ಆ್ಯಪ್ನಗರ

ಬಾಗಲಕೋಟೆ: ಕೊರೊನಾ ಈಗ ಮೂರನೇ ಹಂತಕ್ಕೆ ತಲುಪಿದೆ, ಡಿಸಿಎಂ ಗೋವಿಂದ ಕಾರಜೋಳ ಹೇಳಿಕೆ

ದೇಶದಲ್ಲಿ ಕೊರೊನಾ 3ನೇ ಹಂತಕ್ಕೆ ತಲುಪಿದ್ದು, ರಾಜ್ಯದಲ್ಲಿ ಲಾಕ್ ಡೌನ್ ಗೆ ಜನ ಸ್ಪಂದಿಸುತ್ತಿದ್ದಾರೆ. ಆದರೆ ಕೆಲವು ಕಿಡಿಗೇಡಿಗಳು ಎಷ್ಟು ಹೇಳಿದರೂ ಪಾಲಿಸುತ್ತಿಲ್ಲ. ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದ್ದಾರೆ.

Vijaya Karnataka Web 28 Mar 2020, 2:19 pm
ಬಾಗಲಕೋಟೆ: ದೇಶದಲ್ಲಿ ಕೊರೊನಾ 3ನೇ ಹಂತಕ್ಕೆ ತಲುಪಿದ್ದು, ರಾಜ್ಯದಲ್ಲಿ ಲಾಕ್ ಡೌನ್ ಗೆ ಜನ ಸ್ಪಂದಿಸುತ್ತಿದ್ದಾರೆ ಎಂದು ಡಿಸಿಎಂ ಗೋವಿಂದ ಕಾರಜೋಳ ಹೇಳಿದರು.
Vijaya Karnataka Web dcm


ಬಾಗಲಕೋಟೆಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾರಜೋಳ, ಕೊರೊನಾ ಇಡೀ ದೇಶವನ್ನೇ ತಲುಪಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿ 144 ಸೆಕ್ಷನ್ ಹಾಕಿದ್ದು, ಕೆಲವರು ಕಟ್ಟುನಿಟ್ಟಾಗಿ ಪಾಲಿಸುತ್ತಿದ್ದಾರೆ. ಕೆಲವು ಕಿಡಿಗೇಡಿಗಳು ಎಷ್ಟು ಹೇಳಿದರೂ ಪಾಲಿಸುತ್ತಿಲ್ಲ. ಅಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಜಿಲ್ಲಾಡಳಿತ ಹಾಗೂ ಪೊಲೀಸರಿಗೆ ಸೂಚನೆ ನೀಡಿದ್ದೇವೆ ಎಂದು ತಿಳಿಸಿದರು.

ಪ್ರಧಾನಿ ಮೋದಿ , ಬಿಎಸ್ ವೈ ಯವರು ಅನೇಕ ಬಾರಿ ಮನವಿ ಮಾಡಿದ್ದು, ಸಾಮೂಹಿಕ ಪ್ರಾರ್ಥನೆ, ದೇಗುಲಕ್ಕೆ ಹೋಗಬೇಡಿ ಎಂದು ಹೇಳಿದ್ದರೂ, ಕೆಲವು ಕಡೆ ಇದನ್ನು ಜನರು ಪಾಲಿಸುತ್ತಿಲ್ಲ. ಯಾವುದೇ ಧರ್ಮದವರಾದರೂ ಅವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು.

ಜಿಲ್ಲೆಯಲ್ಲಿ ಜಿಲ್ಲಾಧಿಕಾರಿ, ಎಸ್ಪಿ, ಸಿಇಓ, ಡಿಎಚ್ಓ, ಉತ್ತಮ ಕೆಲಸವನ್ನು ಮಾಡುತ್ತಿದ್ದಾರೆ. ಸರ್ಕಾರದ ಆದೇಶವನ್ನು ಜನ ಚಾಚೂ ತಪ್ಪದೆ ಪಾಲಿಸಿರಿ. ಯಾರು ಮನೆಯಿಂದ ಹೊರಗ ಬರಬೇಡಿ. ಸಾಮಾಜಿಕ ಅಂತರ ಕಾಯ್ದುಕೊಳ್ಳಿ ಎಂದು ಮನವಿ ಮಾಡಿದರು.

ಜಿಲ್ಲೆಯಲ್ಲಿ ಈಗಾಗಲೇ ದಿನಸಿ, ತರಕಾರಿ ಮನೆ ಮನೆಗೆ ತಲುಪಿಸಲಾಗುತ್ತಿದೆ. ಇದರಿಂದ ಜನದಟ್ಟಣೆಯಾಗೋದು ಕಡಿಮೆ ಆಗಿದೆ. ನಮ್ಮ ಜಿಲ್ಲೆಯಿಂದ ಗುಳೆ ಹೋದವರು ಸಹಸ್ರಾರು ಸಂಖ್ಯೆಯಲ್ಲಿ ಬಂದಿದ್ದಾರೆ. ಅವರ ಮೇಲೆ ನಿಗಾ ವಹಿಸಲು ಸೂಚಿಸಲಾಗಿದೆ. ಬಾರ್, ವೈನ್ ಶಾಪ್ ಬಂದ್ ಮಾಡಿಸಲಾಗಿದೆ. ಬಂದ್ ಇರುವ ಕಾರಣ ಕಳ್ಳಬಟ್ಟಿ ಜೋರಾಗಿದೆ. ಶುಕ್ರವಾರ ಕೆಲ ಊರಲ್ಲಿ ಗಮನಕ್ಕೆ ಬಂದ ಬಗ್ಗೆ ಜಿಲ್ಲಾಧಿಕಾರಿಗೆ ಹೇಳಿ ಬಂದ್ ಮಾಡಿಸಿದ್ದಾರೆ. ಕಳ್ಳಭಟ್ಟಿ ನಡೆಸುವವರ ಮೇಲೆ ಮೇಲೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ಬಾಗಲಕೋಟೆಯಲ್ಲಿ ಡಿಸಿಎಂ ಗೋವಿಂದ ಕಾರಜೋಳ ಹೇಳಿದರು .

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ