ಆ್ಯಪ್ನಗರ

ದೈಹಿಕ ಶಿಕ್ಷಕ ಅಮಾನತು

ಬಾಗಲಕೋಟೆ: ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದ ವಿದ್ಯಾರ್ಥಿಗಳ ತಂಡವನ್ನು ಕರೆದುಕೊಂಡು ಹೋಗದೇ ನಿರ್ಲಕ್ಷ್ಯ ವಹಿಸಿದ ದೈಹಿಕ ಶಿಕ್ಷಕರೊಬ್ಬರನ್ನು ಸಸ್ಪೆಂಡ್‌ ಮಾಡಲಾಗಿದೆ.

Vijaya Karnataka 26 Nov 2019, 5:00 am
ಬಾಗಲಕೋಟೆ: ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದ ವಿದ್ಯಾರ್ಥಿಗಳ ತಂಡವನ್ನು ಕರೆದುಕೊಂಡು ಹೋಗದೇ ನಿರ್ಲಕ್ಷ್ಯ ವಹಿಸಿದ ದೈಹಿಕ ಶಿಕ್ಷಕರೊಬ್ಬರನ್ನು ಸಸ್ಪೆಂಡ್‌ ಮಾಡಲಾಗಿದೆ.
Vijaya Karnataka Web in mudhol taluk physical teacher suspension
ದೈಹಿಕ ಶಿಕ್ಷಕ ಅಮಾನತು


ಜಿಲ್ಲೆಯ ಮುಧೋಳ ತಾಲೂಕಿನ ಯಡಹಳ್ಳಿಯ ಕನ್ನಡ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಎಂ.ವಿ.ಜೈನಾಪುರ ಅಮಾನತುಗೊಂಡವರು. ಕರ್ತವ್ಯ ನಿರ್ಲಕ್ಷ್ಯದ ಆರೋಪದ ಮೇಲೆ ಜೈನಾಪುರ ಅವರನ್ನು ಅಮಾನತುಗೊಳಿಸಿ ಡಿಡಿಪಿಐ ಶ್ರೀಶೈಲ ಬಿರಾದಾರ ಆದೇಶ ಹೊರಡಿಸಿದ್ದಾರೆ.

ಜಿಲ್ಲಾಮಟ್ಟದ ಸ್ಕೌಟ್ಸ್‌ ಗೈಡ್ಸ್‌ ಗೀತಗಾಯನ ವಿಭಾಗದಲ್ಲಿಪ್ರಥಮ ಸ್ಥಾನ ಪಡೆದ ಶಾಲೆಯ ವಿದ್ಯಾರ್ಥಿಗಳ ತಂಡವನ್ನು ರಾಜ್ಯಮಟ್ಟದ ಸ್ಪರ್ಧೆಗೆ ಮೈಸೂರಿಗೆ ಕರೆದುಕೊಂಡು ಹೋಗಬೇಕಿತ್ತು. ಆದರೆ ಜೈನಾಪುರ ಅವರು ತಂಡ ಕರೆದುಕೊಂಡು ಹೋಗದ ಕಾರಣ ಜಿಲ್ಲಾಮಟ್ಟದಲ್ಲಿದ್ವಿತೀಯ ಸ್ಥಾನ ಗಳಿಸಿದ ತಂಡವನ್ನು ಸ್ಪರ್ಧೆಗೆ ಕಳುಹಿಸಲಾಯಿತು. ಮರು ದಿನ ಮತ್ತೆ ಜೈನಾಪುರ ಅವರು ಅಧಿಕಾರಿಗಳಿಗೆ ಒತ್ತಾಯ ಮಾಡಿ ಮೊದಲ ಸ್ಥಾನ ಪಡೆದ ತಂಡವನ್ನೂ ಕರೆದುಕೊಂಡು ಹೋಗಿದ್ದರು. ಜಿಲ್ಲೆಯಿಂದ ಒಂದೇ ತಂಡ ಸ್ಪರ್ಧೆಯಲ್ಲಿಭಾಗವಹಿಸಬೇಕಿತ್ತು, ಎರಡು ತಂಡಗಳು ಪಾಲ್ಗೊಂಡಿದ್ದರಿಂದ ಪ್ರಯಾಣ ಭತ್ಯೆ ನೀಡುವಾಗ ಅಧಿಕಾರಿಗಳೊಂದಿಗೆ ಜೈನಾಪುರ ಅವರು ಅನುಚಿತವಾಗಿ ವರ್ತಿಸಿದ್ದಾರೆ. ಈ ಹಿನ್ನೆಲೆಯಲ್ಲಿಇಲಾಖೆ ಗೌರವಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದರಿಂದ ಜೈನಾಪುರ ಅವರನ್ನು ಅಮಾನತುಗೊಳಿಸಲಾಗಿದೆ ಎಂದು ಡಿಡಿಪಿಐ ಆದೇಶದಲ್ಲಿತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ