ಆ್ಯಪ್ನಗರ

ಪರಿಹಾರ ಕಾರ್ಯಾಚರಣೆಗೆ ರಾಜ್ಯ ಸರಕಾರ ಸದಾ ಬದ್ಧ: ಯಡಿಯೂರಪ್ಪ

ಸಂತ್ರಸ್ತರ ಪರಿಹಾರ ಕೇಂದ್ರಕ್ಕೂ ಮುಖ್ಯಮಂತ್ರಿ ಭೇಟಿ ನೀಡಿ, ಕುಂದುಕೊರತೆಗಳನ್ನು ಆಲಿಸಿದರು. ಬಾಗಲಕೋಟೆ ಜಿಲ್ಲೆಯ ಕೃಷ್ಣಾ, ಘಟಪ್ರಭಾ ನದಿ ವ್ಯಾಪ್ತಿಯಲ್ಲಿ ಯಡಿಯೂರಪ್ಪ ವೈಮಾನಿಕ ಸಮೀಕ್ಷೆ ನಡೆಸಿ, ಪರಿಸ್ಥಿತಿ ಅವಲೋಕಿಸಿದರು.

Vijaya Karnataka Web 9 Aug 2019, 6:36 pm
ಬಾಗಲಕೋಟ: ಆಲಮಟ್ಟಿ ಜಲಾಶಯದ ಎತ್ತರವನ್ನು 524 ಮೀಟರ್‌ಗೆ ಹೆಚ್ಚಿಸುವ ಕುರಿತು ಕೇಂದ್ರ ಸರ್ಕಾರದ ಜತೆ ಮಾತುಕತೆ ನಡೆಸಲಾಗಿದ್ದು, ಸಕಾರತ್ಮಕ ಪ್ರತಿಕ್ರಿಯೆ ದೊರೆತಿದೆ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.
Vijaya Karnataka Web ಪಟ್ಟದಕಲ್ಲು ದೇವಸ್ಥಾನ
ಪಟ್ಟದಕಲ್ಲು ದೇವಸ್ಥಾನ


ಬಾಗಲಕೋಟೆ ಜಿಲ್ಲೆಯ ಮುದೋಳದಲ್ಲಿ ಜಲಾವೃತ್ತಗೊಂಡಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದರು.

ಬಾಗಲಕೋಟೆ ಜಿಲ್ಲೆಯಲ್ಲಿ ಪ್ರವಾಹ ಪರಿಹಾರಕ್ಕಾಗಿ 10 ಕೋಟಿ ರೂಪಾಯಿ ತುರ್ತು ನೆರವು ಬಿಡುಗಡೆ ಮಾಡಲಾಗಿದೆ. ಪ್ರವಾಹ ಸಂತ್ರಸ್ತರಿಗೆ ಎಲ್ಲ ನೆರವು ನೀಡಲು ಸರಕಾರ ಬದ್ಧವಾಗಿದೆ. ಅಧಿಕಾರಿಗಳು ಹಗಲಿರುಳು ಶ್ರಮಿಸಿ ಪರಿಹಾರ ಕಾರ್ಯದಲ್ಲಿ ತೊಡಗಿದ್ದಾರೆ ಎಂದರು.

ಬಾಗಲಕೋಟೆ ಜಿಲ್ಲೆಯಲ್ಲಿ 63 ಹಳ್ಳಿಗಳು ಜಲಾವೃತ್ತಗೊಂಡಿವೆ, 10 ಸಾವಿರ ಹೆಕ್ಟೇರ್ ಪ್ರದೇಶದ ಬೆಳೆ ನಾಶವಾಗಿದೆ. ಪ್ರವಾಹ ಪರಿಹಾರಕ್ಕಾಗಿ ಇನ್ಪೋಸಿಸ್ ಮುಖ್ಯಸ್ಥೆ ಸುಧಾ ಮೂರ್ತಿ 10 ಕೋಟಿ. ಮಾಜಿ ಸಚಿವ ಮುರೇಗೇಶ್ ನಿರಾಣಿ ಒಂದು ಕೋಟಿ ರೂಪಾಯಿ ಹಾಗೂ ಕೆಎಂಎಫ್ ಒಂದು ಕೋಟಿ ರೂಪಾಯಿ ಹಣ ನೀಡಿದ್ದು, ಪ್ರವಾಹ ಸಂತ್ರಸ್ತರಿಗೆ ನೆರವು ನೀಡುವ ದಾನಿಗಳು ಮುಖ್ಯಮಂತ್ರಿಯವರ ಪರಿಹಾರ ನಿಧಿಗೆ ದೇಣಿಗೆ ನೀಡುವಂತೆ ಮನವಿ ಮಾಡಿದರು.

ಶನಿವಾರದಿಂದ ಮಲೆನಾಡು ಭಾಗದಲ್ಲಿ ಪ್ರವಾಸ ಕೈಗೊಂಡು ಪ್ರವಾಹ ಪರಿಸ್ಥಿತಿ ಪರಿಶೀಲಿಸಲಾಗುವುದು, ಈಗಾಗಲೇ ಶಾಸಕರ ತಂಡ ರಚಿಸಲಾಗಿದ್ದು, ಪ್ರವಾಹಪೀಡಿತ ಪ್ರದೇಶಗಳಲ್ಲಿ ಪರಿಹಾರ ಕಾರ್ಯ ನಡೆಯುತ್ತಿದೆ ಎಂದು ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ತಿಳಿಸಿದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ