ಆ್ಯಪ್ನಗರ

ಕೃಷ್ಣಾ ನದಿ ಹರಿವು ಹೆಚ್ಚಳ, ಮುನ್ನೆಚ್ಚರಿಕೆ

ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ನದಿ ತಟದ ಭಾಗದಲ್ಲಿ ಪ್ರವವಾಹ ಪರಿಸ್ಥಿತಿ ಎದುರಾಗುತ್ತಿದೆ.

Vijaya Karnataka Web 30 Jul 2019, 12:54 pm
ಬಾಗಲಕೋಟ: ಭಾರಿ ಮಳೆಯಿಂದಾಗಿ ಜಿಲ್ಲೆಯಲ್ಲಿ ಕೃಷ್ಣಾ ನದಿ ಮೈದುಂಬಿ ಹರಿಯುತ್ತಿದ್ದು, ಅಧಿಕಾರಿಗಳು ನೀರಿನ ಹರಿವಿನ ಮೇಲೆ ಕಣ್ಗಾವಲು ವಹಿಸಿದ್ದಾರೆ.
Vijaya Karnataka Web krishna


ಜಿಲ್ಲೆಯ ಜಮಖಂಡಿ ತಾಲೂಕಿನಲ್ಲಿ ಕೃಷ್ಣಾ ನದಿಯಲ್ಲಿ ಕಳೆದ ನಾಲ್ಕು ದಿನಗಳಿಂದ ಒಳಹರಿವು ಹೆಚ್ಚಾಗಿದೆ. ಮಹಾರಾಷ್ಟ್ರ ಹಾಗೂ ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ನದಿ ಮೈದುಂಬಿ ಹರಿಯುತ್ತಿದೆ. ಈಗಾಗಲೇ ಮಹಾರಾಷ್ಟ್ರದ ನರಸೋಬವಾಡಿ ಸೇರಿದಂತೆ ನದಿ ತಟದ ಪ್ರದೇಶಗಳಲ್ಲಿ ಪ್ರವಾಹ ಸ್ಥಿತಿಯಿದೆ.

ಮಹಾರಾಷ್ಟ್ರದ ಜಿಲ್ಲೆಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆ ಜಿಲ್ಲೆಯಲ್ಲೂ ಕೃಷ್ಣಾ ನದಿಗೆ ಅಪಾರ ನೀರು ಹರಿದು ಬರಲು ಕಾರಣವಾಗಿದೆ. ಇನ್ನು ಬೆಳಗಾವಿ ಜಿಲ್ಲೆಯ ಅಥಣಿ, ರಾಯಬಾಗ ತಾಲೂಕಿನಲ್ಲೂ ಮಳೆಯಾಗಿದ್ದ ನೀರಿನ ಒಳ ಹರಿವು ಹೆಚ್ಚಾಗಿದೆ. ಬೆಳಗಾವಿ ಜಿಲ್ಲೆಯಿಂದ ಕೃಷ್ಣಾ ನದಿಗೆ ಸೋಮವಾರ 92, 500 ಕ್ಯೂಸೆಕ್‌ನಷ್ಟು ನೀರು ಹರಿದಿದೆ. ಹಿಪ್ಪರಗಿ ಬ್ಯಾರೇಜ್‌ನಿಂದ 91, 500 ಕ್ಯೂಸೆಕ್‌ ನೀರು ಹೊರಬಿಟ್ಟು ಪರಿಸ್ಥಿತಿ ನಿಭಾಯಿಸಲಾಗುತ್ತಿದೆ. ಹಿಪ್ಪರಗಿ ಬ್ಯಾರೇಜ್‌ನ ಗರಿಷ್ಠ ನೀರು ಸಂಗ್ರಹ ಪ್ರಮಾಣ 3.66 ಟಿಂಎಸಿಯಷ್ಟಿದ್ದು, ಈಗಾಗಲೇ 2.86 ಟಿಎಂಸಿ ನೀರು ಭರ್ತಿಯಾಗಿದೆ. ಆಲಮಟ್ಟಿ ಜಲಾಶಯದಿಂದ 90 ಸಾವಿರ ಕ್ಯೂಸೆಕ್‌ ನೀರು ಹೊರಬಿಡಲಾಗುತ್ತಿರುವುದರಿಂದ ಸದ್ಯ ಪ್ರವಾಹದ ಸ್ಥಿತಿ ಎದುರಾಗಿಲ್ಲ.

ಬೆಳಗಾವಿ ಜಿಲ್ಲೆಯಿಂದ ಕೃಷ್ಣಾ ನದಿಗೆ 1 ಲಕ್ಷ ಕ್ಯೂಸೆಕ್‌ಗಿಂತ ಹೆಚ್ಚಿನ ನೀರು ಹರಿದುಬಂದರೆ ಜಮಖಂಡಿ ತಾಲೂಕಿನ 10 ಗ್ರಾಮಗಳಲ್ಲಿ ಪ್ರವಾಹ ಸ್ಥಿತಿ ಎದುರಾಗುತ್ತದೆ. ಹಿಪ್ಪರಗಿ ಬ್ಯಾರೇಜ್‌ನಲ್ಲಿ ಒಳಹರಿವಿನ ಪ್ರಮಾಣ ಗಮನಿಸಿ ಆಲಮಟ್ಟಿ ಡ್ಯಾಂನಿಂದ ನೀರು ಹೊರಬಿಡಲಾಗುತ್ತಿದೆ. ಮಹಾರಾಷ್ಟ್ರದಲ್ಲಿ ಮಳೆ ಹೆಚ್ಚಾದರೆ ಕೃಷ್ಣಾ ನದಿಯ ಒಳಹರಿವು ಹೆಚ್ಚಳಗೊಳ್ಳುವ ಸಾಧ್ಯತೆಯಿದೆ. 'ಅಧಿಕಾರಿಗಳು ನೀರಿನ ಒಳಹರಿವಿನ ಪ್ರಮಾಣದ ಮೇಲೆ ನಿರಂತರವಾಗಿ ಗಮನ ಹರಿಸಿದ್ದಾರೆ. ಪ್ರವಾಹ ಸ್ಥಿತಿ ಎದುರಾದರೆ ಪರಿಹಾರ ಕಾರ್ಯ ಕೈಗೊಳ್ಳಲು ಬೋಟ್‌ಗಳನ್ನು ಸಿದ್ಧಪಡಿಸಲಾಗಿದೆ' ಎಂದು ಜಮಖಂಡಿ ಉಪವಿಭಾಗಾಧಿಕಾರಿ ಇಕ್ರಂ ತಿಳಿಸಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ