ಆ್ಯಪ್ನಗರ

ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ

ರಾಜ್ಯ ಸರಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಸರಕಾರದ ಕ್ರಮ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಘಟಕದಿಂದ ಸೋಮವಾರ ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಲಾಯಿತು.

Vijaya Karnataka Web 16 Jun 2020, 5:00 am
ಬಾಗಲಕೋಟೆ : ರಾಜ್ಯ ಸರಕಾರ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಹೊರಟಿರುವ ಸರಕಾರದ ಕ್ರಮ ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾಘಟಕದಿಂದ ಸೋಮವಾರ ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಲಾಯಿತು.
Vijaya Karnataka Web GREEN-BGK-15_41


ಸಂಘದ ಜಿಲ್ಲಾಧ್ಯಕ್ಷ ಶ್ರೀಶೈಲ ನಾಯಿಕ ನೇತೃತ್ವದಲ್ಲಿಪ್ರತಿಭಟನೆ ನಡೆಸಿದ ರೈತರು ಸಿಎಂಗೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಬರೆದ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿ ಮೂಲಕ ಸಲ್ಲಿಸಿದರು.

ಈ ವೇಳೆ ಮಾತನಾಡಿದ ಶ್ರೀಶೈಲ ನಾಯಿಕ ಮಾತನಾಡಿ, ಸರಕಾರ ಭೂ-ಸುಧಾರಣೆ ಕಾಯ್ದೆಗೆ ತಿದ್ದುಪಡಿ ತಂದು ಕಲಂ 79 ಹಾಗೂ 80ನ್ನು ತೆಗೆಯಲು ಸಚಿವ ಸಂಪುಟದಲ್ಲಿಒಪ್ಪಿಗೆ ಪಡೆದಿದೆ. ಕಂದಾಯ ಸಚಿವರು ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ತರುವುದಾಗಿ ತಿಳಿಸಿದ್ದಾರೆ. ಆದರೆ ಅಲ್ಲಿನ ತಿದ್ದುಪಡಿ ಕರಡಿನಲ್ಲಿನಮೂದಿಸಿರುವ ಕಾರಣಗಳು ಬಾಲಿಷವಾಗಿವೆ ಎಂದು ದೂರಿದರು.

ತಿದ್ದುಪಡಿಯಲ್ಲಿ79 ಹಾಗೂ 80 ಕಲಂನ್ನು ತೆಗೆದಿದ್ದೇ ಆದರೆ ಭೂ-ಸುಧಾರಣೆ ಕಾಯ್ದೆಯ ಅಸ್ಥಿತ್ವವೇ ಇರುವುದಿಲ್ಲ. ಕಾಯ್ದೆಯ ಮೂಲ ಉದ್ದೇಶ ಉಳುವವನೇ ಭೂಮಿ ಒಡೆಯ ಎಂಬ ಪರಿಕಲ್ಪನೆಗೆ ತಿಲಾಂಜಲಿ ಇಟ್ಟು ಉಳ್ಳವರು ಮಾತ್ರ ಭೂಮಿ ಹೊಂದಲು ಸಾಧ್ಯವಾಗುತ್ತದೆ. ರಾಜ್ಯದಲ್ಲಿಸಣ್ಣ ಹಿಡುವಳಿ ರೈತರೇ ಹೆಚ್ಚಿನ ಸಂಖ್ಯೆಯಲ್ಲಿದ್ದು ಅವರ ಬದುಕು ಬೀದಿಗೆ ಬೀಳಲಿದೆ. ರೈತಾಪಿ ಕೃಷಿ ಸಂಸ್ಕೃತಿ ಮಾಯವಾಗಿ ಬಂಡವಾಳಗಾರ ಕೃಷಿ ಸಂಸ್ಕೃತಿ ಬೆಳೆಯುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸಂಘದ ಬೀಳಗಿ ತಾಲೂಕು ಅಧ್ಯಕ್ಷ ಸಿದ್ದಪ್ಪ ಬಳಗಾನೂರ ಮಾತನಾಡಿ, ರೈತ ಹೋರಾಟದಿಂದ ಬಂದವರು, ಗೇಣಿದಾರರ ಪರ ಹೋರಾಟದಲ್ಲಿಭಾಗವಹಿಸಿದ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ರೈತರ ಹಿತಾಸಕ್ತಿ ಕಾಯುತ್ತೇವೆ ಎಂದು ಹೇಳುತ್ತಲೇ ತಿದ್ದುಪಡಿ ಮಸೂದೆಯನ್ನು ಸಾರ್ವಜನಿಕರ ಚರ್ಚೆಗೆ ಒಳಪಡಿಸಿಲ್ಲ. ಇದು ರೈತ ಕುಲಕ್ಕೆ ವಿಷ ಹಾಕಿದಂತಾಗಿದೆ. ಕೂಡಲೇ ತಿದ್ದುಪಡಿ ಕೈಬಿಡಬೇಕು ಎಂದು ಒತ್ತಾಯಿಸಿದರು.


ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ