ಬಾಗಲಕೋಟೆ: ಅಪ್ರಾಪ್ತೆಯೊಬ್ಬಳ ಮೇಲೆ ಯುವಕನೊಬ್ಬ ಅತ್ಯಾಚಾರ ಎಸಗಿದ್ದು ಮನನೊಂದ ಬಾಲಕಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಘಟನೆ ಜಿಲ್ಲೆಯ ಅಮೀನಗಡ ಪೊಲೀಸ್ ಠಾಣೆ ವ್ಯಾಪ್ತಿಯ ಭೀಮನಗಡ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಅಪ್ರಾಪ್ತ ಬಾಲಕಿಯನ್ನು ಆರೋಪಿ ಮಾರುತಿ ಬೂಮಣ್ಣವರ (21) ಎಂಬಾತ ಗ್ರಾಮದ ಹೊರವಲಯದಲ್ಲಿ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ. ಈ ಬಗ್ಗೆ ಯಾರಿಗಾದರೂ ಹೇಳಿದರೆ ಕೊಲೆ ಮಾಡುವುದಾಗಿ ಬೆದರಿಕೆ ಹಾಕಿ ಪರಾರಿಯಾಗಿದ್ದಾನೆ.
ಘಟನೆಯಿಂದ ಮನನೊಂದ ಬಾಲಕಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಈ ಕುರಿತು ಬಾಲಕಿಯ ಪೋಷಕರು ದೂರು ದಾಖಲಿಸಿದ್ದು ಅಮೀನಗಡ ಪೊಲೀಸರು ಆರೋಪಿಗಾಗಿ ಪತ್ತೆಗೆ ತನಿಖೆ ನಡೆಸಿದ್ದಾರೆ. ಅಮೀನಗಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಸ್ಥಳಕ್ಕೆ ಹುನಗುಂದ ಸಿಪಿಐ ಅಯ್ಯನಗೌಡ ಪಾಟೀಲ, ಅಮೀನಗಡ ಠಾಣೆ ಎಸ್ಐ ಎಂ.ಜಿ.ಕುಲಕರ್ಣಿ ಭೇಟಿ ನೀಡಿದ್ದರು.