ಆ್ಯಪ್ನಗರ

ಬಾಗಲಕೋಟೆ: ಕೊರೊನಾ ಸೋಂಕಿಗೆ ಮತ್ತೊಂದು ಬಲಿ; ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆ

ಬಾಗಲಕೋಟೆ ಜಿಲ್ಲೆಯಲ್ಲಿ ಕೊರೊನಾ ಅಟ್ಟಹಾಸಕ್ಕೆ ಮತ್ತೆ ಒಬ್ಬರು ಬಲಿಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.

Vijaya Karnataka Web 28 Jun 2020, 1:02 pm
ಬಾಗಲಕೋಟೆ: ಕೊರೊನಾ ಮಹಾಮಾರಿ ದಿನೇ ದಿನೇ ತನ್ನ ಅಟ್ಟಹಾಸವನ್ನು ಮುಂದುವರಿಸುತ್ತಿದೆ. ದೇಶಾದ್ಯಂತ ಪ್ರತಿದಿನ ನೂರಾರು ಜನರು ಸತ್ತರೆ, ಸಾವಿರಾರು ಮಂದಿಯಲ್ಲಿ ಕೊರೊನಾ ಪಾಸಿಟಿವ್ ಕಾಣಿಸಿಕೊಳ್ಳುತ್ತಿದೆ. ಸರ್ಕಾರ ಮತ್ತು ಕೊರೊನಾ ವಾರಿಯರ್ಸ್ ಕೂಡ ಜನರಲ್ಲಿ ಜಾಗರೂಕರಾಗಿರುವಂತೆ ಪದೇ ಪದೇ ವಿನಂತಿಸಿಕೊಳ್ಳುತ್ತಿದ್ದಾರೆ.
Vijaya Karnataka Web ಕೊರೊನಾ ವೈರಸ್


ಈ ಮಧ್ಯೆ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಕೊರೊನಾದಿಂದಾಗಿ ಮೃತಪಟ್ಟವರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ.
ಮುಡಪಲಜೀವಿ ಗ್ರಾಮದ 55 ವರ್ಷದ ಪಿ-10642 ಕೊರೊನಾ ವೈರಸ್ ಸೋಂಕಿನಿಂದಾಗಿ ಮೃತಪಟ್ಟಿದ್ದಾರೆ.

ತೀವ್ರ ಉಸಿರಾಟದ ತೊಂದರೆಯಿಂದ ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಮೃತಪಟ್ಟ ವ್ಯಕ್ತಿಗೆ ಕಳೆದ ಜೂನ್ 26ರಂದು ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು. ಕೋವಿಡ್ ನಿಯಮಾವಳಿ ಪ್ರಕಾರ ಅಂತ್ಯ ಸಂಸ್ಕಾರ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಕ್ಯಾಪ್ಟನ್ ರಾಜೇಂದ್ರರವರು ಮಾದ್ಯಮ ಹೇಳಿಕೆ ನೀಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ