ಆ್ಯಪ್ನಗರ

ಬಾಗಲಕೋಟೆಯಲ್ಲಿ ಮಾಸ್ಕ್ ಡೇ ಆಚರಣೆ: ಕೊರೊನಾ ಬಗ್ಗೆ ಜಾಗೃತಿ ಮೂಡಿಸಲು ಕಾಲ್ನಡಿಗೆ ಜಾಥಾ

ಕೊರೊನಾವೈರಸ್‌ನ ಬಗ್ಗೆ ಜಾಗೃತಿ ಮೂಡಿಸಲು ಕರ್ನಾಟಕದಾದ್ಯಂತ ಇಂದು (ಜೂನ್ 18 ರಂದು) ಮಾಸ್ಕ್‌ ಡೇ ಯನ್ನು ಆಚರಿಸಲಾಗುತ್ತಿದೆ. ಇದರ ಅಂಗವಾಗಿ ಬಾಗಲಕೋಟೆಯಲ್ಲಿ ಕಾಲ್ನಡಿಗೆ ಜಾಗೃತಿ ಜಾಥಾ ಹಮ್ಮಿಕೊಳ್ಳಲಾಯಿತು.

Vijaya Karnataka Web 18 Jun 2020, 1:13 pm
ಬಾಗಲಕೋಟೆ: ಮಾಸ್ಕ್ ದಿನಾಚರಣೆ ಅಂಗವಾಗಿ ಜಿಲ್ಲಾಡಳಿತದಿಂದ‌ ಮಾಸ್ಕ್‌ ಡೇ ಯನ್ನು ಜೂನ್ 18 ರಂದು ಆಚರಿಸಲಾಯಿತು. ಇದರ ಅಂಗವಾಗಿ ಜಿಲ್ಲೆಯಲ್ಲಿ ಕಾಲ್ನಡಿಗೆ ಜಾಗೃತಿ ಜಾಥಾವನ್ನು ಹಮ್ಮಿಕೊಳ್ಳಲಾಯಿತು.
Vijaya Karnataka Web ಮಾಸ್ಕ್ ಡೇ


ಬಾಗಲಕೋಟೆ ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರ, ಸಿಇಓ ಗಂಗೂಬಾಯಿ ಮಾನಕರ ಮಾಸ್ಕ್ ಡೇ ಗೆ ಹಸಿರು ನಿಶಾನೆ‌ ತೋರುವ ಮೂಲಕ ಚಾಲನೆ ನೀಡಿದರು. ಕೊರೊನಾ ವೈರಸ್‌ನ ಬಗ್ಗೆ ಜಾಗೃತಿ ಮೂಡಿಸಲು ಕಾಲ್ನಡಿಗೆ ಜಾಥಾದಲ್ಲಿ ಅಧಿಕಾರಿ ಹಾಗೂ ಸಿಬ್ಬಂದಿ ವರ್ಗದವರು ಭಾಗಿಯಾಗಿದ್ದರು.
ಕೊರೊನಾ ನಿಯಂತ್ರಣಕ್ಕೆ ಜಾಗೃತಿ, ರಾಜ್ಯದಲ್ಲಿ ಇಂದು 'ಮಾಸ್ಕ್‌ ಡೇ' ಆಚರಣೆ

ಕೋವಿಡ್-19 ದಿಂದ‌ ದೂರವಿರಲು ಮಾಸ್ಕ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲಾಯಿತು. ಜಾಥಾದಲ್ಲಿ ಜಾಗೃತಿ ಫಲಕಗಳ ಪ್ರದರ್ಶನವನ್ನು ಮಾಡಲಾಯಿತು.

ಜಿ.ಪಂ ಉಪ ಕಾರ್ಯದರ್ಶಿ ಎ.ಜಿ.ತೋಟದ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎ.ಎನ್.ದೇಸಾಯಿ, ಆರ್.ಸಿ.ಎಚ್ ಅಧಿಕಾರಿ ಡಾ.ಬಿ.ಜಿ.ಹುಬ್ಬಳ್ಳಿ, ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವಿಜಯ ಕಂಠಿ ಸೇರಿದಂತೆ ಇತರರು ಭಾಗಿಯಾಗಿದ್ದರು.
ಮಾಸ್ಕ್ ಧರಿಸಿ ಕೊರೊನಾ ಓಡಿಸಿ: ಮಾಸ್ಕ್ ಡೇ ಗೆ ಬಿಎಸ್‌ವೈ ಚಾಲನೆ

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ