ಆ್ಯಪ್ನಗರ

ಕೋರ್ಟ್‌ನಲ್ಲಿ ಶೀಘ್ರಲಿಪಿಗಾರರು, ಬೆರಳಚ್ಚುಗಾರರ ಹುದ್ದೆಗೆ ಆಹ್ವಾನ

ಮಂಡ್ಯ ಮತ್ತು ಮೈಸೂರು ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಮತ್ತು ಜವಾನ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಎರಡೂ ನ್ಯಾಯಾಲಯಗಳಲ್ಲಿ ಒಟ್ಟು 59 ಹುದ್ದೆಗಳಿಗೆ ನೇಮಕ ನಡೆಯಲಿದೆ.

Vijaya Karnataka Web 27 Jun 2018, 5:19 pm
ಮೈಸೂರು ಮತ್ತು ಮಂಡ್ಯದಲ್ಲಿ ನೇಮಕ | ಶೀಘ್ರಲಿಪಿಗಾರರು, ಬೆರಳಚ್ಚುಗಾರರ ಹುದ್ದೆ
Vijaya Karnataka Web job


* ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ: 59

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಮಂಡ್ಯ- ಜುಲೈ 18, ಮೈಸೂರು -ಜುಲೈ 26

ವಿವರಗಳಿಗೆ ವೆಬ್‌: http://ecourts.gov.in

ಮಂಡ್ಯ ಮತ್ತು ಮೈಸೂರು ಜಿಲ್ಲಾ ನ್ಯಾಯಾಲಯಗಳಲ್ಲಿ ಖಾಲಿ ಇರುವ ಶೀಘ್ರಲಿಪಿಗಾರರು, ಬೆರಳಚ್ಚುಗಾರರು ಮತ್ತು ಜವಾನ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಲಾಗಿದೆ. ಎರಡೂ ನ್ಯಾಯಾಲಯಗಳಲ್ಲಿ ಒಟ್ಟು 59 ಹುದ್ದೆಗಳಿಗೆ ನೇಮಕ ನಡೆಯಲಿದೆ.

ಹುದ್ದೆಗಳ ವಿವರ: ಮಂಡ್ಯ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ಎಂಟು ಶೀಘ್ರಲಿಪಿಗಾರರು ಮತ್ತು 12 ಬೆರಳಚ್ಚುಗಾರರ ಹುದ್ದೆಗಳು ಖಾಲಿ ಇವೆ. ಅಂಚೆ ಮೂಲಕ ಅರ್ಜಿ ಸಲ್ಲಿಸಲು ಕೋರಲಾಗಿದ್ದು, ಆಸಕ್ತರು ಜುಲೈ 18ರೊಳಗೆ ಅರ್ಜಿ ಕಳುಹಿಸುವಂತೆ ಸೂಚಿಸಲಾಗಿದೆ. ಮೈಸೂರು ಕೋರ್ಟ್‌ನಲ್ಲಿ 39 ಜವಾನ ಹುದ್ದೆಗಳು ಖಾಲಿ ಇದ್ದು, ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ 26 ಕೊನೆಯ ದಿನವಾಗಿದೆ.

ಅರ್ಹತೆಗಳೇನು?

ಶೀಘ್ರಲಿಪಿಗಾರರು ಮತ್ತು ಬೆರಳಚ್ಚುಗಾರರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮತ್ತು ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಹಾಗೂ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು. ಅಥವಾ ಕರ್ನಾಟಕ ತಾಂತ್ರಿಕ ಪರೀಕ್ಷಾ ಮಂಡಳಿ ನಡೆಸುವ ಸೆಕ್ರೆಟರಿಯಲ್‌ ಪ್ರ್ಯಾಕ್ಟೀಸ್‌ ಪಠ್ಯಕ್ರಮದ ಡಿಪ್ಲೊಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರಲಿಪಿ ಮತ್ತು ಬೆರಳಚ್ಚು ವಿಷಯಗಳನ್ನು ಐಚ್ಛಿಕ ವಿಷಯಗಳನ್ನಾಗಿ ಓದಿರಬೇಕು.

ಜವಾನ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 7ನೇ ತರಗತಿ ತೇರ್ಗಡೆಯಾಗಿರಬೇಕು ಮತ್ತು ಕನ್ನಡ ಭಾಷೆಯಲ್ಲಿ ಮಾತನಾಡಲು/ಬರೆಯಲು ತಿಳಿದಿರಬೇಕು.

ವಯೋಮಿತಿ: ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ 35 ವರ್ಷ. ಮೀಸಲಾತಿ ನಿಯಮಾನುಸಾರ 2ಎ,2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ ಮೂರು ವರ್ಷ ಮತ್ತು ಪರಿಶಿಷ್ಟ ಜಾತಿ/ಪಂಗಡ ಹಾಗೂ ಪ್ರವರ್ಗ-1ರ ಅಭ್ಯರ್ಥಿಗಳಿಗೆ ಐದು ವರ್ಷಗಳ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ಅರ್ಜಿ ಶುಲ್ಕ: ಮೈಸೂರು ಕೋರ್ಟ್‌ನಲ್ಲಿ ನಡೆಯುವ ನೇಮಕಕ್ಕೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾತ್ರ ಶುಲ್ಕ ಪಾವತಿಸಬೇಕು. ಸಾಮಾನ್ಯ ಅರ್ಹತೆ, ಪ್ರವರ್ಗ-2ಎ,2ಬಿ, 3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ 200 ರೂ. ಹಾಗೂ ಪರಿಶಿಷ್ಟ ಜಾತಿ/ಪಂಗಡ ಮತ್ತು ಪ್ರವರ್ಗ-1ರ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿಪಡಿಸಲಾಗಿದೆ. ಮಂಡ್ಯದಲ್ಲಿನ ಹುದ್ದೆಗಳಿಗೆ ಅರ್ಜಿ ಶುಲ್ಕ ನಿಗದಿಪಡಿಸಲಾಗಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ