ಆ್ಯಪ್ನಗರ

ಬಾಗಲಕೋಟೆ: ಬಿಸಿಯೂಟ ಸೇವಿಸಿ 30 ವಿದ್ಯಾರ್ಥಿಗಳು ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬಾಗಲಕೋಟೆ ಜಿಲ್ಲೆಯ ರನ್ನ ಬೆಳಗಲಿ ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿನಿಯರು ಬಿಸಿಯೂಟ ಸೇವಿಸಿ ಅಸ್ವಸ್ಥರಾಗಿರುವ ಘಟನೆ ನಡೆದಿದೆ. ಪಲಾವ್ ಸೇವಿಸಿದ ನಂತರ ವಿದ್ಯಾರ್ಥಿನಿಯರು ವಾಂತಿ ಮಾಡಿಕೊಂಡಿದ್ದಾರೆ.

Vijaya Karnataka Web 21 Dec 2019, 3:18 pm
ಬಾಗಲಕೋಟೆ: ಬಿಸಿಯೂಟ ಸೇವಿಸಿದ 30 ವಿದ್ಯಾರ್ಥಿಗಳು ಅಸ್ವಸ್ಥರಾಗಿರುವ ಘಟನೆ ಬಾಗಲಕೋಟೆ ಜಿಲ್ಲೆಯ ರನ್ನ ಬೆಳಗಲಿ ಶಾಲೆಯಲ್ಲಿ ಶನಿವಾರ ನಡೆದಿದೆ.
Vijaya Karnataka Web bagalkot


ರನ್ನ ಬೆಳಗಲಿಯ ಸರಕಾರಿ ಕನ್ನಡ ಹೆಣ್ಣು ಮಕ್ಕಳ ಶಾಲೆಯ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದು ಮುಧೋಳ ದ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಸಿಯೂಟದ ಪಲಾವ್ ಸೇವಿಸಿದ ನಂತರ ವಿದ್ಯಾರ್ಥಿನಿಯೊಬ್ಬಳು ವಾಂತಿ ಮಾಡಿಕೊಂಡಿದ್ದಾಳೆ‌. ಆಗ ಇತರ ವಿದ್ಯಾರ್ಥಿನಿಯರೂ ವಾಂತಿ ಮಾಡಿಕೊಂಡಿದ್ದಾರೆ.

ಕೂಡಲೇ ಶಿಕ್ಷಕರು ವಿದ್ಯಾರ್ಥಿನಿಯರನ್ನು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆ ತಂದಿದ್ದಾರೆ. ಎಲ್ಲ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡುವುದು ಅಸಾಧ್ಯ ಎಂದಾಗ ಮುಧೋಳ ಆಸ್ಪತ್ರೆ ಗೆ ದಾಖಲಿಸಲಾಗಿದೆ.

ಜಿಲ್ಲೆಬಿಸಿಯೂಟದಲ್ಲಿಪ್ರಥಮ ಮೇನು ಕೆಲವೆಡೆ ಅನ್ನ ಸಾರು!

ವಿದ್ಯಾರ್ಥಿನಿಯರಿಗೆ ಸಲೈನ್ ಅಳವಡಿಸಲಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಪೋಷಕರು ಅಡುಗೆ ತಯಾರಿಸುವ ಸಿಬ್ಬಂದಿಯೊಂದಿಗೆ ವಾಗ್ವಾದ ನಡೆಸಿದ್ದಾರೆ. ಮುಧೋಳ ಠಾಣೆಯ ಪೊಲೀಸರು ಶಾಲೆಯ ಬಿಸಿಯೂಟ ತಯಾರಿಸುವ ಮಹಿಳೆಯರನ್ನು ತೀವ್ರ ವಿಚಾರಣೆ ನಡೆಸಿದ್ದು, ಕಾರಣವೇನೆಂದು ತಿಳಿದುಬಂದಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ