ಆ್ಯಪ್ನಗರ

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ಜನರು ಕ್ಯೂನಲ್ಲಿದ್ದಾರೆ ಎಂದ ಸತೀಶ್ ಜಾರಕಿಹೊಳಿ

ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ಜನರು ಕ್ಯೂನಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. ಸಿಎಂ ಪಟ್ಟಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಪೈಪೋಟಿ ಹಿನ್ನೆಲೆಯಲ್ಲಿ ಇವರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.

Vijaya Karnataka 7 Jan 2021, 4:18 pm
ಬಾಗಲಕೋಟೆ: ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕೆ ಜನರು ಕ್ಯೂನಲ್ಲಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅಚ್ಚರಿಯ ಹೇಳಿಕೆ ನೀಡಿದ್ದಾರೆ. ಬಾಗಲಕೋಟೆಯಲ್ಲಿ ಗುರುವಾರ ಮಾತನಾಡಿದ ಅವರು ಸಚಿವ ಶ್ರೀರಾಮುಲು ಹೇಳಿಕೆಗೆ ತಿರುಗೇಟು ನೀಡಿದರು.
Vijaya Karnataka Web sateesh jarakiholi


ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಡುವೆ ಪೈಪೋಟಿ ಇದೆ ಎಂದು ಸಚಿವ ಬಿ. ಶ್ರಿರಾಮುಲು ಹೇಳಿದ್ದರು. ಸಚಿವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸತೀಶ್ ಜಾರಕಿಹೊಳಿ ಹೌದು, ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕಾಗಿ ಜನರು ಕ್ಯೂನಲ್ಲಿ ಇದ್ದಾರೆ ಎಂದರು.

ಬಿಜೆಪಿ ಮಾದರಿಯಲ್ಲಿ ‘ಕೇಡರ್‌’ ಮೊರೆ ಹೋದ ಕಾಂಗ್ರೆಸ್‌, ಸತೀಶ್ ಜಾರಕಿಹೊಳಿಗೆ ಸಂಘಟನೆ ಹೊಣೆ?

ಎಲ್ಲರಿಗೂ ಮುಖ್ಯಮಂತ್ರಿಯಾಗಬೇಕೆಂಬ ಆಸೆ ಇರುತ್ತದೆ. ಕೆಲವರು ಬಹಿರಂಗವಾಗಿ ಹೇಳುತ್ತಾರೆ, ಕೆಲವರು ಹೇಳುವುದಿಲ್ಲ ಅಷ್ಟೆ. ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಾಕಷ್ಟು ಜನರು ಕ್ಯೂನಲ್ಲಿದ್ದಾರೆ ಎಂಬ ಅಚ್ಚರಿಗೆ ಹೇಳಿಕೆಯನ್ನು ನೀಡುವ ಮೂಲಕ ಗಮನ ಸೆಳೆದಿದ್ದಾರೆ. ಮುಖ್ಯಮಂತ್ರಿ ರೇಸ್‌ನಲ್ಲಿ ಕಣ್ಣೆದುರಿಗೆ ಡಿಕೆಶಿ ಹಾಗೂ ಸಿದ್ದರಾಮಯ್ಯ ಕಾಣುತ್ತಾರೆ. ಆದರೆ ಹಿಂದೆ ಸಾಕಷ್ಟು ಜನರು ಇದ್ದಾರೆ. ಅವರಿಬ್ಬರು ಸಿಎಂ ಆದ ಬಳಿಕ ನಾವು ಆಗುತ್ತೇವೆ ಅಂದಿದ್ದೇವೆ ಎಂದರು.

ಮುಂದಿನ ಸಿಎಂ ನಾನೇ ಎಂದು ಈ ಹಿಂದೆ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿಸಿದ್ದರು. ಆದರೆ ಇದೀಗ ಹೈಕಮಾಂಡ್‌ ಸೂಚನೆ ಹಿನ್ನೆಲೆಯಲ್ಲಿ ಇಬ್ಬರು ನಾಯಕರು ಬಹಿರಂಗ ಹೇಳಿಕೆಯನ್ನು ನೀಡುತ್ತಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ