ಆ್ಯಪ್ನಗರ

ತನ್ನದೇ ಶಾಸಕರ ಮೇಲೆ ದಾಳಿ ನಡೆದಿದ್ದರೂ ಕಾಂಗ್ರೆಸ್‌ಗೆ ಖಂಡಿಸುವ ಧೈರ್ಯವಿಲ್ಲ: ಕಾರಜೋಳ ಕಿಡಿ!

ರಾಜ್ಯ ರಾಜಧಾನಿ ಕೆಜಿ ಹಳ್ಳಿಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸಿರುವ ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಘಟನೆಯನ್ನು ಖಂಡಿಸದಷ್ಟು ಕಾಂಗ್ರೆಸ್ ದುರ್ಬಲವಾಗಿದೆ ಎಂದು ತೀವ್ರ ವಾಗ್ದಾಳಿ ನಡೆಸಿದ್ದಾರೆ.

Vijaya Karnataka Web 14 Aug 2020, 2:09 pm
ಬಾಗಲಕೋಟೆ: ರಾಜ್ಯ ರಾಜಧಾನಿ ಕೆಜಿ ಹಳ್ಳಿಯಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯನ್ನು ತೀವ್ರವಾಗಿ ಖಂಡಿಸಿರುವ ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ, ಘಟನೆಯನ್ನು ಪೂರ್ವ ನಿಯೋಜಿತ ಕೃತ್ಯ ಎಂದು ಜರೆದಿದ್ದಾರೆ.
Vijaya Karnataka Web Govind Karjol
ಸಂಗ್ರಹ ಚಿತ್ರ


ಪತ್ರಕರ್ತರೊಂದಿಗೆ ಮಾತನಾಡಿದ ಡಿಸಿಎಂ ಗೋವಿಂದ್ ಕಾರಜೋಳ, ದಿನದ 24 ಗಂಟೆಯೂ ಸಮಾಜಕ್ಕಾಗಿ ದುಡಿಯುವ ಪತ್ರಕರ್ತರ ಮೇಲೆ ಹಲ್ಲೆ ಮಾಡಿರುವ ದುಷ್ಕರ್ಮಿಗಳು ಶಿಕ್ಷೆಗೆ ಅರ್ಹರು ಎಂದು ಕಿಡಿಕಾರಿದರು.

ಅತ್ಯಂತ ವ್ಯವಸ್ಥಿತವಾಗಿ ದಾಳಿಗೆ ಯೋಜನೆ ರೂಪಿಸಲಾಗಿದೆ ಎಂಬುದು ಮೇಲ್ನೋಟಕ್ಕೆ ಕಂಡುಬರುತ್ತಿರುವ ಸತ್ಯವಾಗಿದ್ದು, ಇಂತಹ ನೀಚ ಕೃತ್ಯ ಎಸಗಿದ ಸಮಾಜಘಾತುಕ ಶಕ್ತಿಗಳಿಗೆ ಶಿಕ್ಷೆ ಕಟ್ಟಿಟ್ಟ ಬುತ್ತಿ ಎಂದು ಕಾರಜೋಳ ಭರವಸೆ ನೀಡಿದರು.

'ಡಿಜೆಹಳ್ಳಿ, ಕೆಜೆಹಳ್ಳಿ ಗಲಭೆಯಲ್ಲಿ ಕಾಂಗ್ರೆಸ್‌ ಪಕ್ಷದ ಮುಖವಾಡ ಕಳಚಿದೆ': ಡಾ.ಸುಧಾಕರ್

ಕಾಂಗ್ರೆಸ್ ವಿರುದ್ಧ ವಾಗ್ದಾಳಿ:


ಇನ್ನು ಘಟನೆಗೆ ಸಂಬಂಧಿಸಿದಂತೆ ಪ್ರತಿಪಕ್ಷ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿರುವ ಗೋವಿಂದ್ ಕಾರಜೋಳ , ತಮ್ಮದೇ ಶಾಸಕನ ಮೇಲೆ ಭೀಕರ ದಾಳಿ ನಡೆದಿದ್ದರೂ ಅದನ್ನು ಖಂಡಿಸುವ ಶಕ್ತಿ ಕಾಂಗ್ರೆಸ್‌ಗೆ ಇಲ್ಲವಾಗಿದೆ ಎಂದು ಕಿಡಿಕಾರಿದರು.

ವೋಟ್ ಬ್ಯಾಂಕ್ ರಾಜಕಾರಣ ಮಾಡಿಕೊಂಡೇ ಬಂದ ಕಾಂಗ್ರೆಸ್, ದೇಶವನ್ನು ಅಧೋಗತಿಗೆ ತಳ್ಳಿದೆ. ಈಗಲಾದರೂ ಇಂತಹ ಕೀಳು ಮಟ್ಟದ ರಾಜಕಾರಣ ಬಿಟ್ಟು ಘಟನೆಯನ್ನು ಕಾಂಗ್ರೆಸ್ ಖಂಡಿಸಬೇಕು ಎಂದು ಕಾರಜೋಳ ಒತ್ತಾಯಿಸಿದರು.

ಡಿಜೆ ಹಳ್ಳಿ ಹಿಂಸಾಚಾರ: 'ತುಷ್ಟೀಕರಣ’ ತನ್ನ ಮೊದಲ ಆದ್ಯತೆ ಎಂದು ಕಾಂಗ್ರೆಸ್ ಸಾಬೀತುಪಡಿಸಿದೆ: ನಳಿನ್ ಕಿಡಿ!

ತನ್ನದೇ ಪಕ್ಷದ ಶಾಸಕರ ಮೇಲೆ ಹಲ್ಲೆ ನಡೆದಿದೆ. ಅಲ್ಲದೇ ಪೊಲೀಸರು ಹಾಗೂ ಪತ್ರಕರ್ತರ ಮೇಲೂ ದುಷ್ಕರ್ಮಿಗಳು ಹಲ್ಲೆ ನಡೆಸಿದ್ದಾರೆ. ಆದರೆ ಇದನ್ನು ಖಂಡಿಸುವ ಗೋಜಿಗೆ ಹೋಗದ ಕಾಂಗ್ರೆಸ್ ಅದೆಷ್ಟು ದುರ್ಬಲವಾಗಿದೆ ಎಂಬುದು ಸಾಬೀತಾಗುತ್ತದೆ ಎಂದು ಕಾರಜೋಳ ಹರಿಹಾಯ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ