾಲಿ ಇರುವ ಹುದ್ದೆಗಳ ಸಂಖ್ಯೆ: 494
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಆಗಸ್ಟ್‌ 29, 2018
ರಾಜ್ಯದಲ್ಲಿ ಪರೀಕ್ಷಾ ಕೇಂದ್ರ: ಬೆಂಗಳೂರು, ಮೈಸೂರು ಮತ್ತು ಮಂಗಳೂರು
ಸಹಾಯವಾಣಿ: 011-23882323
ಹೆಚ್ಚಿನ ವಿವರಗಳಿಗೆ: www.drdo.gov.inwww.drdo.gov.in

ಕೇಂದ್ರ ರಕ್ಷಣಾ ಸಚಿವಾಲಯದ ಅಧೀನದಲ್ಲಿರುವ 'ರಕ್ಷಣಾ ಸಂಶೋಧನೆ ಹಾಗೂ ಅಭಿವೃದ್ಧಿ ಸಂಸ್ಥೆ'ಯು ಸೀನಿಯರ್‌ ಟೆಕ್ನಿಕಲ್‌ ಅಸಿಸ್ಟೆಂಟ್‌ (ಗ್ರೂಪ್‌-ಬಿ) ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಒಟ್ಟು 494 ಹುದ್ದೆಗಳಿಗೆ ನೇಮಕ ನಡೆಯಲಿದ್ದು, ಆಸಕ್ತ ಅಭ್ಯರ್ಥಿಗಳು ಆಗಸ್ಟ್‌ 29ರೊಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಸಂಸ್ಥೆಯ 'ಸೆಂಟರ್‌ ಫಾರ್‌ ಪರ್ಸೋನೆಲ್‌ ಟ್ಯಾಲೆಂಟ್‌ ಮ್ಯಾನೇಜ್‌ಮೆಂಟ್‌' ಈ ನೇಮಕ ಪ್ರಕ್ರಿಯೆ ನಡೆಸುತ್ತಿದ್ದು, ಎರಡು ಹಂತದ ಪರೀಕ್ಷೆಯ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 21 ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪ್ರವೇಶ ಪರೀಕ್ಷೆ ನಡೆಯಲಿದೆ. ರಾಜ್ಯದ 3 ಸೇರಿದಂತೆ ದೇಶಾದ್ಯಂತ 47 ಕಡೆಗಳಲ್ಲಿ ಪರೀಕ್ಷಾ ಕೇಂದ್ರಗಳಿರಲಿವೆ.

ಯಾವ ವಿಷಯಗಳು?

ಅಗ್ರಿಕಲ್ಚರ್‌, ಆಟೊಮೊಬೈಲ್‌ ಎಂಜಿನಿಯರಿಂಗ್‌, ಬಾಟನಿ, ಕೆಮಿಕಲ್‌, ಸಿವಿಲ್‌ ಎಂಜಿನಿಯರಿಂಗ್‌, ಕೆಮಿಸ್ಟ್ರಿ, ಕಂಪ್ಯೂಟರ್‌ ಸೈನ್ಸ್‌, ಎಲೆಕ್ಟ್ರಿಕಲ್‌ ಆ್ಯಂಡ್‌ ಎಲೆಕ್ಟ್ರಾನಿಕ್ಸ್‌ ಎಂಜಿನಿಯರಿಂಗ್‌, ಎಲೆಕ್ಟ್ರಿಕಲ್‌, ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಇನ್‌ಸ್ಟ್ರುಮೆಂಟೇಶನ್‌, ಎಲೆಕ್ಟ್ರಾನಿಕ್ಸ್‌/ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಕಮ್ಯುನಿಕೇಷನ್‌, ಎಲೆಕ್ಟ್ರಾನಿಕ್ಸ್‌ ಆ್ಯಂಡ್‌ ಟೆಲಿ ಕಮ್ಯುನಿಕೇಷನ್‌ ಎಂಜಿನಿಯರಿಂಗ್‌, ಜಿಯಾಲಜಿ, ಇನ್‌ಸ್ಟ್ರುಮೆಂಟೇಶನ್‌, ಲೈಬ್ರರಿ ಸೈನ್ಸ್‌, ಮ್ಯಾಥಮೆಟಿಕ್ಸ್‌, ಮೆಕ್ಯಾನಿಕಲ್‌ ಎಂಜಿನಿಯರಿಂಗ್‌, ಮೆಟಲರ್ಜಿ, ಫೋಟೋಗ್ರಫಿ, ಫಿಸಿಕ್ಸ್‌, ಫಿಸಿಯೋಲಜಿ ಮತ್ತು ಜಿಯಾಲಜಿ ವಿಷಯಗಳ ಓದಿದವರಿಗೆ ಅವಕಾಶವಿದೆ.

ಅರ್ಹತೆಗಳೇನು?

ಶೈಕ್ಷಣಿಕ ಅರ್ಹತೆ: ಕೆಲವು ಹುದ್ದೆಗಳಿಗೆ ಸಂಬಂಧಿಸಿದ ವಿಷಯಗಳಲ್ಲಿ ಬಿಎಸ್ಸಿ ಪದವಿ ಪಡೆದವರು, ಮತ್ತೆ ಕೆಲವು ಹುದ್ದೆಗಳಿಗೆ ಸಂಬಂಧಿಸಿದ ವಿಷಯದಲ್ಲಿ ಮೂರು ವರ್ಷದ ಡಿಪ್ಲೊಮಾ ಮಾಡಿದವರು ( ಮುಖ್ಯವಾಗಿ ಎಂಜಿನಿಯರಿಂಗ್‌, ಟೆಕ್ನಾಲಜಿ ಮತ್ತು ಕಂಪ್ಯೂಟರ್‌ ಸೈನ್ಸ್‌ )ಅರ್ಜಿ ಸಲ್ಲಿಸಬಹುದು. ಈಗಾಗಲೇ ಅಂತಿಮ ಪರೀಕ್ಷೆ ಬರೆದು ಫಲಿತಾಂಶಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿಲ್ಲ.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಹಾಗೂ ಗರಿಷ್ಠ ವಯೋಮಿತಿ 28 ವರ್ಷ. ಮೀಸಲಾತಿ ವ್ಯಾಪ್ತಿಯಲ್ಲಿ ಬರುವ ಎಸ್‌ಸಿ/ಎಸ್‌ಟಿ ಮತ್ತು ಒಬಿಸಿ ಅಭ್ಯರ್ಥಿಗಳಿಗೆ ನಿಯಮಾನುಸಾರ ವಯೋಮಿತಿ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ: ಮಹಿಳಾ ಅಭ್ಯರ್ಥಿಗಳು, ಎಸ್‌ಸಿ/ಎಸ್‌ಟಿ, ಅಂಗವಿಕಲರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯ್ತಿ ನೀಡಲಾಗಿದೆ. ಉಳಿದೆಲ್ಲಾ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿಪಡಿಸಲಾಗಿದೆ.

ಪರೀಕ್ಷೆ ಹೇಗಿರುತ್ತದೆ?

ಎರಡು ಹಂತದ ಪರೀಕ್ಷೆಗಳಿಗೆ 'ಡಿಆರ್‌ಡಿಒ ಎಂಟ್ರಿ ಟೆಸ್ಟ್‌' ಎಂದು ಕರೆಯಲಾಗುತ್ತದೆ. ಈ ಎರಡೂ ಪರೀಕ್ಷೆಗಳು ಕಂಪ್ಯೂಟರ್‌ ಆಧರಿತ ಪರೀಕ್ಷೆಗಳಾಗಿವೆ. ಮೊದಲನೇ ಹಂತದ ಪರೀಕ್ಷೆಯಲ್ಲಿ ಕ್ವಾಂಟಿಟೇಟಿವ್‌ ಎಬಿಲಿಟಿ, ಆ್ಯಪ್ಟಿಟ್ಯೂಡ್‌, ಜನರಲ್‌ ಇಂಟಲಿಜೆನ್ಸ್‌, ರೀಸನಿಂಗ್‌ ಎಬಿಲಿಟಿ, ಜನರಲ್‌ ಅವೇರ್ನೆಸ್‌, ಇಂಗ್ಲಿಷ್‌ ಲಾಂಗ್ವೇಜ್‌ ಮತ್ತು ಜನರಲ್‌ ಸೈನ್ಸ್‌ಗೆ ಸಂಬಂಧಪಟ್ಟಂತೆ 150 ಅಂಕಗಳ 150 ಪ್ರಶ್ನೆಗಳಿರುತ್ತವೆ. ಎರಡನೇ ಹಂತದ ಪರೀಕ್ಷೆಯಲ್ಲಿ ಆಯಾ ವಿಭಾಗಗಳಿಗೆ ಸಂಬಂಧಪಟ್ಟ ವಿಷಯಾನುಸಾರ ಪ್ರಶ್ನೆಗಳನ್ನು ನೀಡಲಾಗುತ್ತದೆ. 100 ಅಂಕಗಳ 100 ಪ್ರಶ್ನೆಗಳಿಗೆ ಅಭ್ಯರ್ಥಿಗಳು ಉತ್ತರಿಸಬೇಕು. ಇದಾದ ಬಳಿಕ ದಾಖಲೆ ಪರಿಶೀಲನೆ ನಡೆಸಿ ನೇಮಕ ಮಾಡಿಕೊಳ್ಳಲಾಗುತ್ತದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ