ಆ್ಯಪ್ನಗರ

ಉದ್ಯೋಗ ಮೇಳ

ಬೆಳಗಾವಿ: ನಗರದ ಚವಾಟ ಗಲ್ಲಿಯ ಮರಾಠ ಮಂಡಳ ಮಾಧ್ಯಮಿಕ ಶಾಲೆಯಲ್ಲಿ ಮಾ.6 ಮತ್ತು 7ರಂದು ಎರಡು ದಿನಗಳ ಕಾಲ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮ್ಯಾನ್ ಯುನೈಟೆಡ್ ಸಂಸ್ಥೆಯ ಮುಖ್ಯಸ್ಥ ರವೀಂದ್ರ ಕಂಗ್ರಾಳಕರ ಹೇಳಿದರು.

ವಿಕ ಸುದ್ದಿಲೋಕ 5 Mar 2016, 3:09 am
ಬೆಳಗಾವಿ: ನಗರದ ಚವಾಟ ಗಲ್ಲಿಯ ಮರಾಠ ಮಂಡಳ ಮಾಧ್ಯಮಿಕ ಶಾಲೆಯಲ್ಲಿ ಮಾ.6 ಮತ್ತು 7ರಂದು ಎರಡು ದಿನಗಳ ಕಾಲ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಮ್ಯಾನ್ ಯುನೈಟೆಡ್ ಸಂಸ್ಥೆಯ ಮುಖ್ಯಸ್ಥ ರವೀಂದ್ರ ಕಂಗ್ರಾಳಕರ ಹೇಳಿದರು.
Vijaya Karnataka Web
ಉದ್ಯೋಗ ಮೇಳ


ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮರಾಠ ಮಂಡಳ ಸಂಸ್ಥೆಯ ಅಂಗಸಂಸ್ಥೆಗಳು ಹಾಗೂ ಪುಣೆಯ ಮ್ಯಾನ್ ಯುನೈಟೆಡ್ ಸಂಸ್ಥೆಯ ಆಶ್ರಯದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ. ಎರಡು ದಿನಗಳ ಕಾಲ ಬೆಳಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ. ಬೆಳಗಾವಿ, ಹುಬ್ಬಳಿ, ಧಾರವಾಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಅಭ್ಯರ್ಥಿಗಳು ಹೆಸರು ನೊಂದಾಯಿಸಬಹುದು. ಎಸ್‌ಎಸ್‌ಎಲ್‌ಸಿ ಪಾಸಾದವರು, ಯಾವುದೇ ವಿಷಯದಲ್ಲಿ ಪದವಿ ಪಡೆದವರು, ಐಟಿಐ, ಡಿಪ್ಲೊಮಾ, ಸ್ನಾತಕೋತ್ತರ ಪದವಿ, ತಾಂತ್ರಿಕ ಪದವಿ, ವ್ಯವಸ್ಥಾಪನ ಪದವಿ, ಮತ್ತಿತರರು ಪದವಿ ಪಡೆದವರು ಮೇಳದಲ್ಲಿ ಭಾಗವಹಿಸಬಹುದು ಎಂದರು. ಸುದ್ದಿಗೋಷ್ಠಿಯಲ್ಲಿ ಅಲ್ಕಾ ಮುತ್ತೆಕರ, ಎಸ್.ಜಿ. ಸೊನ್ನದ ಮತ್ತಿತರರು ಉಪಸ್ಥಿತರಿದ್ದರು.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ