ಆ್ಯಪ್ನಗರ

ಎಸಿಬಿ ಬಲೆಗೆ ಗ್ರಾಮ ಲೆಕ್ಕಾಧಿಕಾರಿ

ಬೀಳಗಿ: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.

Vijaya Karnataka 31 Jul 2019, 5:00 am
ಬೀಳಗಿ: ಲಂಚ ಸ್ವೀಕರಿಸುತ್ತಿದ್ದ ಗ್ರಾಮ ಲೆಕ್ಕಾಧಿಕಾರಿಯನ್ನು ಎಸಿಬಿ ಪೊಲೀಸರು ಬಂಧಿಸಿದ್ದಾರೆ.
Vijaya Karnataka Web bilagi acb trap village accountant
ಎಸಿಬಿ ಬಲೆಗೆ ಗ್ರಾಮ ಲೆಕ್ಕಾಧಿಕಾರಿ

ತಾಲೂಕಿನ ಸುನಗ ಗ್ರಾಮದ ಲೆಕ್ಕಾಧಿಕಾರಿ ಶಿವಕುಮಾರ್‌ ಈರಪ್ಪ ಶಿರೋಳ ಸೋಮವಾರ ವಾರಸಾ ಮಾಡಲು ಜಗದೀಶ ಮುದುಕಪ್ಪ ಎರಡೆಮ್ಮಿ ಎಂಬುವರಿಂದ 3000 ರೂ. ಲಂಚ ಸ್ವೀಕರಿಸುವಾಗ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಗ್ರಾಮ ಲೆಕ್ಕಾಧಿಕಾರಿ ಶಿವಕುಮಾರ್‌ ಈರಪ್ಪ ಶಿರೋಳರನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಎಸಿಬಿ ಇನ್ಸಪೆಕ್ಟರ್‌ ರಾಘವೇಂದ್ರ ಹಳ್ಳೂರ್‌ ತಿಳಿಸಿದ್ದಾರೆ. ದಾಳಿಯಲ್ಲಿ ಎಸಿಬಿ ಡಿಎಸ್ಪಿ ಎಂ.ವ್ಹಿ.ಮಲ್ಲಾಪೂರ್‌ ಮತ್ತು ಎಸಿಬಿ ಇನ್ಸಪೆಕ್ಟರ್‌ ಸಿ.ಜೆ.ಮಠಪತಿ ಇದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ