ಆ್ಯಪ್ನಗರ

ಸರಕಾರ ಐದು ವರ್ಷ ಪೂರೈಸಲಿದೆ

ಬಾಗಲಕೋಟ: 'ಸಮ್ಮಿಶ್ರ ಸರಕಾರ ಐದು ವರ್ಷ ಪೂರೈಸಲಿದ್ದು, ಯಾವುದೇ ತೊಂದರೆಯಿಲ್ಲ' ಎಂದು ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಹೇಳಿದರು.

Vijaya Karnataka 30 Aug 2018, 5:00 am
ಬಾಗಲಕೋಟ: 'ಸಮ್ಮಿಶ್ರ ಸರಕಾರ ಐದು ವರ್ಷ ಪೂರೈಸಲಿದ್ದು, ಯಾವುದೇ ತೊಂದರೆಯಿಲ್ಲ' ಎಂದು ಮಾಜಿ ಸಿಎಂ, ಬಾದಾಮಿ ಶಾಸಕ ಸಿದ್ದರಾಮಯ್ಯ ಹೇಳಿದರು.
Vijaya Karnataka Web the government will provide five years
ಸರಕಾರ ಐದು ವರ್ಷ ಪೂರೈಸಲಿದೆ


ಜಿಲ್ಲೆಯ ಬಾದಾಮಿಯಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು 'ಸಮ್ಮಿಶ್ರ ಸರಕಾರ ಪತನವಾಗಿ ಸಿಎಂ ಆಗುತ್ತೇನೆ ಎಂದು ಯಡಿಯೂರಪ್ಪ ಹಗಲು ಕನಸು ಕಾಣುತ್ತಿದ್ದಾರೆ. ಆದರೆ ಅದು ಸಾಧ್ಯವಿಲ್ಲ, ನಾನು ಸಿಎಂ ಆಗಬೇಕೆಂದು ಕಾಂಗ್ರೆಸ್‌ನ ಕೆಲ ಶಾಸಕರು ಹೇಳಿದ್ದಾರೆ. ನಮ್ಮ ಶಾಸಕರು ನನ್ನ ಮೇಲಿನ ಅಭಿಮಾನದಿಂದ ಹೇಳಿದ್ದಾರೆ, ಜೆಡಿಎಸ್‌ ಶಾಸಕರು ಹೀಗೆ ಹೇಳಿಲ್ಲ. ಇದು ಕುಮಾರಸ್ವಾಮಿಯವರಿಗೆ ಇರಿಸು ಮುರುಸು ಮಾಡುವುದಿಲ್ಲ. ನಾನು ಮುಂದಿನ ವಿಧಾನಸಭೆ ಚುನಾವಣೆ ನಂತರ ಮುಖ್ಯಮಂತ್ರಿಯಾಗುತ್ತೇನೆ ಎಂದು ಹೇಳಿದ್ದೇನೆ' ಎಂದು ಸಮರ್ಥಿಸಿಕೊಂಡರು.

ಕಾಂಗ್ರೆಸ್‌ ಶಾಸಕರು ಬಿಜೆಪಿ ಸೇರಲಿದ್ದಾರೆ ಎಂಬ ಬಿಜೆಪಿ ಮುಖಂಡರ ಹೇಳಿಕೆಗೆ ಪ್ರತಿಕ್ರಿಯಿಸಿ 'ನಮ್ಮ ಪಕ್ಷದ ಯಾವ ಶಾಸಕರೂ ಬಿಜೆಪಿ ಸಂಪರ್ಕದಲ್ಲಿಲ್ಲ, ಅವರ ಶಾಸಕರೇ ನಮ್ಮ ಸಂಪರ್ಕದಲ್ಲಿದ್ದಾರೆ' ಎಂದರು. ಸಿದ್ದರಾಮಯ್ಯಗೆ ರೈತರ ಬಗ್ಗೆ ಕಾಳಜಿಯಿಲ್ಲ ಎಂಬ ಶ್ರೀರಾಮುಲು ಆರೋಪಕ್ಕೆ 'ಶ್ರೀರಾಮುಲುಗೆ ಭಾಷೆ, ಸಂಸ್ಕೃತಿ ಎಂದರೆ ಏನು ಎಂದು ಗೊತ್ತಿಲ್ಲ. ಬಳ್ಳಾರಿ ಹಾಗೂ ಮೊಳಕಾಲ್ಮೂರನಲ್ಲಿ ಅವರು ಏನು ಅಭಿವೃದ್ಧಿ ಮಾಡಿದ್ದಾರೆ ಎಂಬುದು ಗೊತ್ತಿದೆ. ಅಭಿವೃದ್ಧಿ ಏನಿದ್ದರೂ ಕಾಂಗ್ರೆಸ್‌ನಿಂದ ಮಾತ್ರ ಸಾಧ್ಯ' ಎಂದು ತಿಳಿಸಿದರು.

ಫೋನ್‌ ಕದ್ದಾಲಿಕೆ ಮಾಡಲಾಗುತ್ತಿದೆ ಎಂಬ ಯಡಿಯೂರಪ್ಪ ಆರೋಪಕ್ಕೆ ಉತ್ತರಿಸಿದ ಅವರು 'ಫೋನ್‌ ಕದ್ದಾಲಿಕೆಯಾಗಿದೆ ಎಂದು ಹೇಳಿದವರು ಯಾರು ?. ನನ್ನದು ಯಾವುದೇ ಫೋನ್‌ ಕದ್ದಾಲಿಕೆಯಾಗಿಲ್ಲ. ಯಾರು ಹೇಳಿದ್ದಾರೋ ಅವರನ್ನೇ ಕೇಳಿ' ಎಂದರು. ಮೈತ್ರಿ ಸರಕಾರ ನೂರು ದಿನ ಪೂರೈಸಿದ ಕುರಿತು ಕೇಳಿದ ಪ್ರಶ್ನೆಗೆ ಅವರು ಉತ್ತರಿಸಲಿಲ್ಲ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ