ಆ್ಯಪ್ನಗರ

ಡೇ ಸ್ಪೆಷಲ್‌: ವಿಶ್ವ ಆರೋಗ್ಯ ದಿನ

ಜಾಗತಿಕವಾಗಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಏಪ್ರಿಲ್‌ 7 ರಂದು ವಿಶ್ವ ಆರೋಗ್ಯ ದಿನ.

Vijaya Karnataka 7 Apr 2018, 5:00 am
ಜಾಗತಿಕವಾಗಿ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಏಪ್ರಿಲ್‌ 7 ರಂದು ವಿಶ್ವ ಆರೋಗ್ಯ ದಿನವನ್ನು ವಿಶ್ವ ಆರೋಗ್ಯ ಸಂಸ್ಥೆಯಿಂದ ಜಗತ್ತಿನಾದ್ಯಂತ ಆಚರಿಸಲಾಗುತ್ತದೆ. 1948ರಲ್ಲಿ ನಡೆದ ಮೊದಲ ವಿಶ್ವ ಆರೋಗ್ಯ ಸಭೆಯಲ್ಲಿ ಏಪ್ರಿಲ್‌ 7ನ್ನು ವಿಶ್ವ ಆರೋಗ್ಯ ದಿನವಾಗಿ ಆಚರಿಸಲು ನಿರ್ಧರಿಸಲಾಯಿತು. 1950ರಿಂದ ವಿಶ್ವ ಆರೋಗ್ಯ ದಿನ ಆಚರಿಸಲಾಗುತ್ತಿದೆ.
Vijaya Karnataka Web world health day


ಆರೋಗ್ಯವೇ ಭಾಗ್ಯ ಎಂಬ ಮಾತಿದೆ. ಒಂದು ಜೀವಿಯ ದೇಹ, ಮನಸ್ಸು ಸಂಪೂರ್ಣ ಸಮತೋಲನದಲ್ಲಿರುವ ಸ್ಥಿತಿಯನ್ನು ಆರೋಗ್ಯ ಎಂದು ಕರೆಯಲಾಗುತ್ತದೆ. ವಿಶ್ವ ಆರೋಗ್ಯ ಸಂಸ್ಥೆಯ 1945ರ ಹೇಳಿಕೆಯ ಪ್ರಕಾರ ಆರೋಗ್ಯವೆಂದರೆ ಕೇವಲ ರೋಗ, ಭಾದೆಗಳ ಗೈರು ಹಾಜರಿಯಷ್ಟೇ ಅಲ್ಲ. ಸಂಪೂರ್ಣ ದೈಹಿಕ, ಮಾನಸಿಕ ಮತ್ತು ಸಾಮಾಜಿಕ ಸುಸ್ಥಿತಿ . ಪ್ರತಿಯೊಬ್ಬರಿಗೂ ಆರೋಗ್ಯ ಮುಖ್ಯ. ಒಬ್ಬ ಮನುಷ್ಯ ಆರೋಗ್ಯವಾಗಿದ್ದರೆ ಇಡೀ ಕುಟುಂಬ ಆರೋಗ್ಯವಾಗಿರುತ್ತದೆ. ಇದರಿಂದ ಆರೋಗ್ಯಕರ ಸಮಾಜ ರೂಪುಗೊಳ್ಳುತ್ತದೆ ಹಾಗೂ ದೇಶದ ಪ್ರಗತಿ ಹೆಚ್ಚುತ್ತದೆ.

ವಿಶ್ವ ಆರೋಗ್ಯ ದಿನಾಚರಣೆಯಂದು ಸರ್ಕಾರ, ಸರ್ಕಾರೇತರ ಸಂಸ್ಥೆಗಳು, ವಿವಿಧ ಸಂಘಟನೆಗಳು ಹಲವು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ. ಪ್ರತಿ ವರ್ಷ ಒಂದು ಧ್ಯೇಯವಾಕ್ಯದೊಂದಿಗೆ ಈ ದಿನವನ್ನು ಆಚರಿಸಲಾಗುತ್ತದೆ. ಈ ವರ್ಷದ ಥೀಮ್‌: ಯುನಿವರ್ಸಲ್‌ ಹೆಲ್ತ್‌ ಕವರೇಜ್‌: ಎವರಿವನ್‌, ಎವರಿವೇರ್‌. ಯಎಚ್‌ಸಿ ಮೂಲಕ ಕೆಲವು ದೇಶಗಳು ಈಗಾಗಲೇ ಸಾರ್ವತ್ರಿಕ ಆರೋಗ್ಯ ರಕ್ಷ ಣೆಯತ್ತ ಗಮನಾರ್ಹ ಪ್ರಗತಿಯನ್ನು ಸಾಧಿಸಿವೆ. ಆದರೆ ವಿಶ್ವದ ಜನಸಂಖ್ಯೆಯ ಅರ್ಧದಷ್ಟು ಜನರು ಇನ್ನೂ ಅಗತ್ಯವಿರುವ ಆರೋಗ್ಯ ಸೇವೆಗಳನ್ನು ಪಡೆಯಲು ಸಾಧ್ಯವಾಗಿಲ್ಲ. ರಾಷ್ಟ್ರಗಳು ಆರೋಗ್ಯ ಗುರಿಯನ್ನು ಸಾಧಿಸಬೇಕಾದರೆ, ಜಗತ್ತಿನ ಎಲ್ಲಾ ಜನರು 2023 ರೊಳಗೆ ಘ್ಕಿಖಿಏಇ ಪ್ರಯೋಜನ ಪಡೆಯಬೇಕು ಎಂಬುದು ಈ ದಿನದ ಮಹತ್ವವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ