ಆ್ಯಪ್ನಗರ

ಶಿಕ್ಷಣ ಕನ್ನಡ ಮಾಧ್ಯಮದಲ್ಲಿರಲಿ: ಸಿದ್ದರಾಮಯ್ಯ

ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಹಿಂದಿ ಹೇರಲು ಮುಂದಾಗಿರುವ ಕೇಂದ್ರ ಸರಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

Vijaya Karnataka Web 30 Jun 2019, 3:40 pm
ಬಾಗಲಕೋಟ: ಕನ್ನಡವನ್ನು ಮಾಧ್ಯಮವಾಗಿ ಕಲಿಯಬೇಕು, ಭಾಷೆಯಾಗಿ ಇಂಗ್ಲಿಷ್ ಅಭ್ಯಸಿಸಬೇಕು ಎಂದು ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ಧರಾಮಯ್ಯ ಪ್ರತಿಪಾತಿದಿಸಿದ್ದಾರೆ.
Vijaya Karnataka Web Siddaramaiah


ನಗರದಲ್ಲಿ ಭಾನುವಾರ ಕನ್ನಡ ಅಭಿವೃದ್ಧಿ ಪ್ರಾಧಿಕಾರದಿಂದ ಬೆಳಗಾವಿ ವಿಭಾಗ ಮಟ್ಟದ ಕನ್ನಡ ಮಾಧ್ಯಮ ವಿದ್ಯಾರ್ಥಿಗಳ ಪುರಸ್ಕಾರ ಸಮಾರಂಭದಲ್ಲಿ ಅವರು ಮಾತನಾಡಿದರು.

ಭಾಷೆ ಜ್ಞಾನಕ್ಕೆ ಪೂರಕವಾಗಿದೆ, ಆದರೆ ಮಾತೃಭಾಷೆ ಯ ಕಲಿಕೆ ಜ್ಞಾನದೊಂದಿಗೆ ಬುದ್ಧಿಮತ್ತೆ ಹೆಚ್ಚಿಸುತ್ತದೆ. ಕೇಂದ್ರ ಸರಕಾರ ರಾಷ್ಟ್ರೀಯ ಶಿಕ್ಷಣ ನೀತಿ ಮೂಲಕ ಹಿಂದಿ ಭಾಷೆ ಹೇರಿಕೆಗೆ ಮುಂದಾಗಿದೆ. ಈ ಬಗ್ಗೆ ನಾನು ವಿರೋಧ ವ್ಯಕ್ತಪಡಿಸಿದ್ದೇನೆ‌. ರಾಜ್ಯ ಸರಕಾರ ಕೂಡ ಈ ಬಗ್ಗೆ ಕೇಂದ್ರ ಸರಕಾರಕ್ಕೆ ಕಟುವಾದ ಶಬ್ದಗಳಲ್ಲಿ ಪತ್ರ ಬರೆದು ಪ್ರತಿರೋಧ ಪ್ರದರ್ಶಿಸಬೇಕು ಎಂದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ