ಆ್ಯಪ್ನಗರ

ಕೃಷ್ಣಾ ಪ್ರವಾಹ, ಪರಿಹಾರ ಮೊತ್ತ ಹೆಚ್ಚಿಸುವಂತೆ ಕೇಂದ್ರ ಸಚಿವರಿಗೆ ನಿರಾಣಿ ಮನವಿ

ಜಮಖಂಡಿ ತಾಲೂಕಿನಲ್ಲಿ ಕೃಷ್ಣಾ ನದಿಯಲ್ಲಿನ ಪ್ರವಾಹದಿಂದ ಭೂಮಿ ಫಲವತ್ತತೆ ಕಳೆದುಕೊಂಡಿದ್ದು, ಪರಿಹಾರದ ಮೊತ್ತವನ್ನು ಹೆಚ್ಚಳಗೊಳಿಸುವಂತೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಿಗೆ ಮುರುಗೇಶ ನಿರಾಣಿ ಮನವಿ ಸಲ್ಲಿಸಿದ್ದಾರೆ.

Vijaya Karnataka Web 12 Aug 2021, 9:03 pm

ಹೈಲೈಟ್ಸ್‌:

  • ಕೃಷಿ ಜಮೀನಿಗೆ ಪರಿಹಾರದ ಮೊತ್ತವನ್ನು ಹೆಚ್ಚಳಗೊಳಿಸುವಂತೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಿಗೆ ಮುರುಗೇಶ ನಿರಾಣಿ ಮನವಿ
  • ಜಮಖಂಡಿ ತಾಲೂಕಿನಲ್ಲಿ ಕೃಷ್ಣಾ ನದಿಯಲ್ಲಿನ ಪ್ರವಾಹದಿಂದ ಭೂಮಿ ಫಲವತ್ತತೆ ಕಳೆದುಕೊಂಡಿರುವುದರಿಂದ ಹೆಚ್ಚಿನ ಪರಿಹಾರ ನೀಡುವಂತೆ ಮನವಿ
  • ಹೊಸದಿಲ್ಲಿಯಲ್ಲಿ ಗುರುವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ನಿರಾಣಿ
ಹೈಲೈಟ್ಸ್‌ ಮಾತ್ರವೇ ಓದಲು ಆ್ಯಪ್‌ ಡೌನ್‌ಲೋಡ್‌ ಮಾಡಿ
Vijaya Karnataka Web Muruhesh Nirani
ಹೊಸದಿಲ್ಲಿಯಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರಿಗೆ ಗುರುವಾರ ಮನವಿ ಸಲ್ಲಿಸಿದ ಸಚಿವ ಮುರುಗೇಶ ನಿರಾಣಿ
ಬಾಗಲಕೋಟೆ: ಜಿಲ್ಲೆಯ ಜಮಖಂಡಿ ತಾಲೂಕಿನ ಕೃಷ್ಣಾ ನದಿಯಲ್ಲಿನ ಪ್ರವಾಹದಿಂದ ಭೂಮಿ ಫಲವತ್ತತೆ ಕಳೆದುಕೊಂಡಿದ್ದು , ಪರಿಹಾರದ ಮೊತ್ತ ಹೆಚ್ಚಳಗೊಳಿಸುವಂತೆ ಬೃಹತ್‌ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವರಿಗೆ ಮನವಿ ಸಲ್ಲಿಸಿದ್ದಾರೆ.
ಹೊಸದಿಲ್ಲಿಯಲ್ಲಿ ಗುರುವಾರ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರನ್ನು ಭೇಟಿ ಮಾಡಿದ ನಿರಾಣಿ "ಜಮಖಂಡಿ ಉಪ ವಿಭಾಗದಲ್ಲಿ ಸತತ ಪ್ರವಾಹದಿಂದ ಫಲವತ್ತಾದ ಜಮೀನು ಕೊಚ್ಚಿ ಹೋಗುತ್ತಿದೆ. ಪರಿಣಾಮ ಸರಿಯಾಗಿ ಬೆಳೆ ಬೆಳೆಯಲು ಸಾಧ್ಯವಾಗುತ್ತಿಲ್ಲ. ಒಂದೆಡೆ ಪ್ರವಾಹದಿಂದ ಹಾನಿಯಾದರೆ ಇನ್ನೊಂದೆಡೆ ಮಣ್ಣು ಸವಕಳಿಯಾಗುತ್ತಿದೆ. ತಾಲೂಕಿನ 14,051 ಹೆಕ್ಟೇರ್‌ ಪ್ರದೇಶದ ಪೈಕಿ 5,994 ಹೆಕ್ಟೇರ್‌ ಪ್ರದೇಶ ಸವಕಳಿಯಾಗಿದೆ," ಎಂದರು.

ಮಂಡ್ಯ ಅಕ್ರಮ ಗಣಿಗಾರಿಕೆ: ಪರಿಶೀಲಿಸಿ ಕ್ರಮ ಜರುಗಿಸುವಂತೆ ಮುರುಗೇಶ್ ನಿರಾಣಿಗೆ ಸುಮಲತಾ ಮನವಿ
"ಸದ್ಯ ಪ್ರತಿ ಹೆಕ್ಟೇರ್‌ಗೆ ತಲಾ 65 ಸಾವಿರ ರೂ. ಪರಿಹಾರ ನೀಡಲಾಗುತ್ತಿದೆ. ಸರಕಾರ ನೀಡುವ ಮೊತ್ತ ರೈತರ ಜೀವನ ನಿರ್ವಹಣೆಗೆ ಸಾಕಾಗುವುದಿಲ್ಲ. ಹೀಗಾಗಿ ಮೊತ್ತ ಹೆಚ್ಚಿಸಬೇಕು," ಎಂದು ಮನವಿ ಮಾಡಿದರು.

ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯಿಸಿ "ಕೃಷ್ಣಾ ನದಿ ಪ್ರವಾಹದಿಂದ ಸಾವಿರಾರು ಕುಟುಂಬಗಳು ತೊಂದರೆ ಅನುಭವಿಸುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಪರಿಹಾರ ಹೆಚ್ಚಳದ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ," ಎಂದು ಭರವಸೆ ನೀಡಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ